ರೈತರ ‘ದೆಹಲಿ ಚಲೋ’ ಮೆರವಣಿಗೆ ವೇಳೆ ಘರ್ಷಣೆಯ ನಂತರ 60 ಕ್ಕೂ ಹೆಚ್ಚು ಜನರಿಗೆ ಗಾಯ : ಪ್ರತಿಭಟನಾ ಮೆರವಣಿಗೆಗೆ ರಾತ್ರಿ ವಿರಾಮ

ನವದೆಹಲಿ: ರೈತ ಸಂಘಗಳು ದೆಹಲಿಯ ತಮ್ಮ ಪಾದಯಾತ್ರೆಯನ್ನು ರಾತ್ರಿ ವಿರಾಮಗೊಳಿಸಲು ನಿರ್ಧರಿಸಿದ್ದು, ಬುಧವಾರ ಬೆಳಿಗ್ಗೆ ಪ್ರತಿಭಟನೆಯನ್ನು ಪುನರಾರಂಭಿಸುವುದಾಗಿ ಹೇಳಿದ್ದಾರೆ. ಪಂಜಾಬ್-ಹರಿಯಾಣ ಗಡಿಯಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಮತ್ತು ಅಶ್ರುವಾಯು ಬಳಸಿದ್ದರಿಂದ ದಿನವಿಡೀ ರೈತರು ಮತ್ತು ಮಾಧ್ಯಮದವರು ಸೇರಿದಂತೆ 60 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಆದಾಗ್ಯೂ, ಸುಮಾರು 100 ರೈತರು ಗಾಯಗೊಂಡಿದ್ದಾರೆ … Continued

ವೀಡಿಯೊ..| ಭಾರತಕ್ಕೆ ನಿಮ್ಮ ಬಗ್ಗೆ ಹೆಮ್ಮೆ ಇದೆ : ಅಬುಧಾಬಿಯ ಅಹ್ಲಾನ್ ಮೋದಿ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನಿ ಮೋದಿ ಮಾತು

ನವದೆಹಲಿ: ಇಂದು, ಮಂಗಳವಾರ ಸಂಜೆ ಅಬುಧಾಬಿಯಲ್ಲಿ ನಡೆದ ಬೃಹತ್ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವೆ ಬೆಳೆಯುತ್ತಿರುವ ಸಂಬಂಧವನ್ನು ಶ್ಲಾಘಿಸಿದರು. ಸಾವಿರಾರು ಜನ ಸೇರಿದ್ದ ಝಾಯೆದ್ ಸ್ಪೋರ್ಟ್ಸ್ ಸಿಟಿ ಸ್ಟೇಡಿಯಂನಲ್ಲಿ “ಅಹ್ಲಾನ್ ಮೋದಿ” ಕಾರ್ಯಕ್ರಮವು ಗಲ್ಫ್ ದೇಶಕ್ಕೆ ಪ್ರಧಾನಿಯವರ ಎರಡು ದಿನಗಳ ಭೇಟಿಯ ಪ್ರಮುಖ ಕಾರ್ಯಕ್ರಮಗಳಲ್ಲಿ … Continued

ವೀಡಿಯೊ..| ಟ್ರಾಲಿಗಳಲ್ಲಿ 6 ತಿಂಗಳಿಗೆ ಬೇಕಾಗುವಷ್ಟು ಆಹಾರ, ಡೀಸೆಲ್ ಸಮೇತ ಪ್ರತಿಭಟನೆಗೆ ದೆಹಲಿಗೆ ಬರುತ್ತಿರುವ ಪಂಜಾಬ್ ರೈತರು…!

ನವದೆಹಲಿ: ದೆಹಲಿಯತ್ತ ಸಾಗುತ್ತಿರುವ ಸಾವಿರಾರು ರೈತರು, ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸುವುದನ್ನು ತಡೆಯಲು ಗಡಿಗಳನ್ನು ಮುಚ್ಚಿರುವುದರಿಂದ, ತಿಂಗಳುಗಳವರೆಗೆ ಸಾಕಾಗುವಷ್ಟು ಪಡಿತರ ಮತ್ತು ಡೀಸೆಲ್ ಅನ್ನು ಹೊತ್ತುಕೊಂಡು ದೀರ್ಘಾವಧಿ ಹೋರಾಟಕ್ಕೆ ಸಿದ್ಧರಾಗಿ ಬಂದಿರುವುದಾಗಿ ಹೇಳಿದ್ದಾರೆ. ರೈತರು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸೇರಿದಂತೆ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. 2020 ರ ತಮ್ಮ ಪ್ರತಿಭಟನೆಯ … Continued

ಕಾಂಗ್ರೆಸ್ ತೊರೆದ ಮರುದಿನವೇ ಬಿಜೆಪಿ ಸೇರಿದ ಅಶೋಕ ಚವಾಣ ; ನಾಳೆ ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ..?

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ ಚವಾಣ ಅವರು ಕಾಂಗ್ರೆಸ್‌ ಗೆ ರಾಜೀನಾಮೆ ನೀಡಿದ ಒಂದು ದಿನದ ನಂತರ ಇಂದು, ಮಂಗಳವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಚವಾಣ ಅವರು ಫೆಬ್ರವರಿ 14 ರಂದು ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್‌ ಪಕ್ಷಕ್ಕೆ ಆಘಾತ ನೀಡಿದ ಚವಾಣ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಪಕ್ಷದ ಪ್ರಾಥಮಿಕ … Continued

ರೈತ ಮುಖಂಡರು-ಕೇಂದ್ರ ಸಚಿವರ ಮಾತುಕತೆ ವಿಫಲ : ದೆಹಲಿ ಚಲೋ ಮೆರವಣಿಗೆ ಆರಂಭ ; 30 ನಿಮಿಷದಲ್ಲಿ ಬ್ಯಾರಿಕೇಡ್‌ ತುಂಡು ಮಾಡ್ತೇವೆ ಎಂದ ರೈತರು

ನವದೆಹಲಿ: ಸೋಮವಾರ ತಡರಾತ್ರಿ ರೈತ ಮುಖಂಡರು ಮತ್ತು ಕೇಂದ್ರ ಸಚಿವರ ನಡುವಿನ ಮಹತ್ವದ ಸಭೆ ಯಾವುದೇ ನಿರ್ಣಯವಿಲ್ಲದೆ ಅಂತ್ಯಗೊಂಡಿದ್ದು, ರೈತರು ಇಂದು, ಮಂಗಳವಾರ ತಮ್ಮ ‘ದೆಹಲಿ ಚಲೋ’ ಪ್ರತಿಭಟನೆಗೆ ಮುಂದಾಗಿದ್ದಾರೆ. ಇಂದು, ಮಂಗಳವಾರ ಬೆಳಗ್ಗೆ 10 ಗಂಟೆಗೆ ‘ದೆಹಲಿ ಚಲೋ’ ಮೆರವಣಿಗೆ ಆರಂಭಗೊಂಡಿದ್ದು, ಪಂಜಾಬ್‌ನ ಸಂಗ್ರೂರ್‌ನಿಂದ ರೈತರು 2,500 ಟ್ರಾಕ್ಟರ್ ಟ್ರಾಲಿಗಳಲ್ಲಿ ಹರಿಯಾಣ ಮೂಲಕ ದೆಹಲಿಗೆ … Continued

ರಣಜಿ ಟ್ರೋಫಿಯಲ್ಲಿ ಸತತ ನಾಲ್ಕು ಎಸೆತಗಳಲ್ಲಿ 4 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ ಕುಲ್ವಂತ | ವೀಕ್ಷಿಸಿ

ಮುಂಬೈ: ರಣಜಿ ಟ್ರೋಫಿಯ ಡಿ ಗುಂಪಿನ ಪಂದ್ಯದಲ್ಲಿ ಬರೋಡಾ ವಿರುದ್ಧ ಮಧ್ಯಪ್ರದೇಶದ ವೇಗದ ಬೌಲರ್ ಕುಲ್ವಂತ ಖೆಜ್ರೋಲಿಯಾ ಅವರು ಸತತ ನಾಲ್ಕು ಎಸೆತಗಳಲ್ಲಿ ನಾಲ್ಕು ವಿಕೆಟ್‌ ಪಡೆಯುವ ಮೂಲಕ ದಾಖಲೆ ಬರೆದಿದ್ದಾರೆ. ಈ ದಾಖಲೆ ಬರೆದ ಮೂರನೇ ಬೌಲರ್ ಆದ ಕುಲ್ವಂತ ಖೆಜ್ರೋಲಿಯಾ ಅವರು ಬರೋಡಾದ ಎರಡನೇ ಇನಿಂಗ್ಸ್‌ನಲ್ಲಿ 95ನೇ ಓವರಿನ ಎರಡನೇ, ಮೂರನೇ, ನಾಲ್ಕನೇ … Continued

ಲೋಕಸಭೆ ಚುನಾವಣೆ ಸ್ಪರ್ಧಾ ಕಣಕ್ಕೆ ಪ್ರಿಯಾಂಕಾ ಗಾಂಧಿ ಎಂಟ್ರಿ..? ಮಗಳಿಗಾಗಿ ರಾಯ್ಬರೇಲಿ ಕ್ಷೇತ್ರ ಬಿಟ್ಕೊಟ್ಟು ರಾಜ್ಯಸಭೆಗೆ ಸ್ಪರ್ಧೆ ಮಾಡ್ತಾರಾ ಸೋನಿಯಾ ಗಾಂಧಿ..?!

ನವದೆಹಲಿ: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ, ಅವರು ರಾಯ್‌ಬರೇಲಿ ಕ್ಷೇತ್ರದ ಲೋಕಸಭಾ ಸದಸ್ಯರಾಗಿದ್ದಾರೆ. ಬಿಹಾರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯಸಭಾ ಸಂಸದ ಅಖಿಲೇಶ್ ಪ್ರಸಾದ್ ಸಿಂಗ್ ನಾಮನಿರ್ದೇಶನಗೊಳ್ಳಬಹುದು. ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಕಣಕ್ಕಿಳಿಯುವ ಸಾಧ್ಯತೆಯಿರುವ ಇತರ ನಾಯಕರಲ್ಲಿ ಅಭಿಷೇಕ್ ಮನು ಸಿಂಘ್ವಿ ಮತ್ತು … Continued

ವೀಡಿಯೊ…| ಮೋದಿಪರ ಘೋಷಣೆ ಕೂಗುತ್ತಿದ್ದವರ ಜೊತೆ ಹಸ್ತಲಾಘವ ಮಾಡಿದ ರಾಹುಲ್ ಗಾಂಧಿ : ವೀಕ್ಷಿಸಿ

ಛತ್ತೀಸ್‌ಗಢ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗುತ್ತಿದ್ದ ಜನಸಮೂಹದತ್ತ ನಡೆದು ಅವರ ಕೈಕುಲುಕಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಪಕ್ಷವು “ಪ್ರೀತಿಯಲ್ಲಿ ದೊಡ್ಡ ಶಕ್ತಿ ಇದೆ” ಎಂದು ಹೇಳಿಕೆ ನೀಡಿದೆ. ಕಳೆದ ವಾರ ಒಡಿಶಾದ ಕೊರ್ಬಾದಿಂದ ಧೋಡಿಪಾರಾ ಮೂಲಕ ಕಟ್ಘೋರಾ ಮಾರ್ಗದಲ್ಲಿ ರಾಹುಲ್ ಗಾಂಧಿ … Continued

ಬಿಹಾರ: ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಪಡಿಸಿದ ನಿತೀಶಕುಮಾರ

ಪಟ್ನಾ: ಬಿಹಾರದಲ್ಲಿ ನಿತೀಶಕುಮಾರ ನೇತೃತ್ವದ ಎನ್‌ಡಿಎ ಸರ್ಕಾರ ಸೋಮವಾರ ವಿಧಾನಸಭೆಯಲ್ಲಿ ವಿಶ್ವಾಸ ಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದೆ. 129 ಶಾಸಕರು ನಿತೀಶ್‌ ಕುಮಾರ್‌ ಅವರನ್ನು ಬೆಂಬಲಿಸಿದ್ದಾರೆ. ನಿತೀಶಕುಮಾರ ವಿಶ್ವಾಸಮತ ಸಾಬೀತುಪಡಿಸುತ್ತಿದಂತೆ ವಿರೋಧ ಪಕ್ಷ ಸದಸ್ಯರು ವಿಧಾನಸಭೆಯಿಂದ ಹೊರನಡೆದರು. 243 ಸದಸ್ಯಬಲದ ಬಿಹಾರ ವಿಧಾನಸಭೆಯಲ್ಲಿ ಜೆಡಿಯು 45 ಶಾಸಕರನ್ನು ಹೊಂದಿದೆ. ಬಿಜೆಪಿ ಮತ್ತು ಹಿಂದುಸ್ತಾನಿ ಅವಾಮ್ ಮೋರ್ಚಾ ಕ್ರಮವಾಗಿ … Continued

ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ: ಪಕ್ಷಕ್ಕೆ ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ ಚವಾಣ ರಾಜೀನಾಮೆ ; 10-12 ಶಾಸಕರೊಂದಿಗೆ ಬಿಜೆಪಿ ಸೇರುವ ಸಾಧ್ಯತೆ

ಮುಂಬೈ: ಲೋಕಸಭೆ ಚುನಾವಣೆ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವನೆಗೆ ತಿಂಗಳುಗಳ ಮೊದಲು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಆಘಾತವಾಗಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಸಂಸದ ಅಶೋಕ ಚವಾಣ ಅವರು ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂಬ ವರದಿಗಳ ನಡುವೆ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದು, ಮೂಲಗಳ … Continued