ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಡಿ.ಕೆ. ಶಿವಕುಮಾರಗೆ ಮತ್ತೆ ಸಂಕಷ್ಟದ ಭೀತಿ : ಸಿಬಿಐ ತನಿಖೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಸಂಕಷ್ಟ ಎದುರಾಗಿದ್ದು, ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್‌ ಹಸಿರು ನಿಶಾನೆ ತೋರಿದೆ. ಶಿವಕುಮಾರ ಹೈಕೋರ್ಟ್‌ಗೆ ತಡವಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಅವರ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಅದಲ್ಲದೇ ಸಿಬಿಐ ತನಿಖೆಗೆ ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ನ್ಯಾಯಾಲಯ ತೆರವುಗೊಳಿಸಿದೆ. ಅಲ್ಲದೆ, … Continued

15 ವರ್ಷಗಳ ಹಿಂದಿನ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ: ಎಲ್ಲಾ 5 ಆರೋಪಿಗಳು ದೋಷಿ ಎಂದ ಕೋರ್ಟ್

ನವದೆಹಲಿ: ಇಂಡಿಯಾ ಟುಡೇ ಮಹಿಳಾ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣದ ಎಲ್ಲಾ ಐವರು ಆರೋಪಿಗಳನ್ನು ದೆಹಲಿಯ ಸಾಕೇತ್ ಕೋರ್ಟ್ ದೋಷಿ ಎಂದು ಘೋಷಿಸಿದೆ. ಎಲ್ಲಾ ಅಪರಾಧಿಗಳಿಗೆ ಶಿಕ್ಷೆ ಪ್ರಮಾಣವನ್ನು ಕೋರ್ಟ್‌ ಅಕ್ಟೋಬರ್ 26ರಂದು ಪ್ರಕಟಿಸಲಿದೆ. 2008ರ ಸೆಪ್ಟೆಂಬರ್ 30ರಂದು ಸೌಮ್ಯ ತನ್ನ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದರು. ಚಲಿಸುತ್ತಿದ್ದ ಕಾರಿನಲ್ಲಿ ಅವರ ಮೇಲೆ ಗುಂಡು ಹಾರಿಸಲಾಯಿತು. … Continued

2019 ನಕಲಿ ಜನನ ಪ್ರಮಾಣಪತ್ರ ಪ್ರಕರಣ : ಆಜಂ ಖಾನ್, ಪತ್ನಿ, ಪುತ್ರನಿಗೆ 7 ವರ್ಷ ಜೈಲು ಶಿಕ್ಷೆ

ರಾಂಪುರ : 2019 ರ ನಕಲಿ ಜನನ ಪ್ರಮಾಣಪತ್ರ ಪ್ರಕರಣದಲ್ಲಿ ಉತ್ತರ ಪ್ರದೇಶದ ರಾಂಪುರದ ನ್ಯಾಯಾಲಯವು ಬುಧವಾರ (ಅಕ್ಟೋಬರ್ 18) ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ಅಜಂ ಖಾನ್, ಅವರ ಪತ್ನಿ ತನ್ಜೀಮ್ ಫಾತಿಮಾ ಮತ್ತು ಮಗ ಅಬ್ದುಲ್ಲಾ ಅಜಮ್ ಖಾನ್ ಅವರನ್ನು ದೋಷಿಗಳೆಂದು ಘೋಷಿಸಿ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ನ್ಯಾಯಾಲಯದ ತೀರ್ಪಿನ … Continued

ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳಕ್ಕೆ ಮೋದಿ ಸಂಪುಟ ಒಪ್ಪಿಗೆ

ನವದೆಹಲಿ; ನವರಾತ್ರಿಯ ನಾಲ್ಕನೇ ದಿನವಾದ ಬುಧವಾರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರವು ಹಬ್ಬದ ಕೊಡುಗೆ ನೀಡಿದೆ. ಮೂಲಗಳ ಪ್ರಕಾರ, ಬುಧವಾರ ಕೇಂದ್ರ ಸರ್ಕಾರದ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ (ಡಿಎ) ಮತ್ತು ಡಿಯರ್ನೆಸ್ ರಿಲೀಫ್ (ಡಿಆರ್) 4% ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ ತೋರಿಸಿದೆ. ಈ ಬಗ್ಗೆ ನಂತರ ಔಪಚಾರಿಕ ಘೋಷಣೆಯಾಗುವ ನಿರೀಕ್ಷೆಯಿದೆ. … Continued

ಗಾಜಾ ಆಸ್ಪತ್ರೆಯಲ್ಲಿನ ಸ್ಫೋಟದಲ್ಲಿ 500 ಜನರು ಸಾವು : ಘಟನೆಗೆ ಇಸ್ರೇಲ್-ಹಮಾಸ್ ಆರೋಪ-ಪ್ರತ್ಯಾರೋಪ

ಖಾನ್ ಯೂನಿಸ್ (ಗಾಜಾ ಪಟ್ಟಿ) : ಮಂಗಳವಾರ ಗಾಜಾ ಆಸ್ಪತ್ರೆಯಲ್ಲಿ ನಡೆದ ಸ್ಫೋಟದಲ್ಲಿ ಸುಮಾರು 500 ಪ್ಯಾಲೆಸ್ತೀನಿಯನ್ನರು ಸಾವಿಗೀಡಾಗಿದ್ದಾರೆ. ಪ್ಯಾಲೆಸ್ತೀನಿಯನ್ ಆರೋಗ್ಯ ಅಧಿಕಾರಿಗಳು ಇದು ಇಸ್ರೇಲಿ ವೈಮಾನಿಕ ದಾಳಿಯಿಂದ ಸಂಭವಿಸಿದೆ ಎಂದು ಆರೋಪಿಸಿದೆ. ಆದರೆ ಇಸ್ರೇಲಿ ಮಿಲಿಟರಿ ಪ್ಯಾಲೇಸ್ತೀನಿಯನ್ ಉಗ್ರಗಾಮಿ ಗುಂಪು ಹಾರಿಸಿದ ರಾಕೆಟ್‌ ವಿಫಲವಾಗಿ ಅದು ಆಸ್ಪತ್ರೆ ಮೇಲೆ ಬಿದ್ದು ಈ ಘಟನೆ ಸಂಭವಿಸಿದೆ … Continued

ವಿಶ್ವಕಪ್ 2023: ಬಲಿಷ್ಠ ದಕ್ಷಿಣ ಆಫ್ರಿಕಾಕ್ಕೆ ಆಘಾತಕಾರಿ ಸೋಲಿನ ರುಚಿ ತೋರಿಸಿದ ನೆದರ್ಲ್ಯಾಂಡ್ಸ್

ಧರ್ಮಶಾಲಾ : ಈ ವಿಶ್ವಕಪ್ ಪಂದ್ಯಾವಳಿ ಘಟಾನುಘಟಿ ತಂಡಗಳಿಗೆ ಶಾಕಿಂಗ್‌ ಪಂದ್ಯಾವಳಿಯಾಗಿ ಪರಿಣಮಿಸುತ್ತಿದೆ. ಕೆಲದಿನಗಳ ಹಿಂದೆ ಅಫ್ಘಾನಿಸ್ತಾನವು ಹಾಲಿ ಚಾಂಪಿಯನ್ ಇಂಗ್ಲೆಂಡ್ ಅನ್ನು ಮಣಿಸಿದ ಕೆಲವು ದಿನಗಳ ನಂತರ, ವಿಶ್ವದ ನಂ.14 ಶ್ರೇಯಾಂಕದ ನೆದರ್ಲ್ಯಾಂಡ್ಸ್ ತಂಡವು ಬಲಿಷ್ಠ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಮತ್ತೊಂದು ಅಚ್ಚರಿಯ ಫಲಿತಾಂಶ ನೀಡಿದೆ. ಪ್ರಸ್ತುತ ಏಕದಿನದ ಪಂದ್ಯದಲ್ಲಿ ವಿಶ್ವದ ನಂ. 3 … Continued

ಮೈನವಿರೇಳಿಸುವ ವೀಡಿಯೊ…: ಈ ವ್ಯಕ್ತಿ ಯಾವುದೇ ಭಯವಿಲ್ಲದೆ ಬೃಹತ್‌ ಕಾಳಿಂಗ ಸರ್ಪಕ್ಕೆ ಸ್ನಾನ ಮಾಡಿಸ್ತಾನೆ | ವೀಕ್ಷಿಸಿ

ಬೃಹತ್ ಕಾಳಿಂಗ ಸರ್ಪಕ್ಕೆ ವ್ಯಕ್ತಿಯೊಬ್ಬ ನಿರ್ಭಯವಾಗಿ ಸ್ನಾನ ಮಾಡುತ್ತಿರುವ ವಿಲಕ್ಷಣ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ದಿನಾಂಕವಿಲ್ಲದ ಕ್ಲಿಪ್ ನಲ್ಲಿ ವ್ಯಕ್ತಿಯು ತನ್ನ ಸ್ನಾನದ ಕೋನೆಯಲ್ಲಿ ಕಾಳಿಂಗ ಸರ್ಪಕ್ಕೆ ಯಾವುದೇ ಭಯ ಅಥವಾ ಅಂಜಿಕೆ ಪ್ರದರ್ಶಿಸದೆ ಸ್ನಾನ ಮಾಡಿಸುವುದನ್ನು ತೋರಿಸುತ್ತದೆ. ಮೈನವಿರೇಳಿಸುವ ಈ ವೀಡಿಯೊವನ್ನು ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಸುಸಾಂತ ನಂದಾ ಅವರು ಎಕ್ಸ್‌ನಲ್ಲಿ … Continued

2 ಪಟಾಕಿ ಘಟಕಗಳಲ್ಲಿ ಸ್ಫೋಟ : 9 ಮಹಿಳೆಯರು ಸೇರಿ 11 ಮಂದಿ ಸಾವು

ಚೆನ್ನೈ: ತಮಿಳುನಾಡಿನ ವಿರುದುನಗರ ಜಿಲ್ಲೆಯಲ್ಲಿ ಮಂಗಳವಾರ ಎರಡು ಪಟಾಕಿ ಘಟಕಗಳಲ್ಲಿ ಸಂಭವಿಸಿದ ಸ್ಫೋಟಗಳಲ್ಲಿ ಒಂಬತ್ತು ಮಹಿಳೆಯರು ಸೇರಿದಂತೆ ಕನಿಷ್ಠ 11 ಜನರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ವಿರುದುನಗರ ಜಿಲ್ಲೆಯ ರಂಗಪಾಳ್ಯಂ ಮತ್ತು ಕಿಚನಾಯಕನಪಟ್ಟಿ ಗ್ರಾಮದ ಪಟಾಕಿ ಘಟಕಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಬೆಂಕಿ ಅವಘಡಗಳಲ್ಲಿ ಕನಿಷ್ಠ ಹನ್ನೊಂದು ಜನರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ … Continued

ಪ್ರಶ್ನೆಗಳಿಗೆ ಲಂಚ : ಬಿಜೆಪಿ ಸಂಸದ, ಸುಪ್ರೀಂ ಕೋರ್ಟ್ ವಕೀಲr ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಮಹುವಾ ಮೊಯಿತ್ರಾ

ನವದೆಹಲಿ: ಭಾರತೀಯ ಜನತಾ ಪಕ್ಷದ ಸಂಸದ ನಿಶಿಕಾಂತ್ ದುಬೆ, ಸುಪ್ರೀಂ ಕೋರ್ಟ್ ವಕೀಲ ಜೈ ಅನಂತ್ ದೇಹದ್ರಾಯ್ ಮತ್ತು ಹಲವಾರು ಮಾಧ್ಯಮ ಸಂಸ್ಥೆಗಳ ವಿರುದ್ಧ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಮಂಗಳವಾರ ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಲು ಸಂಸದರು “ಲಂಚ” ಪಡೆದಿದ್ದಾರೆ ಎಂದು ನಿಶಿಕಾಂತ್ ದುಬೆ ಮತ್ತು ದೇಹಾದ್ರಾಯಿ … Continued

ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ಇಲ್ಲ ಎಂದ ಸುಪ್ರೀಂ ಕೋರ್ಟ್‌

ನವದೆಹಲಿ: ಸಲಿಂಗ ಜೋಡಿಯು ವಿವಾಹವಾಗುವ (LGBTQIA+ ಮದುವೆ) ಅಥವಾ ಸಿವಿಲ್‌ ಯೂನಿಯನ್‌ (ವಿವಾಹಕ್ಕೆ ಸರಿಸಮನಾದ ಕಾನೂನು ಮಾನ್ಯತೆ ಇರುವ ಸಂಬಂಧಗಳು) ಹೊಂದುವ ಕಾನೂನಾತ್ಮಕ ಹಕ್ಕಿನ ಕೋರಿಕೆಗೆ ಮಾನ್ಯತೆ ನೀಡಲು ಸುಪ್ರೀಂ ಕೋರ್ಟ್‌ ಮಂಗಳವಾರ ನಿರಾಕರಿಸಿದೆ ಹಾಗೂ ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ 21 ಅರ್ಜಿಗಳನ್ನು ಸಾಂವಿಧಾನಿಕ ಪೀಠ ವಜಾಗೊಳಿಸಿದೆ. ಈಗಿರುವ … Continued