ವೀಡಿಯೊ…| ಕ್ರೀಡಾ ಮೇಳದಲ್ಲಿ ಟ್ರ್ಯಾಕ್ಟರ್ ಸ್ಟಂಟ್ ಪ್ರದರ್ಶನದ ವೇಳೆ ದುರ್ಘಟನೆ ; ಟ್ರ್ಯಾಕ್ಟರ್ ಚಕ್ರದಡಿ ಸಿಲುಕಿ ಸ್ಟಂಟ್‌ ಮ್ಯಾನ್‌ ಸಾವು

ಗುರುದಾಸಪುರ: ಜಾತ್ರೆಯಲ್ಲಿ ಏರ್ಪಡಿಸಿದ್ದ ಗ್ರಾಮೀಣ ಸ್ಪರ್ಧೆಯಲ್ಲಿ ತನ್ನ ಟ್ರ್ಯಾಕ್ಟರ್ ಬಳಸಿಕೊಂಡು ಸಾಹಸ ಪ್ರದರ್ಶಿಸುತ್ತಿದ್ದ 29 ವರ್ಷದ ವ್ಯಕ್ತಿಯೊಬ್ಬ ಆಯತಪ್ಪಿ ವಾಹನ ಚಕ್ರದಡಿಗೆ ಸಿಲುಕಿ ಮೃತಪಟ್ಟ ಘಟನೆ ಪಂಜಾಬ್‌ನ ಗುರುದಾಸಪುರದ ಬಟಾಲಾದಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಸುಖಮನ್‌ದೀಪ್ ಸಿಂಗ್ ಎಂದು ಗುರುತಿಸಲಾಗಿದ್ದು, ಜಾತ್ರೆಯಲ್ಲಿ ತಮ್ಮ ಟ್ರ್ಯಾಕ್ಟರ್​ ಬಳಸಿಕೊಂಡು ಮಾಡುತ್ತಿದ್ದ ಸಾಹಸ ಪ್ರದರ್ಶನದ ವೇಳೆ … Continued

ವೀಡಿಯೊ | ನಾನೇಕೆ ಸ್ಫೋಟಿಸಿದ್ದೇನೆಂದರೆ, ಅವರು..: ಕೊಚ್ಚಿ ತ್ರಿವಳಿ ಸ್ಫೋಟಕ್ಕೆ ಹೊಣೆ ಹೊತ್ತ ಮಾರ್ಟಿನ್ ಎಂಬಾತನಿಂದ ವೀಡಿಯೊ ಬಿಡುಗಡೆ

ತಿರುವನಂತಪುರ: ಕೊಚ್ಚಿಯ ಕಲಮಸ್ಸೇರಿ ಕ್ರಿಶ್ಚಿಯನ್ ಧಾರ್ಮಿಕ ಸಮಾವೇಶದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ಸ್ಫೋಟ ಮಾಡಿದ ಹೊಣೆ ಹೊತ್ತಿದ್ದು, ಈ ಸಂಬಂಧ ವೀಡಿಯೊ ಬಿಡುಗಡೆ ಮಾಡಿದ್ದಾನೆ. ಡೊಮಿನಿಕ್ ಮಾರ್ಟಿನ್ ಎಂದು ಗುರುತಿಸಲಾದ ವ್ಯಕ್ತಿಯೊಬ್ಬ ಸರಣಿ ಸ್ಫೋಟದ ಹೊಣೆ ಹೊತ್ತುಕೊಂಡು ಪೊಲೀಸರ ಮುಂದೆ ಶರಣಾಗಿದ್ದಾನೆ. ಹಲವಾರು ಟಿವಿ ಚಾನೆಲ್‌ಗಳಲ್ಲಿ ಪ್ರಸಾರವಾದ ವೀಡಿಯೊ ಪ್ರಕಾರ, … Continued

ಕ್ರಿಕೆಟ್ ಆಡುತ್ತಿದ್ದ ಪೊಲೀಸ್ ಅಧಿಕಾರಿ ಮೇಲೆ ಉಗ್ರರಿಂದ ಗುಂಡಿನ ದಾಳಿ

ಶ್ರೀನಗರ : ಶ್ರೀನಗರದ ಡೌನ್ಟೌನ್ನಲ್ಲಿ ಭಾನುವಾರ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ಸ್ಪೆಕ್ಟರ್ ಮಸ್ರೂರ್ ಅಹ್ಮದ್ ವಾನಿ ಅವರು ಭಾನುವಾರ ಈದ್ಗಾ ಮೈದಾನದಲ್ಲಿ ಸ್ಥಳೀಯ ಹುಡುಗರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು … Continued

ಸರಣಿ ಸ್ಫೋಟದ ಹೊಣೆ ಹೊತ್ತುಕೊಂಡ ವ್ಯಕ್ತಿ : ಕೇರಳ ಪೊಲೀಸರ ಮುಂದೆ ಶರಣು

ಕೇರಳದ ಕಲಮಸ್ಸೆರಿಯಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ನಡೆದ ಸರಣಿ ಸ್ಫೋಟದ ಹೊಣೆಯನ್ನು ತ್ರಿಶೂರ್ ಜಿಲ್ಲೆಯ ವ್ಯಕ್ತಿಯೊಬ್ಬ ಹೊತ್ತುಕೊಂಡಿದ್ದಾನೆ ಮತ್ತು ಈ ಘಟನೆಯಲ್ಲಿ ಒಬ್ಬರು ಸಾವಿಗೀಡಾಗಿದ್ದು ,  50ಕ್ಕೂಹೆಚ್ಚು ಜನ  ಗಾಯಗೊಂಡಿದ್ದಾರೆ. ಡೊಮಿನಿಕ್ ಮಾರ್ಟಿನ್ ಎಂಬ ವ್ಯಕ್ತಿ ಭಾನುವಾರ ಬೆಳಗ್ಗೆ ಮೂರು ಸ್ಫೋಟಗಳು ನಡೆದ ಸಮಾವೇಶ ಕೇಂದ್ರದಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಲಮಸ್ಸೆರಿ, … Continued

‘ನಾನು ಒಳ್ಳೆಯ ಹಿಂದೂ, ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ 1.11 ಲಕ್ಷ ದೇಣಿಗೆ ನೀಡಿದ್ದೇನೆ’: ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್

ಭೋಪಾಲ್‌ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ 1.11 ಲಕ್ಷ ರೂಪಾಯಿ ದೇಣಿಗೆ ನೀಡಿದ್ದೇನೆ ಎಂದು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಭಾನುವಾರ ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ ಚುನಾವಣಾ ಕಣಕ್ಕಿಳಿದಿರುವ ದಿಗಿಜಯ ಸಿಂಗ್‌ ರಾಜಧಾನಿ ಭೋಪಾಲ್‌ನಲ್ಲಿ ಈ ಹೇಳಿಕೆ ನೀಡಿದ್ದಾರೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಸಿಂಗ್, “ನಾನು ಸನಾತನ ಧರ್ಮವನ್ನು ಅನುಸರಿಸುತ್ತೇನೆ ಮತ್ತು … Continued

ಕೇರಳದ ಧಾರ್ಮಿಕ ಸಭೆಯಲ್ಲಿ ಸರಣಿ ಸ್ಫೋಟ : 1 ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ಭಾನುವಾರ ಬೆಳಗ್ಗೆ ಕೇರಳದ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸರಣಿ ಸ್ಫೋಟಗಳು ಸಂಭವಿಸಿದ್ದು. ಒಬ್ಬ ಮಹಿಳೆ ಸಾವಿಗೀಡಾಗಿದ್ದಾರೆ ಮತ್ತು50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಚ್ಚಿಯಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಕಲಮಸ್ಸೆರಿಯ ಕೇಂದ್ರದಲ್ಲಿ ನಡೆದ ಯೆಹೋವನ ಸಾಕ್ಷಿಗಳ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಪ್ರಾರ್ಥನಾ ಸಭೆಯಲ್ಲಿ ಸುಮಾರು 2,000 ಜನರು ಭಾಗವಹಿಸಿದ್ದರು. … Continued

ಕಾಂಗ್ರೆಸ್ ಶಾಸಕಿ ಮನೆಯಲ್ಲಿ 20 ವರ್ಷದ ಯುವಕನ ಶವ ಪತ್ತೆ

ನವಡಾ: ಬಿಹಾರದ ನವಡಾ ಜಿಲ್ಲೆಯ ಕಾಂಗ್ರೆಸ್ ಶಾಸಕಿ ನೀತು ಸಿಂಗ್ ಅವರ ಮನೆಯಲ್ಲಿ 24 ವರ್ಷದ ಯುವಕನ ಶವ ಶನಿವಾರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಯುವಕ ಪಿಯೂಷ್ ಸಿಂಗ್ ಎಂಬವರು ನೀತು ಸಿಂಗ್ ಅವರ ದೂರದ ಸಂಬಂಧಿಯಾಗಿದ್ದು, ಶವ ಪತ್ತೆಯಾದಾಗ ಶಾಸಕಿ ನೀತು ಸಿಂಗ್ ನರ್ಹತ್‌ನಲ್ಲಿರುವ ಅವರ ಮನೆಯಲ್ಲಿ ಇರಲಿಲ್ಲ ಎಂದು ನಾವಡಾ … Continued

ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನ ಕಾನೂನುಬದ್ಧ ಪಕ್ಷವಲ್ಲ : ಬ್ರಿಟಿನ್‌ ಸಂಸತ್ತಿನಲ್ಲಿ ಪಿಒಕೆ ಸಾಮಾಜಿಕ ಕಾರ್ಯಕರ್ತ ಪ್ರತಿಪಾದನೆ

ಲಂಡನ್‌: ಜಮ್ಮು ಮತ್ತು ಕಾಶ್ಮೀರದ ವಿವಾದದ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಪಾಕಿಸ್ತಾನ ಕಾನೂನುಬದ್ಧ ಪಾಲುದಾರ ಪಕ್ಷವಲ್ಲ ಎಂದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಸಾಮಾಜಿಕ ಕಾರ್ಯಕರ್ತ ಪ್ರೊ. ಸಜ್ಜದ್‌ ರಾಜಾ ಪ್ರತಿಪಾದಿಸಿದ್ದಾರೆ. ಬ್ರಿಟನ್ನಿನ ಸಂಸತ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ದಿನಾಚರಣೆ (ಅ.26.1947 ರಂದು ಭಾರತಕ್ಕೆ ಸೇರ್ಪಡೆಯಾದ 76ನೇ ವರ್ಷಾಚರಣೆ) ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ”ಪಾಕ್‌ … Continued

ವಿಶ್ವಕಪ್‌ 2023: ಗಾಯಗೊಂಡ ಭಾರತದ ತಂಡದ ನಾಯಕ ರೋಹಿತ್ ಶರ್ಮಾ; ಇಂಗ್ಲೆಂಡ್ ಪಂದ್ಯಕ್ಕೆ ಆಡ್ತಾರಾ..?

ಲಕ್ನೋ: ಈ ಬಾರಿಯ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡದ ಮುಖಾಮುಖಿ ಇಂದು (ಅಕ್ಟೋಬರ್‌ ೨೯) ಇಂಗ್ಲೆಂಡ್ ವಿರುದ್ಧ ನಡೆಯಲಿದೆ. ಲಕ್ನೋದಲ್ಲಿ ನಡೆಯುವ ಭಾರತ – ಇಂಗ್ಲೆಂಡ್ ನಡುವಿನ ಪಂದ್ಯಕ್ಕೆ ಈಗ ಭಾರತದ ತಂಡದಲ್ಲಿ ಮತ್ತೊಬ್ಬರ ಪ್ರಮುಖ ಆಟಗಾರನಿಗೆ ಗಾಯದ ಸಮಸ್ಯೆ ಎದುರಾಗಿದೆ. ಈಗಾಗಲೇ ಹಾರ್ದಿಕ್ ಪಾಂಡ್ಯ ಅವರ ಗಾಯದ ಕಾರಣದಿಂದ ತಂಡದಲ್ಲಿ ಆಡುತ್ತಿಲ್ಲ. ಇದರ … Continued

20 ಕೋಟಿ ರೂಪಾಯಿ ಕೊಡಿ ಇಲ್ಲವಾದಲ್ಲಿ ಕೊಲ್ಲುತ್ತೇವೆ : ಮುಖೇಶ್ ಅಂಬಾನಿಗೆ ಕೊಲೆ ಬೆದರಿಕೆ

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಖೇಶ ಅಂಬಾನಿ ಕಂಪನಿಯ ಐಡಿಗೆ ಅಪರಿಚಿತ ವ್ಯಕ್ತಿಯೊಬ್ಬರು ಕಳುಹಿಸಿರುವ ಇ-ಮೇಲ್‌ನಲ್ಲಿ ಅವರು 20 ಕೋಟಿ ರೂಪಾಯಿ ನೀಡಬೇಕು ಇಲ್ಲವಾದಲ್ಲಿ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದೆ. “ನೀವು ನಮಗೆ 20 ಕೋಟಿ ನೀಡದಿದ್ದರೆ, ನಾವು … Continued