ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ 3-4 ದಿನ ಮಳೆ ಬೀಳುವ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಐದಾರು ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಬಹುದು ಹಾಗೂ ಇನ್ನೂ ಕೆಲವು ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 4ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು -ಸಿಡಿಲಿನಿಂದ ಕೂಡಿದ ಮಳೆಯಾಗಬಹುದು. ಅಲ್ಲದೆ, … Continued

ಆಘಾತಕಾರಿ…| ಗಂಡನ ಸಾಲಕ್ಕೆ ಹೆಂಡತಿಯನ್ನು ಒತ್ತೆಯಾಳಾಗಿ ಇರಿಸಿಕೊಂಡ ಬ್ಯಾಂಕ್‌ ; ಹಣದ ಕಂತು ಕೊಟ್ಟ ಬಳಿಕವೇ ಮಹಿಳೆಯ ಬಿಡುಗಡೆ…!

ಆಘಾತಕಾರಿ ವಿದ್ಯಮಾನಕ್ಕೆ ತಮಿಳುನಾಡಿನ ಖಾಸಗಿ ಬ್ಯಾಂಕೊಂದು ಸಾಕ್ಷಿಯಾಗಿದೆ. ಗ್ರಾಹಕನೊಬ್ಬ ತಾನು ಪಡೆದ ಸಾಲ ವಾಪಸ್ ಮಾಡಲಿಲ್ಲವೆಂದು ಬ್ಯಾಂಕ್ ಉದ್ಯೋಗಿ ಆತನ ಹೆಂಡತಿಯನ್ನೇ ಅಡವಾಗಿ ಇಟ್ಟುಕೊಂಡ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ…! ಸೇಲಂ ಜಿಲ್ಲೆಯ ವಝಪ್ಪಾಡಿಯ ಖಾಸಗಿ ಬ್ಯಾಂಕ್‌ನ ಉದ್ಯೋಗಿಯೊಬ್ಬರು ಕೂಲಿ ಕಾರ್ಮಿಕನ ಪತ್ನಿಯನ್ನು ಬ್ಯಾಂಕ್‌ಗೆ ಕರೆದೊಯ್ದು ಪತಿ ತಾನು ಪಡೆದ ಸಾಲದ ಕಂತನ್ನು ಪಾವತಿಸುವ ವರೆಗೂ … Continued

ರೋಹಿತ್ ವೇಮುಲಾ ದಲಿತನಲ್ಲ : ಪೊಲೀಸರ ಅಂತಿಮ ವರದಿ ; ಎಲ್ಲ ಆರೋಪಿಗಳಿಗೆ ಕ್ಲೀನ್ ಚಿಟ್

ಹೈದರಾಬಾದ್: ತೆಲಂಗಾಣ ಪೊಲೀಸರು ರೋಹಿತ್ ವೇಮುಲ (Rohith Vemula) ಸಾವಿನ ಪ್ರಕರಣವನ್ನು ಶುಕ್ರವಾರ ಮುಕ್ತಾಯಗೊಳಿಸಿದ್ದಾರೆ. ಪ್ರಕರಣದಲ್ಲಿನ ಎಲ್ಲಾ ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿದ್ದಾರೆ. ಪೊಲೀಸರು ಸಲ್ಲಿಸಿದ ಅಂತಿಮ ವರದಿಯಲ್ಲಿ ರೋಹಿತ್ ವೇಮುಲ ದಲಿತನೇ ಅಲ್ಲ. ಆತ ತನ್ನ ನಿಜವಾದ ಜಾತಿಯ ಗುರುತು ಪತ್ತೆಯಾಗುತ್ತದೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಪ್ರತಿಪಾದಿಸಿದ್ದಾರೆ. ಈ ಹೇಳಿಕೆಯನ್ನು … Continued

ಪ್ರಜ್ವಲ್ ರೇವಣ್ಣ ವಿರುದ್ಧ 2ನೇ ಎಫ್ ಐ ಆರ್ ದಾಖಲು

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮಾಜಿ ಜಿಪಂ ಸದಸ್ಯೆಯೊಬ್ಬರು ತಮ್ಮ ಮೇಲೆ ಪ್ರಜ್ವಲ್ ರೇವಣ್ಣ ನಿರಂತರವಾಗಿ ಅತ್ಯಾಚಾರ ವೆಸಗಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಲೈಂಗಿಕ ದೌರ್ಜನ್ಯದ ವೀಡಿಯೊ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ವಿರುದ್ಧ ಶುಕ್ರವಾರ ಮತ್ತೊಂದು ಎಫ್ ಐಆರ್ ದಾಖಲಾಗಿದ್ದು, … Continued

ಭಾಗವತ ಕಥಾ ನಾಟಕದಲ್ಲಿ ರಾಕ್ಷಸನ ಪಾತ್ರ ಮಾಡಿದ್ದ ಬಾಲಕನ ಕತ್ತು ಸೀಳಿದ ಕಾಳಿದೇವಿ ಪಾತ್ರ ಮಾಡಿದ್ದ ಮತ್ತೊಬ್ಬ ಬಾಲಕ…!

ಕಾನ್ಪುರ : ಉತ್ತರ ಪ್ರದೇಶದ ಕಾನ್ಪುರದ ಹಳ್ಳಿಯೊಂದರಲ್ಲಿ ಭಾಗವತ ಕಥಾ ನಾಟಕದ ಪ್ರದರ್ಶನದ ವೇಳೆ ಕಾಳಿ ದೇವಿ ಪಾತ್ರ ಮಾಡಿದ್ದ 14 ವರ್ಷದ ಬಾಲಕ ಮತ್ತೊಬ್ಬ 11 ವರ್ಷದ ಬಾಲಕನ ಕತ್ತು ಸೀಳಿದ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. . ಬುಧವಾರ ಬಂಭಿಯಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಭಾಷ್ ಸೈನಿ ಎಂಬವರ ಮನೆಯವರು … Continued

ವೀಡಿಯೊ…| ಶಿವಸೇನೆ ನಾಯಕಿ ಕರೆದೊಯ್ಯಲು ಬಂದಿದ್ದ ಹೆಲಿಕಾಪ್ಟರ್ ಅಪಘಾತ

ರಾಯಗಢ: ಶಿವಸೇನೆ ಉಪನಾಯಕಿ ಸುಷ್ಮಾ ಅಂಧಾರೆಯನ್ನು ಕರೆದುಕೊಂಡು ಬರಲು ಹೊರಟಿದ್ದ ಖಾಸಗಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹಠಾತ್ ಅಪಘಾತಕ್ಕೀಡಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಅಂಧಾರೆ ಹಂಚಿಕೊಂಡ ವೀಡಿಯೊ ದೃಶ್ಯಾವಳಿ ಪ್ರಕಾರ, ಹೆಲಿಕಾಪ್ಟರ್ ಅಪರಿಚಿತ ಸ್ಥಳದಲ್ಲಿ ಲ್ಯಾಂಡಿಂಗ್ ಮಾಡಲು ಪ್ರಯತ್ನಿಸುತ್ತಿದೆ ಮತ್ತು ಇದ್ದಕ್ಕಿದ್ದಂತೆ ಅದು ತಿರುಗಲು ಪ್ರಾರಂಭಿಸಿದೆ. ನಂತರ ಸಮತೋಲನವನ್ನು ಕಳೆದುಕೊಂಡು ತೆರೆದ ಮೈದಾನದಲ್ಲಿ ಧೂಳಿನ … Continued

ಲೋಕಸಭೆ ಚುನಾವಣೆ ; ಮತ್ತೊಂದು ಕ್ಷೇತ್ರದಿಂದಲೂ ರಾಹುಲ್‌ ಗಾಂಧಿ ಸ್ಪರ್ಧೆ

ನವದೆಹಲಿ : ರಾಹುಲ್‌ ಗಾಂಧಿ ಅಮೇಥಿಯನ್ನು ಮರಳಿ ಗೆಲ್ಲಲು ಸಂಪೂರ್ಣ ಪ್ರಯತ್ನ ನಡೆಸಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಕಾಂಗ್ರೆಸ್‌ ಪಕ್ಷವು ರಾಹುಲ್ ಗಾಂಧಿ ಅವರನ್ನು ರಾಯ್ಬರೇಲಿಯಿಂದ ಕಣಕ್ಕಿಳಿಸುವುದಾಗಿ ಪ್ರಕಟಿಸಿದೆ. ಕಾಂಗ್ರೆಸ್ ಶುಕ್ರವಾರ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಯ್ಬರೇಲಿಯಿಂದ ರಾಹುಲ್ ಗಾಂಧಿ ಮತ್ತು ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾ ಅವರನ್ನು ಕಣಕ್ಕಿಳಿಸಿದೆ. ಉತ್ತರ ಪ್ರದೇಶದ … Continued

ರೇವಣ್ಣ, ಪ್ರಜ್ವಲ್ ಎಸ್‌ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಪ್ರಕಾರ ಬಂಧನ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಎರಡನೇ ಪ್ರಕರಣ ದಾಖಲಾಗಿದ್ದು, ಈ ಪ್ರಕರಣಗಳಲ್ಲಿ ಯಾರನ್ನೂ ರಕ್ಷಿಸುವ ಮಾತೇ ಇಲ್ಲ. ನೋಟಿಸ್‌ಗೆ ಬೆಲೆ ನೀಡಿ ರೇವಣ್ಣ ಅವರು ತನಿಖೆಗೆ ಹಾಜರಾಗಬೇಕು. ಇಲ್ಲದಿದ್ದರೆ ಕಾನೂನಿನಂತೆ ಅವರನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ. ಕಲಬುರಗಿ ನಗರ ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗತ್ತೇ … Continued

127 ವರ್ಷಗಳಷ್ಟು ಹಳೆಯ ಗೋದ್ರೇಜ್ ಗ್ರುಪ್‌ ಇಬ್ಭಾಗ

ಮುಂಬೈ : ದೇಶದ ‍ಪ್ರಮುಖ ಕಂಪನಿಗಳಲ್ಲಿ ಒಂದಾಗಿರುವ ಗೋದ್ರೆಜ್‌ ಸಮೂಹ ಈಗ ಇಬ್ಭಾಗವಾಗಿದೆ. ಗೋದ್ರೇಜ್ ಕುಟುಂಬವು 127 ವರ್ಷಗಳಷ್ಟು ಹಳೆಯದಾದ ಗೋದ್ರೇಜ್ ಗ್ರುಪ್‌ ಅನ್ನು ಸೌಹಾರ್ದಯುತವಾಗಿ ಎರಡು ಭಾಗಗಳಾಗಿ ವಿಭಜಿಸಲು ಒಪ್ಪಿಕೊಂಡಿದೆ. ಗ್ರೂಪ್ ನೀಡಿದ ಹೇಳಿಕೆಯ ಪ್ರಕಾರ, ಸಂಘಟಿತ ಸಂಸ್ಥೆಯನ್ನು ಎರಡು ಭಾಗಗಳಾಗಿ ವಿಭಜಿಸಲಾಗಿದೆ, ಆದಿ ಗೋದ್ರೇಜ್ ಮತ್ತು ಅವರ ಸಹೋದರ ಒಂದು ಭಾಗ ಮತ್ತು … Continued

ಏಪ್ರಿಲ್‌ ತಿಂಗಳಲ್ಲಿ ದಾಖಲೆಯ ಪ್ರಮಾಣದ ಜಿಎಸ್‌ಟಿ ಸಂಗ್ರಹ ; ಕರ್ನಾಟಕಕ್ಕೆ 2ನೇ ಸ್ಥಾನ

ನವದೆಹಲಿ: ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಗ್ರಹ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದು ಏಪ್ರಿಲ್ ತಿಂಗಳಲ್ಲಿ ₹2.10 ಲಕ್ಷ ಕೋಟಿ ಸಂಗ್ರಹವಾಗಿದೆ. ಇದೇ ಮೊದಲ ಬಾರಿಗೆ ಜಿಎಸ್‌ಟಿ ಸಂಗ್ರಹ 2 ಲಕ್ಷ ಕೋಟಿ ರೂ. ಗಡಿ ದಾಟಿದೆ. ಈ ಕುರಿತಂತೆ ಹಣಕಾಸು ಸಚಿವಾಲಯವು ಪ್ರಕಟಣೆ ಹೊರಡಿಸಿದೆ. ದೇಶೀಯ ವಹಿವಾಟು ಮತ್ತು ಆಮದು ಹೆಚ್ಚಳದಿಂದ ತೆರಿಗೆ ಸಂಗ್ರಹವೂ … Continued