ಭಾನುವಾರವಾದ್ರೂ ಮಾರ್ಚ್‌ 31ರಂದು ಈ ಬ್ಯಾಂಕುಗಳಿಗೆ ರಜೆ ಇಲ್ಲ

ನವದೆಹಲಿ: ಸರ್ಕಾರಿ ವಹಿವಾಟುಗಳಲ್ಲಿ ಭಾಗಿಯಾಗಿರುವ ಎಲ್ಲಾ ಏಜೆನ್ಸಿ ಬ್ಯಾಂಕ್‌ಗಳು ಭಾನುವಾರ, ಮಾರ್ಚ್ 31ರಂದು ತೆರೆದಿರುತ್ತವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಪ್ರಕಟಿಸಿದೆ. ಈ ನಿರ್ಧಾರವು ಕ್ರೈಸ್ತ ಸಮುದಾಯಕ್ಕೆ ಮಹತ್ವದ ಆಚರಣೆಯಾದ ಈಸ್ಟರ್ ಭಾನುವಾರದಂದು ಹೊಂದಿಕೆಯಾಗುತ್ತದೆ. ಆದಾಗ್ಯೂ, ಎಲ್ಲ ಸರ್ಕಾರಿ ರಶೀದಿಗಳು ಮತ್ತು ಪಾವತಿಗಳನ್ನು 2023-24 ರ ಹಣಕಾಸು ವರ್ಷದೊಳಗೆ ಲೆಕ್ಕಹಾಕಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರದ … Continued

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಂಧನ: ಈವರೆಗೆ ಜೈಲಿಗೆ ಹೋಗಿದ್ದ ಮಾಜಿ ಸಿಎಂಗಳ ಪಟ್ಟಿ ಇಲ್ಲಿದೆ…

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ)ವು ಗುರುವಾರ ರಾತ್ರಿ ಬಂಧಿಸಿದೆ. 2024 ರ ಲೋಕಸಭೆ ಚುನಾವಣೆಗೆ ಕೆಲವು ದಿನಗಳ ಮೊದಲು ಅವರ ಬಂಧನವನ್ನು ವಿಪಕ್ಷಗಳ ಮೈತ್ರಿಕೂಟ ಇಂಡಿಯಾ (I.N.D.I.A) ಬ್ಲಾಕ್ ಸೇರಿದಂತೆ ವಿರೋಧ ಪಕ್ಷಗಳು ಖಂಡಿಸಿವೆ. ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಕಾನೂನು ಜಾರಿ ಸಂಸ್ಥೆಯಿಂದ … Continued

ಲೋಕಸಭೆ ಚುನಾವಣೆ 2024 : 57 ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ ; ಸಂಪೂರ್ಣ ಪಟ್ಟಿ ಇಲ್ಲಿದೆ…

ನವದೆಹಲಿ : ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ 57 ಅಭ್ಯರ್ಥಿಗಳ ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. 57 ಅಭ್ಯರ್ಥಿಗಳ ಪಟ್ಟಿಯು ಕರ್ನಾಟಕ, ತೆಲಂಗಾಣ, ಪಶ್ಚಿಮ ಬಂಗಾಳ, ರಾಜಸ್ಥಾನ, ಮಹಾರಾಷ್ಟ್ರ, ಅರುಣಾಚಲ ಪ್ರದೇಶ ಮತ್ತು ಗುಜರಾತ್‌ನ ಕ್ಷೇತ್ರಗಳನ್ನು ಒಳಗೊಂಡಿದೆ. ಪುದುಚೇರಿಯಲ್ಲಿ ಹಾಲಿ ಸಂಸದ ವಿ ವೈತಿಲಿಂಗಂ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ನಿರ್ಧರಿಸಿದೆ. ಪಶ್ಚಿಮ ಬಂಗಾಳದ ಬರ್ಹಮ್‌ಪುರ … Continued

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ

ನವದೆಹಲಿ : ಅಬಕಾರಿ ನೀತಿ ಹಗರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ತಂಡವು ಗುರುವಾರ (ಮಾರ್ಚ್ 21) ರಾತ್ರಿ 9 ಗಂಟೆ ವೇಳೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwa ಆ) ಅವರನ್ನು ಬಂಧಿಸಿದೆ. ಅವರ ಬಂಧನಕ್ಕೆ ತಡೆ ನೀಡಲು ದೆಹಲಿ ಹೈಕೋರ್ಟ್​ ನಿರಾಕರಿಸಿದ ನಂತರ ಗುರುವಾರ ಸಂಜೆ ವೇಳೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ … Continued

ತನ್ನ ಆದೇಶ ಧಿಕ್ಕರಿಸಿದ ತಮಿಳುನಾಡು ರಾಜ್ಯಪಾಲರ ವಿರುದ್ಧ ಸುಪ್ರೀಂ ಕೋರ್ಟ್‌ ಕೆಂಡಾಮಂಡಲ

ನವದೆಹಲಿ : ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮುಖಂಡ ಕೆ ಪೊನ್ಮುಡಿ ಅವರಿಗೆ ಕ್ರಿಮಿನಲ್ ಪ್ರಕರಣವೊಂದರಲ್ಲಿ ವಿಧಿಸಲಾಗಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ಕಳೆದ ವಾರ ತಡೆಯಾಜ್ಞೆ ನೀಡಿದ ನಂತರವೂ ಅವರನ್ನು ಮತ್ತೆ ರಾಜ್ಯ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರ ನಡವಳಿಕೆಯ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಗರಂ ಆಗಿದೆ. … Continued

ಐಪಿಎಲ್ (IPL) 2024 : ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕನ ಸ್ಥಾನ ತ್ಯಜಿಸಿದ ಧೋನಿ; ನೂತನ ಕ್ಯಾಪ್ಟನ್ ನೇಮಕ

ಚೆನ್ನೈ: 2024 ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಗೆ ಮುಂಚಿತವಾಗಿ ಮಹೇಂದ್ರ ಸಿಂಗ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ (CSK) ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಹಾಗೂ ರುತುರಾಜ್ ಗಾಯಕ್ವಾಡ್ ಅವರನ್ನು ನೂತನ ನಾಯಕನಾಗಿ ನೇಮಿಸಲಾಗಿದೆ. “ಮಹೇಂದ್ರ ಸಿಂಗ್ ಧೋನಿ ಐಪಿಎಲ್ (IPL) 2024 ರ ಆರಂಭದ ಮೊದಲು ರುತುರಾಜ್ ಗಾಯಕ್ವಾಡ್ ಅವರಿಗೆ ಚೆನ್ನೈ ಸೂಪರ್ ಕಿಂಗ್ಸ್ … Continued

ದೆಹಲಿ ಮದ್ಯ ನೀತಿ ಹಗರಣ : ಮಧ್ಯಂತರ ರಕ್ಷಣೆಗೆ ದೆಹಲಿ ಹೈಕೋರ್ಟ್ ನಿರಾಕರಿಸಿದ ನಂತರ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಇ.ಡಿ. ತಂಡ

ನವದೆಹಲಿ : ಜಾರಿ ನಿರ್ದೇಶನಾಲಯದ (ಇಡಿ) ತಂಡ ಗುರುವಾರ ಸಂಜೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸವನ್ನು ತಲುಪಿದೆ. ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ವಿರುದ್ಧ ಸರ್ಚ್ ವಾರೆಂಟ್ ಇದೆ ಎಂದು ಇ.ಡಿ. ತಂಡವು ಕೇಜ್ರಿವಾಲ್ ಅವರ ನಿವಾಸದಲ್ಲಿ ಸಿಬ್ಬಂದಿಗೆ ಮಾಹಿತಿ ನೀಡಿದೆ. ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ನೀಡಿದ … Continued

ಬಿಜೆಪಿ ಮೂರನೇ ಪಟ್ಟಿ ಪ್ರಕಟ; ಮಾಜಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್, ಅಣ್ಣಾಮಲೈ ಸೇರಿದಂತೆ ಪ್ರಮುಖರಿಗೆ ಟಿಕೆಟ್

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಲೋಕಸಭೆ ಅಭ್ಯರ್ಥಿಗಳ ತನ್ನ ಮೂರನೇ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ತೆಲಂಗಾಣ ಮಾಜಿ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರಿಗೆ ಟಿಕೆಟ್‌ ನೀಡಲಾಗಿದೆ. ಆದರೆ ಮೂರನೇ ಪಟ್ಟಿಯಲ್ಲಿ ಕರ್ನಾಟಕದ ಯಾವ ಅಭ್ಯರ್ಥಿಯನ್ನೂ ಪ್ರಕಟಿಸಲಾಗಿಲ್ಲ. ತಮಿಳಿಸೈ ಸೌಂದರರಾಜನ್ ಚೆನ್ನೈ ದಕ್ಷಿಣದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಕೊಯಮತ್ತೂರಿನಿಂದ ತಮಿಳುನಾಡು … Continued

ದಾರಿ ತಪ್ಪಿಸುವ ಜಾಹೀರಾತು: ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ ಪತಂಜಲಿ

ನವದೆಹಲಿ: ವೈಜ್ಞಾನಿಕ ತಳಹದಿಯ ಔಷಧಗಳನ್ನು (ಎವಿಡೆನ್ಸ್‌ ಬೇಸ್ಡ್‌ ಮೆಡಿಸಿನ್‌- ಇಬಿಎಂ) ಗುರಿಯಾಗಿಸಿಕೊಂಡು ಜಾಹೀರಾತು ನೀಡಿದ್ದ ಪತಂಜಲಿ ಆಯುರ್ವೇದ ಮತ್ತು ಅದರ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ್ದಾರೆ. ಆಯುರ್ವೇದಕ್ಕೆ ಪ್ರೋತ್ಸಾಹ ನೀಡಲೆಂದು ಹೊರತರಲಾದ ಈ ಜಾಹೀರಾತುಗಳನ್ನು ಕಂಪನಿ ಮತ್ತೆ ಪ್ರಕಟಿಸುವುದಿಲ್ಲ ಎಂದು ಬಾಲಕೃಷ್ಣ ಅವರು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ್ದಾರೆ. … Continued

ವಿಕಸಿತ ಭಾರತ ಸಂದೇಶ ಕಳಿಸುವುದನ್ನು ನಿಲ್ಲಿಸಿ: ಕೇಂದ್ರ ಸರ್ಕಾರಕ್ಕೆ ಚುನಾವಣಾ ಆಯೋಗದಿಂದ ಸೂಚನೆ

ನವದೆಹಲಿ: ‘ವಿಕಸಿತ ಭಾರತ ಸಂಪರ್ಕ’ ಅಡಿಯಲ್ಲಿ ನಾಗರಿಕರಿಗೆ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸುವುದನ್ನು ತಕ್ಷಣವೇ ನಿಲ್ಲಿಸುವಂತೆ ಭಾರತೀಯ ಚುನಾವಣಾ ಆಯೋಗವು ಗುರುವಾರ ಕೇಂದ್ರಕ್ಕೆ ನಿರ್ದೇಶನ ನೀಡಿದೆ. ಈ ವಿಷಯದ ಬಗ್ಗೆ ದೂರುಗಳು ಬಂದ ನಂತರ ಆಯೋಗವು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಈ ನಿರ್ದೇಶನ ನೀಡಿದೆ. ನ್ಯಾಯಸಮ್ಮತತೆ ಮತ್ತು ಸಮಾನ ಅವಕಾಶವನ್ನು ಖಾತ್ರಿಪಡಿಸುವ ಗುರಿಯನ್ನು … Continued