ಮಣಿಪುರದಲ್ಲಿ ಸಾಂವಿಧಾನಿಕ ಯಂತ್ರಗಳ ಸಂಪೂರ್ಣ ಸ್ಥಗಿತ: ಸುಪ್ರೀಂ ಕೋರ್ಟ್

ನವದೆಹಲಿ: ಮಣಿಪುರದಲ್ಲಿ ತನಿಖೆಯ “ಆಲಸ್ಯ”ದ ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ಗಂಭೀರ ಕಳವಳ ವ್ಯಕ್ತಪಡಿಸಿದೆ ಮತ್ತು ರಾಜ್ಯದಲ್ಲಿ “ಕಾನೂನು ಮತ್ತು ಸುವ್ಯವಸ್ಥೆ ಯಂತ್ರದ ಸಂಪೂರ್ಣ ಸ್ಥಗಿತವಾಗಿದೆ ಎಂದು ಹೇಳಿದೆ. ಗಮನಾರ್ಹ ಸಮಯ ಕಳೆದರೂ ಯಾವುದೇ ಬಂಧನಗಳಿಲ್ಲ. ಮಣಿಪುರದಲ್ಲಿ ಚಾಲ್ತಿಯಲ್ಲಿರುವ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯು ಸಾಂವಿಧಾನಿಕ ಯಂತ್ರಗಳ ಕಾರ್ಯನಿರ್ವಹಣೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಗಮನಿಸಿದ … Continued

ಎಎಪಿಗೆ ಹಿನ್ನಡೆ : ದೆಹಲಿ ಆಡಳಿತಾತ್ಮಕ ಸೇವಾ ಮಸೂದೆ ವಿಚಾರದಲ್ಲಿ ಕೇಂದ್ರಕ್ಕೆ ಬೆಂಬಲಿಸಿದ ಬಿಜೆಡಿ

ನವದೆಹಲಿ: ದೆಹಲಿ ಸೇವಾ ಮಸೂದೆಯ ವಿರುದ್ಧದ ಹೋರಾಟದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಭಾರೀ ಹಿನ್ನಡೆ ಉಂಟಾಗಿದ್ದು, ಒಡಿಶಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ನೇತೃತ್ವದ ಬಿಜು ಜನತಾ ದಳ ಸಂಸತ್ತಿನಲ್ಲಿ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡಿದೆ. ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ವಿಪಕ್ಷಗಳ ಮೈತ್ರಿಕೂಟ-ಇಂಡಿಯಾ ಮಂಡಿಸಿದ ಅವಿಶ್ವಾಸ ನಿರ್ಣಯವನ್ನೂ ಸಹ ಬಿಜೆಡಿ ವಿರೋಧಿಸುತ್ತದೆ ಎಂದು ಮೂಲಗಳು ತಿಳಿಸಿವೆ. … Continued

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಡಿ ಎಂಬ ವಿಪಕ್ಷಗಳ ಮೈತ್ರಿಕೂಟದ ಸಲಹೆ ನಡುವೆಯೂ ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಂಡ ಶರದ್‌ ಪವಾರ್‌

ಪುಣೆ: ವಿರೋಧ ಪಕ್ಷಗಳ ಮೈತ್ರಿಕೂಟದ ಹಿರಿಯ ನಾಯಕರಲ್ಲಿ ಒಬ್ಬರಾದ ಶರದ್ ಪವಾರ್ ಅವರು ಇಂದು, ಸೋಮವಾರ ಮಹಾರಾಷ್ಟ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದು, ಕಾರ್ಯಕ್ರಮಕ್ಕೆ ಹೋಗದಂತೆ ಒತ್ತಾಯಿಸಿದ ಅವರ ಮಿತ್ರಪಕ್ಷಗಳ ಅಸಮಾಧಾನಕ್ಕೆ ಕಾರಣವಾಗಿದೆ. ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವಿನ ವಾಕ್ಸಮರದ ಮಧ್ಯೆ, ಪುಣೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ ಹಾಗೂ ಶರದ್‌ … Continued

ಹರ್ಯಾಣದ ನುಹ್, ಗುರುಗ್ರಾಮದಲ್ಲಿ ಗುಂಪು ಘರ್ಷಣೆಯಲ್ಲಿ ಇಮಾಮ್ ಸೇರಿದಂತೆ 5 ಸಾವು

ನವದೆಹಲಿ: ಹರ್ಯಾಣದ ನುಹ್‌ನಲ್ಲಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ)ನ ಧಾರ್ಮಿಕ ಮೆರವಣಿಗೆ ವೇಳೆ ಸೋಮವಾರ ನಡೆದ ಘರ್ಷಣೆಯಲ್ಲಿ ಇಬ್ಬರು ಗೃಹ ರಕ್ಷಕರು, ಒಬ್ಬ ನಾಗರಿಕ ಮತ್ತು ಇಮಾಮ್ ಸೇರಿದಂತೆ ಐವರು ಸಾವಿಗೀಡಾಗಿದ್ದಾರೆ ಮತ್ತು ಹಲವಾರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಹರ್ಯಾಣ ಮುಖ್ಯಮಂತ್ರಿ ಮನೋಹರ ಲಾಲ ಖಟ್ಟರ್ ಮಾತನಾಡಿ, ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಘರ್ಷಣೆಯಲ್ಲಿ ಐದು … Continued

19-ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಇಳಿಕೆ….

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ದೇಶಾದ್ಯಂತ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ದರವನ್ನು ಕಡಿತಗೊಳಿಸಿವೆ. ದೆಹಲಿಯಲ್ಲಿ 100 ರೂಪಾಯಿ ಸಮೀಪ ಇಳಿಕೆಯಾಗಿದೆ. ಅದೇ ಸಮಯದಲ್ಲಿ, ಇತರ ಮಹಾನಗರಗಳಲ್ಲಿ ಸುಮಾರು 93 ರೂಪಾಯಿಗಳ ಕಡಿತವನ್ನು ಮಾಡಲಾಗಿದೆ. ಈಗ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ 1680 ರೂ.ಗಳಿಗೆ ಲಭ್ಯವಿರುತ್ತದೆ, ಇದುವರೆಗೆ 1780 ರೂ.ಗಳ ದರವಿತ್ತು. ಈ … Continued

ಭೂಮಿಯ ಕಕ್ಷೆಯಿಂದ ಹೊರಟು ಚಂದ್ರನ ಕಡೆಗೆ ಪ್ರಯಾಣ ಆರಂಭಿಸಿದ ಚಂದ್ರಯಾನ-3 ಬಾಹ್ಯಾಕಾಶ ನೌಕೆ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಂಗಳವಾರ ಚಂದ್ರಯಾನ 3 – ಚಂದ್ರನ ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಟ್ರಾನ್ಸ್‌ಲೂನಾರ್ ಕಕ್ಷೆಗೆ ಸೇರಿಸಿದೆ. “ಚಂದ್ರಯಾನ-3 ಭೂಮಿಯ ಸುತ್ತ ತನ್ನ ಕಕ್ಷೆಯನ್ನು ಪೂರ್ಣಗೊಳಿಸುತ್ತದೆ ಮತ್ತು ಚಂದ್ರನ ಕಡೆಗೆ ಹೋಗುತ್ತದೆ. ISTRAC ನಲ್ಲಿ ನಡೆಸಿದ ಯಶಸ್ವಿ ಪೆರಿಜಿ-ಫೈರಿಂಗ್, ಇಸ್ರೋ (ISRO) ಬಾಹ್ಯಾಕಾಶ ನೌಕೆಯನ್ನು ಟ್ರಾನ್ಸ್‌ಲೂನಾರ್ ಕಕ್ಷೆಯಲ್ಲಿ ಇಟ್ಟಿದೆ. ಚಂದ್ರಯಾನ-3 … Continued

ಥಾಣೆಯಲ್ಲಿ ಸೇತುವೆ ನಿರ್ಮಾಣಕ್ಕೆ ಬಳಸುವ ಗಿರ್ಡರ್ ಲಾಂಚರ್ ಕುಸಿದು 16 ಮಂದಿ ಸಾವು

ಮುಂಬೈ: ಥಾಣೆಯಲ್ಲಿ ಸಮೃದ್ಧಿ ಎಕ್ಸ್‌ಪ್ರೆಸ್ ಹೆದ್ದಾರಿಯ ಮೂರನೇ ಹಂತದ ನಿರ್ಮಾಣದಲ್ಲಿ ಬಳಸಲಾದ ಗಿರ್ಡರ್ ಲಾಂಚರ್ ಯಂತ್ರವು ಕುಸಿದು ಬಿದ್ದು ಕನಿಷ್ಠ 16 ಜನರು ಸಾವಿಗೀಡಾಗಿದ್ದಾರೆ ಮತ್ತು 4 ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ನಸುಕಿನ ಜಾವ ಈ ಅಪಘಾತ ಸಂಭವಿಸಿದೆ. ಥಾಣೆಯ ಸರ್ಲಾಂಬೆ ಗ್ರಾಮದ ಬಳಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಅಪಘಾತ ಸಂಭವಿಸಿದೆ. ಮೃತರ ಹೊರತಾಗಿ … Continued

ಆಗಸ್ಟ್ ತಿಂಗಳಲ್ಲಿ ಮಳೆ ಮೇಲೆ ʼಎಲ್ ನಿನೊʼ ಪರಿಣಾಮ ಬೀರಬಹುದು: ಐಎಂಡಿ

ನವದೆಹಲಿ : ಜುಲೈನಲ್ಲಿ ಅಧಿಕ ಮಳೆಯ ನಂತರ ಭಾರತವು ಮಾನ್ಸೂನ್ ಋತುವಿನ ದ್ವಿತೀಯಾರ್ಧದಲ್ಲಿ ಸಾಮಾನ್ಯ ಮಳೆಯನ್ನು ದಾಖಲಿಸುವ ನಿರೀಕ್ಷೆಯಿದೆ. ಎಲ್ ನಿನೋ ಮತ್ತು ಇತರ ಪ್ರತಿಕೂಲ ಪರಿಸ್ಥಿತಿಗಳು ಆಗಸ್ಟ್‌ ತಿಂಗಳಲ್ಲಿ ಮಳೆಯನ್ನು ನಿಗ್ರಹಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ (IMD) ಸೋಮವಾರ ತಿಳಿಸಿದೆ. ಮಾನ್ಸೂನ್ ಋತುವಿನಲ್ಲಿ ಮಳೆಯ ಶೇಕಡ 30 ರಷ್ಟು ಮಳೆ ಆಗಸ್ಟ್ ತಿಂಗಳಲ್ಲಿ … Continued

ಹರಿಯಾಣದ ನೂಹ್‌ನಲ್ಲಿ ಧಾರ್ಮಿಕ ಮೆರವಣಿಗೆ ವೇಳೆ ಹಿಂಸಾಚಾರ, ಇಬ್ಬರು ಗೃಹರಕ್ಷಕರು ಸಾವು, 10 ಪೊಲೀಸರಿಗೆ ಗಾಯ : ಇಂಟರ್ನೆಟ್ ಸ್ಥಗಿತ

ಮೇವಾತ್‌ : ಹರಿಯಾಣದ ಮೇವಾತ್ ಪ್ರದೇಶದಲ್ಲಿ ಸೋಮವಾರ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಕಲ್ಲು ತೂರಾಟ ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಹಿಂಸಾಚಾರದಲ್ಲಿ ಇಬ್ಬರು ಗೃಹರಕ್ಷಕರು ಮೃತಪಟ್ಟಿದ್ದು, 10 ಪೊಲೀಸರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಂಸಾಚಾರದಿಂದಾಗಿ ಗುರುಗ್ರಾಮ್ ಬಳಿಯ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದ ಸುಮಾರು 2,500 ಪುರುಷರು, ಮಹಿಳೆಯರು ಮತ್ತು ಮಕ್ಕಳನ್ನು ಪೊಲೀಸರು … Continued

5 ರಾಜ್ಯಗಳಿಗೆ ಕಾಂಗ್ರೆಸ್ ಚುನಾವಣಾ ವೀಕ್ಷಕರ ನೇಮಕ

ನವದೆಹಲಿ: ಕಾಂಗ್ರೆಸ್ ಹೈ ಕಮಾಂಡ್ ಸೋಮವಾರ ಚುನಾವಣೆ ನಡೆಯಲಿರುವ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳಿಗೆ ಚುನಾವಣಾ ವೀಕ್ಷಕರನ್ನು ನೇಮಕ ಮಾಡಿದೆ. ಅಧಿಕೃತ ಪ್ರಕಟಣೆಯ ಪ್ರಕಾರ, ರಾಜಸ್ಥಾನಕ್ಕೆ ಮಧುಸೂಧನ ಮಿಸ್ತ್ರಿ ಅವರನ್ನು ಹಿರಿಯ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಅಲ್ಲದೆ, ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಪಕ್ಷದ ಪ್ರಧಾನ … Continued