ಎನ್‌ಪಿಎಸ್‌ನಲ್ಲಿ ಬದಲಾವಣೆಗೆ ಕೇಂದ್ರ ಚಿಂತನೆ, ಶೇ.45 ಪಿಂಚಣಿ ಸಿಗುವ ಸಾಧ್ಯತೆ : ವರದಿ

ನವದೆಹಲಿ: ಸದ್ಯ ಜಾರಿಯಲ್ಲಿ ಇರುವ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್‌)ಯಲ್ಲಿ ಕೆಲವೊಂದು ಬದಲಾವಣೆ ತರುವುದನ್ನು ಕೇಂದ್ರ ಸರ್ಕಾರ   ಪರಿಗಣಿಸುತ್ತಿದೆ ಎಂದು ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಕೇಂದ್ರ ಸರ್ಕಾರಿ ಉದ್ಯೋಗಿಗಳು ಪಡೆದಿರುವ ಕೊನೆಯ ಸಂಬಳದ ಶೇ.40ರಿಂದ ಶೇ.45ರಷ್ಟು ಮೊತ್ತವನ್ನು ಪಿಂಚಣಿಯಾಗಿ ನೀಡುವ ಬಗ್ಗೆ ಶಿಫಾರಸು ಮಾಡುವ ಸಾಧ್ಯತೆಗಳಿವೆ … Continued

ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಪುರುಷನಾಗಲು ನಿರ್ಧರಿಸಿದ ಪಶ್ಚಿಮ ಬಂಗಾಳ ಮಾಜಿ ಸಿಎಂ ಪುತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರ ಪುತ್ರಿ ಸುಚೇತನಾ ಭಟ್ಟಾಚಾರ್ಯ ಅವರು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಪುರುಷನಾಗಲು ನಿರ್ಧರಿಸಿದ್ದಾರೆ. ಇತ್ತೀಚೆಗಷ್ಟೇ ಎಲ್‌ಜಿಬಿಟಿಕ್ಯೂ (LGBTQ) ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಸುಚೇತನಾ ಶಸ್ತ್ರಚಿಕಿತ್ಸೆಗೆ ಒಳಗಾಗುವ ಮುನ್ನ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲು ಆರಂಭಿಸಿರುವುದಾಗಿ ಹೇಳಿದ್ದಾರೆ. ಸುಚೇತನಾ ತಾನು ಪುರುಷ ಎಂದು ಈಗಾಗಲೇ ಗುರುತಿಸಿಕೊಂಡಿದ್ದೇನೆ … Continued

ಪಶ್ಚಿಮ ಬಂಗಾಳ ಪಂಚಾಯತ ಚುನಾವಣೆ: ಕೇಂದ್ರ ಪಡೆಗಳ 82,000 ಭದ್ರತಾ ಸಿಬ್ಬಂದಿ ನಿಯೋಜನೆಗೆ ಹೈಕೋರ್ಟ್ ನಿರ್ದೇಶನ

ಕೋಲ್ಕತ್ತಾ : ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಶಿವಜ್ಞಾನಂ ಅವರನ್ನೊಳಗೊಂಡ ಕೋಲ್ಕತ್ತಾ ಹೈಕೋರ್ಟ್‌ನ ವಿಭಾಗೀಯ ಪೀಠವು ಪಶ್ಚಿಮ ಬಂಗಾಳದ ಮುಂಬರುವ ಪಂಚಾಯತ ಚುನಾವಣೆಗೆ 82,000 ಕೇಂದ್ರ ಸಶಸ್ತ್ರ ಪಡೆ ಸಿಬ್ಬಂದಿ ನಿಯೋಜಿಸುವಂತೆ ಪಶ್ಚಿಮ ಬಂಗಾಳ ರಾಜ್ಯ ಚುನಾವಣಾ ಆಯೋಗ ಮತ್ತು ರಾಜ್ಯ ಸರ್ಕಾರಕ್ಕೆ ಬುಧವಾರ ಸೂಚಿಸಿದೆ. 82,000 ಸಿಬ್ಬಂದಿ ನಿಯೋಜನೆಗಾಗಿ ಕೇಂದ್ರ ಗೃಹ ಸಚಿವಾಲಯಕ್ಕೆ ಅರ್ಜಿ ಸಲ್ಲಿಸುವಂತೆ … Continued

ವಿಶ್ವಸಂಸ್ಥೆಯಲ್ಲಿ ಮೋದಿ ನೇತೃತ್ವದ ಯೋಗ ದಿನಾಚರಣೆಯಲ್ಲಿ ಅತೀ ಹೆಚ್ಚು ದೇಶದ ಜನರು ಭಾಗಿ; ಗಿನ್ನೆಸ್ ದಾಖಲೆ ಸ್ಥಾಪನೆ

ನ್ಯೂಯಾರ್ಕ್ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ (ಜೂನ್‌ ೨೧) ಅಂತಾರಾಷ್ಟ್ರೀಯ ಯೋಗದಿನಾಚರಣೆ ವಿಶ್ವಸಂಸ್ಥೆ ಆವರಣದಲ್ಲಿ ನಡೆದಿದೆ. ಬೃಹತ್ ಕಾರ್ಯಕ್ರಮದಲ್ಲಿ ಮೋದಿ ಯೋಗಭ್ಯಾಸ ಮಾಡಿ ಎಲ್ಲರ ಗಮನಸೆಳೆದಿದ್ದಾರೆ. ಈ ಯೋಗದಿನಾಚರಣೆಯಲ್ಲಿ 180 ರಾಷ್ಟ್ರದ ಜನರು ಪಾಲ್ಗೊಳ್ಳುವ ಮೂಲ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಗಿನ್ನೆಸ್ ದಾಖಲೆ ಪುಟ ಸೇರಿದೆ. ವಿವಿಧ ದೇಶಗಳ ಜನರು ಒಂದೇ ಸಮಯದಲ್ಲಿ … Continued

ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸ್ಥಾನ ತ್ಯಜಿಸಲು ಮುಂದಾದ ಅಜಿತ ಪವಾರ್ …!

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಮತ್ತು ಶರದ್ ಪವಾರ್ ಅವರ ಅಣ್ಣನ ಮಗ ಅಜಿತ ಪವಾರ್ ಅವರು ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಸ್ಥಾನ ತ್ಯಜಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಬಾರಾಮತಿ ಕ್ಷೇತ್ರದ ಶಾಸಕರಾದ ಅಜಿತ ಪವಾರ್‌ ಅವರು, ಪಕ್ಷಕ್ಕಾಗಿ ದುಡಿಯುತ್ತೇನೆ ಮತ್ತು ನನಗೆ ನೀಡಿದ ಜವಾಬ್ದಾರಿಯನ್ನು ಪೂರೈಸುತ್ತೇನೆ ಎಂದು ಬುಧವಾರ … Continued

ಲಿಂಗ ಬದಲಾಯಿಸುವುದಾಗಿ ನಂಬಿಸಿ ಮಹಿಳೆ ಕೊಂದ ತಾಂತ್ರಿಕ

ಶಹಜಾನಪುರ: ಉತ್ತರ ಪ್ರದೇಶದ ಶಹಜಹಾನಪುರ ಜಿಲ್ಲೆಯಲ್ಲಿ ಮಹಿಳೆಯೊಬ್ಬಳು ತನ್ನ ಸಲಿಂಗ ಪ್ರೇಮಿಯನ್ನು ಮದುವೆಯಾಗಲು ತಾನು ಲಿಂಗ ಪರಿವರ್ತನೆ ಮಾಡುವುದಾಗಿ ಭರವಸೆ ನೀಡಿ ನಂತರ ತಾಂತ್ರಿಕನು ಆ ಯುವತಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳನ್ನು ಆರ್‌ಸಿ ಮಿಷನ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಪೂನಂ ಎಂದು ಗುರುತಿಸಲಾಗಿದೆ, ಈಕೆ ಪುವಾಯನ್ ನಿವಾಸಿ ಪ್ರೀತಿ ಎಂಬಾಕೆಯೊಂದಿಗೆ ಸ್ನೇಹ … Continued

ದೇಶದ ಪ್ರಧಾನಿ ಯಾರೆಂದು ಹೇಳಲು ಬಾರದ ವರನ ಕೈಬಿಟ್ಟು ಆತನ ಸಹೋದರನ ಕೈಹಿಡಿದ ನವವಿವಾಹಿತೆ…!

ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಮದುವೆ ವೇಳೆ ದೇಶದ ಪ್ರಧಾನಿ ಯಾರು ಕೇಳಿದ ಪ್ರಶ್ನೆಗೆ ಉತ್ತರಿಸಲು ಸಾಧ್ಯವಾಗದ ವಧು ತನ್ನ ಮದುವೆಯನ್ನು ಮುರುದಿಕೊಂಡ ಘಟನೆ ವರದಿಯಾಗಿದೆ..! ನಂತರ ವರನ ಕಿರಿಯ ಸಹೋದರನನ್ನು ಮದುವೆಯಾಗಿದ್ದಾಳೆ..!! ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯ ಸೈದಪುರ ಪೊಲೀಸ್ ಠಾಣೆಯಲ್ಲಿ ಕಳೆದ ಶನಿವಾರ ಈ ವಿಚಿತ್ರ ಘಟನೆ ನಡೆದಿದೆ. … Continued

ಎಂಜಿನಿಯರ್‌ಗೆ ಸಾರ್ವಜನಿಕವಾಗಿ ಕಪಾಳಮೋಕ್ಷ ಮಾಡಿದ ಶಾಸಕಿ | ವೀಕ್ಷಿಸಿ

ಮುಂಬೈ : ಮಹಾರಾಷ್ಟ್ರದ ಥಾಣೆಯಲ್ಲಿ ಮಹಿಳಾ ಶಾಸಕಿಯೊಬ್ಬರು ಸಿವಿಲ್‌ ಎಂಜಿನಿಯರ್‌ಗೆ ಸಾರ್ವಜನಿಕವಾಗಿ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದ್ದು, ವೀಡಿಯೊ ವೈರಲ್ ಆಗಿದೆ. ಥಾಣೆ ಜಿಲ್ಲೆಯ ಮೀರಾ ಭಯಂದರ್‌ನ ಶಾಸಕಿ ಗೀತಾ ಜೈನ್ ಅವರು ಕೆಲವು ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುವ ವಿಚಾರವಾಗಿ ಮುನ್ಸಿಪಲ್ ಕಾರ್ಪೊರೇಷನ್‌ನ ಇಬ್ಬರು ಇಂಜಿನಿಯರ್‌ಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಥಾಣೆ ಜಿಲ್ಲೆಯ ಮೀರಾ ಭಾಯಂದರ್‌ನ ಶಾಸಕಿ … Continued

ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಹಣದಿಂದ ಮಗನ ಮದುವೆ ಮಾಡಿದ್ದೇನೆ, ಮನೆ ಕಟ್ಟಿದ್ದೇನೆ: ಬಿಜೆಪಿ ಸಂಸದನ ಹೇಳಿಕೆ ವೈರಲ್‌…!

ಹೈದರಾಬಾದ್ : ತೆಲಂಗಾಣ ಬಿಜೆಪಿ ಸಂಸದ ಸೋಯಮ್ ಬಾಪು ರಾವ್ ಅವರದ್ದು ಎನ್ನಲಾದ ವೀಡಿಯೊ ಈಗ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ವೀಡಿಯೊದಲ್ಲಿ ಸೋಯಮ್ ಬಾಪುರಾವ್ ಅವರು ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ (ಎಂಪಿಎಲ್‌ಎಡಿ) ಯೋಜನೆಯ ಹಣದಲ್ಲಿ (ಸರ್ಕಾರದ ಹಣ) ಜನಪರ ಅಭಿವೃದ್ಧಿ ಕಾರ್ಯ ಮಾಡುವ ಬದಲು ತನಗಾಗಿ ಮನೆ ನಿರ್ಮಿಸಿಕೊಂಡಿದ್ದೇನೆ ಹಾಗೂ ಮಗನ ಮದುವೆ ಮಾಡಿದ್ದೇನೆ ಎಂದು ಒಪ್ಪಿಕೊಳ್ಳುವ … Continued

ತನ್ನನ್ನು ‘ಮೋದಿ ಅಭಿಮಾನಿ’ ಎಂದು ಕರೆದುಕೊಂಡ ಎಲೋನ್ ಮಸ್ಕ್ : ಭೇಟಿಯ ನಂತರ ಪ್ರಧಾನಿ ಮೋದಿ ಹೊಗಳಿದ ವಿಶ್ವದ ನಂ.1 ಶ್ರೀಮಂತ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ನ್ಯೂಯಾರ್ಕ್‌ನಲ್ಲಿ ಟ್ವಿಟರ್ ಸಿಇಒ ಎಲಾನ್ ಮಸ್ಕ್ ಅವರನ್ನು ಭೇಟಿಯಾಗಿದ್ದಾರೆ. ಪ್ರಧಾನಿ ಮೋದಿ ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿದ್ದಾರೆ. ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ನಂತರ, ಎಲೋನ್ ಮಸ್ಕ್ ಅವರು ಭಾರತಕ್ಕೆ ಭೇಟಿ ನೀಡುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ. … Continued