ಅವಳು ತನ್ನ ಸೀಟಿನ ಮೇಲೆ ಮೂತ್ರ ಮಾಡಿಕೊಂಡಿದ್ದಾಳೆ : ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪಿ ನ್ಯಾಯಾಲಯಕ್ಕೆ ಹೇಳಿಕೆ

ನವದೆಹಲಿ: ಯು-ಟರ್ನ್‌ನಲ್ಲಿ, ಏರ್ ಇಂಡಿಯಾ ವಿಮಾನದಲ್ಲಿ ಸಹ-ಪ್ರಯಾಣಿಕ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪಿ ಶಂಕರ್ ಮಿಶ್ರಾ, ಶುಕ್ರವಾರ ದೆಹಲಿ ನ್ಯಾಯಾಲಯಕ್ಕೆ ತಾನು ಆಕ್ಷೇಪಾರ್ಹ ಕೃತ್ಯವನ್ನು ಮಾಡಿಲ್ಲ ಎಂದು ಹೇಳಿದ್ದಾನೆ ಹಾಗೂ ಮಹಿಳೆ ಸ್ವತಃ ಮೂತ್ರ ವಿಸರ್ಜನೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದಾನೆ. ಕಳೆದ ವರ್ಷ ನವೆಂಬರ್ 26 ರಂದು ಏರ್ ಇಂಡಿಯಾ ನ್ಯೂಯಾರ್ಕ್-ನವದೆಹಲಿ ವಿಮಾನದಲ್ಲಿ … Continued

2022ರಲ್ಲಿ ತಿರುಪತಿ ದೇವಸ್ಥಾನದ ಹುಂಡಿ ಸಂಗ್ರಹ 1,450 ಕೋಟಿ ರೂ.

ತಿರುಪತಿ: ವಿಶ್ವದ ಅತ್ಯಂತ ಶ್ರೀಮಂತ ಹಿಂದೂ ದೇವಾಲಯ ಎಂದು ಪರಿಗಣಿಸಲಾಗಿರುವ ಇಲ್ಲಿನ ತಿರುಮಲ ಬೆಟ್ಟಗಳ ಮೇಲಿರುವ ತಿರುಪತಿ ವೆಂಕಟೇಶ್ವರ ಸ್ವಾಮಿ ದೇಗುಲವು 2022ರಲ್ಲಿ ಭಕ್ತರಿಂದ 1,450 ಕೋಟಿ ರೂ.ಗಳು ಕಾಣಿಕೆ (ಹುಂಡಿ ಸಂಗ್ರಹ) ಸಂಗ್ರಹವಾಗಿದೆ. ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಧರ್ಮಾ ರೆಡ್ಡಿ ಪ್ರಕಾರ, ಕಳೆದ ವರ್ಷ 2.37 ಕೋಟಿ ಭಕ್ತರು ದೇವಾಲಯಕ್ಕೆ … Continued

ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಂದು ಆರಂಭ, ಏಪ್ರಿಲ್ 6ರಂದು ಮುಕ್ತಾಯ

ನವದೆಹಲಿ: ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನವು ಜನವರಿ 31 ರಿಂದ ಆರಂಭವಾಗಿ ಏಪ್ರಿಲ್ 6 ರ ವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಶುಕ್ರವಾರ ಹೇಳಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನ, 2023 ಜನವರಿ 31 ರಿಂದ ಪ್ರಾರಂಭವಾಗುತ್ತದೆ ಮತ್ತು ಏಪ್ರಿಲ್ 6 ರ ವರೆಗೆ 66 ದಿನಗಳ ಕಾಲ ಸಾಮಾನ್ಯ … Continued

ಇಡೀ ಜೋಶಿಮಠ ಮುಳುಗುವ ಸಾಧ್ಯತೆ ಬಗ್ಗೆ ಎಚ್ಚರಿಕೆ ನೀಡಿದ ಇಸ್ರೋ : ಕೇವಲ 12 ದಿನಗಳಲ್ಲಿ 5.4 ಸೆಂ.ಮೀ ಭೂ ಕುಸಿತ

ನವದೆಹಲಿ:  ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದ ರಾಷ್ಟ್ರೀಯ ದೂರಸಂವೇದಿ ಕೇಂದ್ರ ಜೋಶಿಮಠದ ಉಪಗ್ರಹ ಚಿತ್ರಗಳನ್ನು ಮತ್ತು ಭೂ ಕುಸಿತದ ಪ್ರಾಥಮಿಕ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಈ ಚಿತ್ರದ ಮೂಲಕ ಇನ್ನು ಕೆಲವೇ ದಿನಗಳಲ್ಲಿ ಇಡೀ ಜೋಶಿಮಠ ಮುಳುಗುವ ಎಚ್ಚರಿಕೆಯನ್ನು ನೀಡಿದೆ.’ಮುಳುಗುತ್ತಿರುವ’ ಜೋಶಿಮಠದ ಉಪಗ್ರಹ ಚಿತ್ರಗಳು ಭೂಮಿ ಕುಸಿತದಿಂದ ಪಟ್ಟಣವು ಹೇಗೆ ಕ್ರಮೇಣ ಕುಸಿಯುತ್ತಿದೆ ಎಂಬುದನ್ನು … Continued

ಬಸ್-ಟ್ರಕ್ ಡಿಕ್ಕಿ: 10 ಜನರು ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ

ನಾಸಿಕ್‌: ಮಹಾರಾಷ್ಟ್ರದ ನಾಸಿಕ್-ಶಿರಡಿ ಹೆದ್ದಾರಿಯಲ್ಲಿ ಶುಕ್ರವಾರ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 10 ಜನರು ಮೃತಪಟ್ಟಿದ್ದಾರೆ ಮತ್ತು 34 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಪತ್ತಾರೆ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ವರದಿಗಳ ಪ್ರಕಾರ, ಖಾಸಗಿ ಐಷಾರಾಮಿ ಬಸ್ ಥಾಣೆ ಜಿಲ್ಲೆಯ ಅಂಬರನಾಥದಿಂದ ಹೊರಟಿತ್ತು. ನಾಸಿಕ್-ಶಿರಡಿ ಹೆದ್ದಾರಿಯ ಪಥರೆ ಶಿವಾರ್ … Continued

ಟಿಎಂಸಿ ಶಾಸಕನ ಆಸ್ತಿಗಳ ಮೇಲೆ ಐಟಿ ದಾಳಿ : 11 ಕೋಟಿ ರೂಪಾಯಿ ನಗದು ವಶ

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಟಿಎಂಸಿ ಶಾಸಕ ಜಾಕಿರ್ ಹುಸೇನ್ ಅವರ ಮುರ್ಷಿದಾಬಾದ್, ಕೋಲ್ಕತ್ತಾ ಮತ್ತು ನವದೆಹಲಿಯಲ್ಲಿರುವ ಆಸ್ತಿಗಳ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ 11 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ಬುಧವಾರ ಸಂಜೆ ಆರಂಭವಾದ ಶೋಧ ಕಾರ್ಯವು ಗುರುವಾರ ರಾತ್ರಿಯ ವರೆಗೆ ಹುಸೇನ್‌ ಅವರಿಗೆ ಸಂಬಂಧಿಸಿದ … Continued

ʼವಿಶ್ವದ ಅತಿ ಉದ್ದದ ನದಿ ವಿಹಾರʼಕ್ಕೆ ಇಂದು ಪ್ರಧಾನಿ ಮೋದಿ ಚಾಲನೆ: ಅದರ ಬಗ್ಗೆ ತಿಳಿದುಕೊಳ್ಳಬೇಕಾದದ್ದು…

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವೀಡಿಯೋ ಲಿಂಕ್ ಮೂಲಕ ವಾರಾಣಸಿ(ಕಾಶಿ)ಯಲ್ಲಿ ವಿಶ್ವದ ಅತಿ ಉದ್ದದ ಕ್ರೂಸ್ ಎಂ.ವಿ. ಗಂಗಾ ವಿಲಾಸಕ್ಕೆ ಚಾಲನೆ ನೀಡಲಿದ್ದಾರೆ ಮತ್ತು ಹಲವಾರು ಇತರ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ವಿಶ್ವದ ಅತಿ ಉದ್ದದ ನದಿ ಕ್ರೂಸ್ ಎಂವಿ ಗಂಗಾ ವಿಲಾಸ ಭಾರತದಲ್ಲಿ ತಯಾರಾದ ಮೊದಲ ವಿಹಾರ ನೌಕೆಯಾಗಿದೆ. … Continued

ಕೇಂದ್ರದ ಮಾಜಿ ಸಚಿವ ಶರದ್ ಯಾದವ್ ಇನ್ನಿಲ್ಲ

ನವದೆಹಲಿ: ಮಾಜಿ ಕೇಂದ್ರ ಸಚಿವ ಮತ್ತು ಸಮಾಜವಾದಿ ನಾಯಕ ಶರದ ಯಾದವ್ ಅವರು ಗುರುವಾರ (ಜನವರಿ 12) ತಮ್ಮ 75 ನೇ ವಯಸ್ಸಿನಲ್ಲಿ ನಿಧನರಾದರು. ಅವರ ಪುತ್ರಿ ಸುಭಾಷಿಣಿ ಶರದ್ ಯಾದವ್ ಅವರು ಟ್ವಿಟರ್‌ನಲ್ಲಿ “ಪಾಪಾ ನಹೀ ರಹೇ (ಪಾಪಾ ಇನ್ನಿಲ್ಲ)” ಎಂದು ನಿಧನದ ಸುದ್ದಿಯನ್ನು ಖಚಿತಪಡಿಸಿದ್ದಾರೆ. ಮಾಜಿ ಸಚಿವರ ಆರೋಗ್ಯ ಹದಗೆಟ್ಟಿತ್ತು, ಅವರನ್ನು ಗುರುಗ್ರಾಮದ … Continued

ತೆರಿಗೆ ನೋಟಿಸ್ ವಿರುದ್ಧ ಬಾಂಬೆ ಹೈಕೋರ್ಟ್ ಮೊರೆ ಹೋದ ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ

ಮುಂಬೈ : ಬಾಲಿವುಡ್‌ ನಟಿ ಹಾಗೂ ಖ್ಯಾತ ಕ್ರಿಕೆಟಿಗ ವಿರಾಟ್‌ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಅವರು ತೆರಿಗೆ ಹೆಚ್ಚಳದ ನೋಟಿಸ್‌ನ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. 2012-13 ಮತ್ತು 2013-14ರ ಬಾಕಿಗಳ ಕುರಿತು ಮಾರಾಟ ತೆರಿಗೆ ಉಪ ಆಯುಕ್ತರು ನೀಡಿದ ಎರಡು ಆದೇಶಗಳನ್ನು ಪ್ರಶ್ನಿಸಿ ನಟಿ ಅನುಷ್ಕಾ ಶರ್ಮಾ ಬಾಂಬೆ ಹೈಕೋರ್ಟ್‌ನ ಮೊರೆ ಹೋಗಿದ್ದಾರೆ. ಅವರ … Continued

ಕಾಶ್ಮೀರ ಸೋನಾಮಾರ್ಗದಲ್ಲಿ ಸಂಭವಿಸಿದ ಭಾರೀ ಹಿಮಕುಸಿತ : ರುದ್ರ ರಮಣೀಯ ದೃಶ್ಯ ಕ್ಯಾಮರಾದಲ್ಲಿ ಸೆರೆ | ವೀಕ್ಷಿಸಿ

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಜನಪ್ರಿಯ ಗಿರಿಧಾಮ ಸೋನಾಮಾರ್ಗದಲ್ಲಿ ಇಂದು, ಗುರುವಾರ  ಭಾರೀ ಹಿಮ ಹಿಮಕುಸಿತದ ವರದಿಯಾಗಿದೆ, ಅದರ ವೀಡಿಯೊವನ್ನು ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಮಧ್ಯ ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯಲ್ಲಿರುವ ಸೋನಾಮಾರ್ಗ್‌ನ ಬಾಲ್ಟಾಲ್ ಪ್ರದೇಶದ ಬಳಿ ಹಿಮಕುಸಿತ ಸಂಭವಿಸಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಈ ಪ್ರದೇಶದಲ್ಲಿ ಎರಡು ಹಿಮಕುಸಿತಗಳು ವರದಿಯಾಗಿದ್ದು, ಯಾವುದೇ ಪ್ರಾಣಹಾನಿ ಬಗ್ಗೆ … Continued