ರಾಜಸ್ಥಾನದಲ್ಲಿ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ

ಜೈಪುರ: ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ ಬಿಜೆಪಿ ಮುಖಂಡ ಕೃಪಾಲ್ ಸಿಂಗ್ ಜಘಿನಾ ಅವರನ್ನು ಕೆಲವು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಭಾನುವಾರ ತಡರಾತ್ರಿ ಬಿಜೆಪಿ ಮುಖಂಡ ತನ್ನ ಕಾರಿನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ರಾತ್ರಿ 10:45 ರ ಸುಮಾರಿಗೆ ಜಘಿನ ಗೇಟ್ ಬಳಿ ಹತ್ತಕ್ಕೂ ಹೆಚ್ಚು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು … Continued

ಆಗ್ರಾದ ಟೋಲ್ ಗೇಟ್ ಮುರಿದು ಸಾಗಿದ ಮರಳು ಮಾಫಿಯಾದ 13 ಟ್ರ್ಯಾಕ್ಟರ್‌ಗಳು: ಕೋಲುಗಳಿಂದ ತಡೆಯುವ ಸಿಬ್ಬಂದಿ ಪ್ರಯತ್ನ ವಿಫಲ | ವೀಕ್ಷಿಸಿ

ಆಗ್ರಾ: ಉತ್ತರ ಪ್ರದೇಶದ ಆಗ್ರಾದಿಂದ ಅಕ್ರಮವಾಗಿ ಮರಳು ಸಾಗಾಣೆ ನಡೆಸುತ್ತಿದ್ದ 13 ಟ್ರ್ಯಾಕ್ಟರ್‌ಗಳು ಟೋಲ್ ಪ್ಲಾಜಾದಲ್ಲಿ ನಿಲ್ಲಿಸದೇ ಬ್ಯಾರಿಕೇಡ್‌ ಮುರಿದು ಮುಂದೆ ಸಾಗಿರುವ ಘಟನೆ ನಡೆದಿದೆ. ಟೋಲ್‌ ಸಿಬ್ಬಂದಿ ಕೋಲುಗಳನ್ನು ಬಳಸಿ ತಡೆಯಲು ಪ್ರಯತ್ನಿಸಿದರೂ ಅವರು ಟೋಲ್‌ ಗೇಟುಗಳನ್ನು ಮುರಿದುಕೊಂಡು ಮುಂದೆ ಸಾಗಿದ್ದಾರೆ. ಈ ಟ್ರ್ಯಾಕ್ಟರ್‌ಗಳು ಸ್ಥಳೀಯ ಮರಳು ಮಾಫಿಯಾಕ್ಕೆ ಸೇರಿದವು ಎಂದು ಹೇಳಲಾಗಿದೆ. ಈ … Continued

ಮನೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದಕ್ಕೆ ಮೌಲಾನಾಗಳಿಂದ ನನಗೆ ಜೀವ ಬೆದರಿಕೆ ಬಂದಿದೆ: ಬಿಜೆಪಿ ನಾಯಕಿ ರೂಬಿ ಖಾನ್‌

ಲಕ್ನೋ: ಉತ್ತರ ಪ್ರದೇಶದ ಮೀರತ್‌ನಲ್ಲಿರುವ ತನ್ನ ಮನೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದಕ್ಕೆ ತನಗೆ ಮುಸ್ಲಿಂ ಧರ್ಮಗುರುಗಳಿಂದ  ಜೀವ  ಬೆದರಿಕೆ ಬಂದಿದೆ ಎಂದು ಬಿಜೆಪಿ ನಾಯಕಿ ರೂಬಿ ಖಾನ್ ಹೇಳಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮನೆಯಲ್ಲಿ ಪೂಜೆ ಸಲ್ಲಿಸಿದಾಗ ತನ್ನ ವಿರುದ್ಧ ಫತ್ವಾ ಹೊರಡಿಸಲಾಗಿತ್ತು ಎಂದು ಬಿಜೆಪಿ ನಾಯಕಿ ಹೇಳಿದ್ದಾರೆ. ನಾನು 7 ದಿನಗಳ ಕಾಲ … Continued

ಕಾರಿನ ಹಿಂದಿನ ಸೀಟಿನಲ್ಲಿದ್ದ ಸೈರಸ್ ಮಿಸ್ತ್ರಿ ಸೀಟ್ ಬೆಲ್ಟ್ ಧರಿಸಿರಲಿಲ್ಲ: ಪೊಲೀಸ್‌ ಮೂಲಗಳು

ಮುಂಬೈ: ಭಾನುವಾರ ಕಾರು ಅಪಘಾತದಲ್ಲಿ ಮೃತಪಟ್ಟ ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಸೀಟ್ ಬೆಲ್ಟ್ ಧರಿಸಿರಲಿಲ್ಲ ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತಕ್ಕೆ ಕಾರಣವಾಗಿತ್ತು. ಭಾನುವಾರ ಮಧ್ಯಾಹ್ನ 2:30ರ ಸುಮಾರಿಗೆ ಸೈರಸ್ ಮಿಸ್ತ್ರಿ ಅವರು … Continued

2021ರಲ್ಲಿ ಭಾರತದಲ್ಲಿ ರಸ್ತೆ ಅಪಘಾತಗಳಲ್ಲಿ 1.55 ಲಕ್ಷ ಮಂದಿ ಸಾವು, ಇದು ಇದುವರೆಗಿನ ಅತಿ ಹೆಚ್ಚು: ವರದಿ

ನವದೆಹಲಿ: 2021ರಲ್ಲಿ ದೇಶಾದ್ಯಂತ ರಸ್ತೆ ಸಂಭವಿಸಿದ ಅಪಘಾತಗಳಲ್ಲಿ 1.55 ಲಕ್ಷಕ್ಕೂ ಹೆಚ್ಚು ಜೀವಗಳನ್ನು ಕಳೆದುಕೊಂಡಿದ್ದಾರೆ. ಸರಾಸರಿ 426 ದೈನಂದಿನ ಅಥವಾ ಪ್ರತಿ ಗಂಟೆಗೆ 18. – ಅಧಿಕೃತ ಮಾಹಿತಿಯ ಪ್ರಕಾರ ಇದು ಯಾವುದೇ ಕ್ಯಾಲೆಂಡರ್ ವರ್ಷದಲ್ಲಿ ಇದುವರೆಗೆ ದಾಖಲಾದ ಅತಿ ಹೆಚ್ಚು ಸಾವಿನ ಅಂಕಿಅಂಶವಾಗಿದೆ. ಭಾರತದಲ್ಲಿ ಅಪಘಾತ ಸಾವುಗಳು ಮತ್ತು ಆತ್ಮಹತ್ಯೆಗಳು – 2021 ದಾಖಲೆಗಳ … Continued

ಅಂಕೋಲಾ: ಸ್ವಾತಂತ್ರ್ಯ ಹೋರಾಟಗಾರ ವೆಂಕಣ್ಣ ನಾಯಕ ನಿಧನ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಭಾಸಗೋಡ ಸೂರ್ವೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ವೆಂಕಣ್ಣ ಹಮ್ಮಣ್ಣ ನಾಯಕ (102) ಅವರು ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದರು. ಸ್ವಾತಂತ್ರ್ಯ ಹೋರಾಟಗಾರ ವೆಂಕಣ್ಣ ನಾಯಕ ಅವರ ನಿಧನದಿಂದ ಅಂಕೋಲಾ ತಾಲೂಕಿನ ಸ್ವಾತಂತ್ರ್ಯ ಹೋರಾಟದ ಕೊನೆಯ ಕೊಂಡಿ ಕಳಚಿದಂತಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ದುಮುಕಿ ಜೈಲುವಾಸ ಅನುಭವಿಸಿರುವ ಅವರನ್ನು … Continued

ಆಟೋರಿಕ್ಷಾಕ್ಕೆ ಕಾರು ಡಿಕ್ಕಿ ಹೊಡೆದು ಉರುಳಿದ ನಂತರ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆ | ವೀಕ್ಷಿಸಿ

ಮಹಿಳೆಯೊಬ್ಬರು ವಾಹನಕ್ಕೆ ಸಿಲುಕಿ ಸ್ವಲ್ಪದರಲ್ಲೇ ಪಾರಾಗುತ್ತಿರುವ ದೃಶ್ಯದ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಕ್ಲಿಪ್ ಅನ್ನು ಭಾರತೀಯ ಪೊಲೀಸ್ ಸೇವೆಯ (ಐಪಿಎಸ್) ಅಧಿಕಾರಿ ವಿ.ಸಿ. ಸಜ್ಜನರ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಶೀರ್ಷಿಕೆಯಲ್ಲಿ, ಐಪಿಎಸ್ ಅಧಿಕಾರಿ, ರಸ್ತೆ ಸುರಕ್ಷತೆಯನ್ನು ಎಲ್ಲಿಯವರೆಗೆ ಲಘುವಾಗಿ ತೆಗೆದುಕೊಳ್ಳುತ್ತಾರೆ ..? ಮತ್ತು ಜನರು ತಮ್ಮ ಅದೃಷ್ಟದ ಮೇಲೆ ಅವಲಂಬಿತರಾಗಬೇಕೇ ಎಂಬ ಎಂಬ ಪ್ರಶ್ನೆ ಕೇಳಿದ್ದಾರೆ. … Continued

ಅಪಘಾತದಲ್ಲಿ ಸಾವಿಗೀಡಾದ ಟಾಟಾ ಸನ್ಸ್‌ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಪ್ರಯಾಣಿಸುತ್ತಿದ್ದ ಕಾರನ್ನು ಮುಂಬೈ ವೈದ್ಯರು ಚಲಾಯಿಸುತ್ತಿದ್ದರು : ಪೊಲೀಸರು

ಮುಂಬೈ: ಇಂದು, ಭಾನುವಾರ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಸಾವಿಗೀಡಾದ ಕಾರನ್ನು ಸ್ತ್ರೀರೋಗತಜ್ಞೆ  ಚಾಲನೆ ಮಾಡುತ್ತಿದ್ದರು ಎಂದು ಎಂದು ಪೊಲೀಸರು ತಿಳಿಸಿದ್ದಾರೆ. ಕಾರು ವೇಗವಾಗಿ ಚಲಿಸುತ್ತಿತ್ತು ಮತ್ತು ರಾಂಗ್ ಸೈಡ್ ನಿಂದ (ಎಡದಿಂದ) ಮತ್ತೊಂದು ವಾಹನವನ್ನು ಹಿಂದಿಕ್ಕಲು ಪ್ರಯತ್ನಿಸಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. ಇಂದು, … Continued

ಕೆಕೆ ಶೈಲಜಾ ಮ್ಯಾಗ್ಸೆಸೆ ಪ್ರಶಸ್ತಿ ತೆಗೆದುಕೊಳ್ಳುವುದು ಬೇಡ: ಪಕ್ಷದ ನಿರ್ಧಾರ ಸಮರ್ಥಿಸಿಕೊಂಡ ಸೀತಾರಾಂ ಯೆಚೂರಿ

ನವದೆಹಲಿ: ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರಿಗೆ ಪ್ರತಿಷ್ಠಿತ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಪಡೆಯುವ ಅವಕಾಶವನ್ನು ಸಿಪಿಐ (ಎಂ) ನಿರಾಕರಿಸಿದ್ದಕ್ಕೆ ವಿಚಾರಕ್ಕೆ ಸಂಬಂಧಿಸಿದಂತೆ, ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ತಮ್ಮ ಪಕ್ಷದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ, ಪ್ರಶಸ್ತಿಯು ಫಿಲಿಪೈನ್ಸ್‌ನಲ್ಲಿ ಕಮ್ಯುನಿಸ್ಟರ ಕ್ರೂರ ದಬ್ಬಾಳಿಕೆಯ ಇತಿಹಾಸರಾಮನ್ ಮ್ಯಾಗ್ಸೆಸೆ ಹೆಸರಿನಲ್ಲಿದೆ ಎಂದು ಅವರು ಹೇಳಿದ್ದಾರೆ. ನವದೆಹಲಿಯಲ್ಲಿ … Continued

ಟಾಟಾ ಸನ್ಸ್‌ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ರಸ್ತೆ ಅಪಘಾತದಲ್ಲಿ ನಿಧನ

ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಭಾನುವಾರ ಮುಂಬೈನ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಮಿಸ್ತ್ರಿ ಅವರು ಮರ್ಸಿಡಿಸ್ ಕಾರಿನಲ್ಲಿ ಅಹಮದಾಬಾದ್‌ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದರು ಎಂದು ಅವರು ತಿಳಿಸಿದ್ದಾರೆ. ಮಿಸ್ತ್ರಿ … Continued