ರಾಹುಲ್ ಗಾಂಧಿ ವಯನಾಡ್ ಕಚೇರಿ ಧ್ವಂಸಗೊಳಿಸಿದ ಎಸ್‌ಎಫ್‌ಐ ಕಾರ್ಯಕರ್ತರು

ಕೋಝಿಕೋಡ್ (ಕೇರಳ): ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಕಾರ್ಯಕರ್ತರು ವಯನಾಡಿನ ಕಲ್ಪೆಟ್ಟಾದಲ್ಲಿರುವ ರಾಹುಲ್ ಗಾಂಧಿ ಸಂಸದರ ಕಚೇರಿ ಕಡೆಗೆ ಶುಕ್ರವಾರ ಮಧ್ಯಾಹ್ನ ನಡೆಸಿದ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿತು. ಕಚೇರಿಗೆ ನುಗ್ಗಿದ ಕಾರ್ಯಕರ್ತರು ಕಟ್ಟಡದ ಬಾಗಿಲು, ಕಿಟಕಿಗಳನ್ನು ಒಡೆದು ಹಾಕಿದ್ದಾರೆ. ಗುಡ್ಡಗಾಡು ಪ್ರದೇಶವಾದ ವಯನಾಡಿನಲ್ಲಿ ಈಗ ತೀವ್ರವಾಗಿ ಕಾಡುತ್ತಿರುವ ಪರಿಸರ ಸೂಕ್ಷ್ಮ ವಲಯ (ಇಎಸ್‌ಝಡ್) ವಿಚಾರದಲ್ಲಿ ಸಂಸದರು … Continued

ನೀತಿ ಆಯೋಗದ ನೂತನ ಸಿಇಒ ಆಗಿ ಪರಮೇಶ್ವರನ್‌ ಅಯ್ಯರ್‌ ನೇಮಕ

ನವದೆಹಲಿ: ಐಎಎಸ್‌ (IAS) ಅಧಿಕಾರಿ ಪರಮೇಶ್ವರನ್ ಅಯ್ಯರ್ ಅವರನ್ನು ನೀತಿ (NITI) ಆಯೋಗದ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (CEO) ಶುಕ್ರವಾರ ನೇಮಿಸಲಾಗಿದೆ. ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಇವರ ನೇಮಕಾತಿಯನ್ನು ಪ್ರಕಟಿಸಿದೆ. ಅವರು ಎರಡು ವರ್ಷಗಳ ಅವಧಿಗೆ ಈ ಹುದ್ದೆಯಲ್ಲಿರುತ್ತಾರೆ. ಪ್ರಸ್ತುತ ಸಿಇಒ ಅಮಿತಾಭ್ ಕಾಂತ್ ಅವರ ಅಧಿಕಾರಾವಧಿಯು ಜೂನ್ 30, 2022 ರಂದು … Continued

ಜುಲೈ 1ರಿಂದ ಕೈಗೆ ಸಿಗುವ ಸಂಬಳ, ಕೆಲಸದ ಸಮಯ, ರಜೆಗಳು ಬದಲಾಗಬಹುದು: ವಿವರಗಳು ಇಲ್ಲಿವೆ

ನವದೆಹಲಿ: ಜುಲೈ 1 ರಿಂದ ಹೊಸ ಕಾರ್ಮಿಕ ಕಾನೂನುಗಳನ್ನು ಜಾರಿಗೆ ತರಲು ಕೇಂದ್ರವು ಯೋಜಿಸುತ್ತಿರುವುದರಿಂದ ಕೈಗೆ ಸಂಬಳ, ಉದ್ಯೋಗಿಗಳ ಭವಿಷ್ಯ ನಿಧಿಗೆ ಕೊಡುಗೆ ಮತ್ತು ಕೆಲಸದ ಸಮಯದಲ್ಲಿ ಗಮನಾರ್ಹವಾಗಿ ಬದಲಾಗಬಹುದು. ಹೊಸದಾಗಿ ಸೂಚಿಸಲಾದ ವೇತನ ಸಂಹಿತೆಗಳ ಮಾರ್ಪಾಡುಗಳಲ್ಲಿ ಕೆಲಸದ ಸಮಯ, ಭವಿಷ್ಯ ನಿಧಿ (PF) ಕೊಡುಗೆಗಳಿಗೆ ಹಣ ಹೆಚ್ಚುತ್ತವೆ ಮತ್ತು ಉದ್ಯೋಗಿಗಳ ಕೈಗೆ ಕಡಿಮೆ ಸಂಬಳ … Continued

ನಾಮಪತ್ರ ಸಲ್ಲಿಸಿದ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು

ನವದೆಹಲಿ: ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಶುಕ್ರವಾರ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ಉನ್ನತ ನಾಯಕರ ಸಮ್ಮುಖದಲ್ಲಿ ಇಂದು, ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ನಾಮನಿರ್ದೇಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಪ್ರಸ್ತಾಪಿಸಿದರು, … Continued

ಶರದ್ ಪವಾರ್ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಶೇರ್ ಮಾಡಿದ ಆರೋಪ: ಜಾಮೀನಿನ ನಂತರ ಬಂಧಿತ ನಟಿ ಕೇತಕಿ ಚಿತಳೆ ಬಿಡುಗಡೆ

ಥಾಣೆ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಶೇರ್ ಮಾಡಿದ ಆರೋಪದಲ್ಲಿ ಕಳೆದ ತಿಂಗಳು ಬಂಧಿತರಾಗಿದ್ದ ಮರಾಠಿ ನಟಿ ಕೇತಕಿ ಚಿತಳೆ ಅವರು ಜಿಲ್ಲಾ ನ್ಯಾಯಾಲಯದಿಂದ ಜಾಮೀನು ಪಡೆದ ನಂತರ ನಿನ್ನೆ ಥಾಣೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲಾ ನ್ಯಾಯಾಧೀಶ ಎಚ್‌ಎಂ ಪಟವರ್ಧನ್ ಅವರು ₹ 20,000 ಶ್ಯೂರಿಟಿ … Continued

ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಹಸ್ತಾಂತರಿಸಬೇಕೇ’: ವಿವಾದಕ್ಕೆ ಕಾರಣವಾದ ಮಧ್ಯಪ್ರದೇಶ ನಾಗರಿಕ ಸೇವಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ, ಇಬ್ಬರು ಅಧಿಕಾರಿಗಳು ಡಿಬಾರ್‌

ಇಂದೋರ್/ಭೋಪಾಲ್ : ಮಧಯಪ್ರದೇಶ ರಾಜ್ಯ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಜನರಲ್ ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ ಕಾಶ್ಮೀರದ ಕುರಿತು ವಿವಾದಾತ್ಮಕ ಪ್ರಶ್ನೆಯನ್ನು ಕೇಳಿದ ನಂತರ ಮಧ್ಯಪ್ರದೇಶ ಸಾರ್ವಜನಿಕ ಸೇವಾ ಆಯೋಗ (MPPSC) ಮಂಗಳವಾರ ಪೇಪರ್ ಸೆಟ್ಟರ್ ಮತ್ತು ಮಾಡರೇಟರ್ ಅನ್ನು ಕಪ್ಪುಪಟ್ಟಿಗೆ ಸೇರಿಸಿದೆ. ಭಾನುವಾರ ನಡೆದ ಪರೀಕ್ಷೆಯಿಂದ ಎಂಪಿಪಿಎಸ್‌ಸಿ ವಿವಾದಾತ್ಮಕ ಪ್ರಶ್ನೆಯನ್ನು ಹಿಂತೆಗೆದುಕೊಂಡಿದೆ. ಅಧಿಕಾರಿಗಳ ಪ್ರಕಾರ, ಜಮ್ಮು ಮತ್ತು … Continued

2002ರ ಗುಜರಾತ್ ಗಲಭೆ: ಮೋದಿಗೆ ಎಸ್‌ಐಟಿ ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿದ್ದ ಝಕಿಯಾ ಜಾಫ್ರಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಹಿಂಸಾಚಾರದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ 63 ಮಂದಿಗೆ ವಿಶೇಷ ತನಿಖಾ ತಂಡವು ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಮೃತ ಕಾಂಗ್ರೆಸ್ ನಾಯಕ ಎಹ್ಸಾನ್ ಜಾಫ್ರಿ ಅವರ ವಿಧವೆ ಝಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಫೆಬ್ರವರಿ 28, 2002 ರಂದು ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ … Continued

ಭಾರತದಲ್ಲಿ 17,336 ಹೊಸ ಕೊರೊನಾ ಸೋಂಕು ದಾಖಲು, 13 ಜನರ ಸಾವು

ನವದೆಹಲಿ: ದೇಶದಾದ್ಯಂತ ಶುಕ್ರವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ಹೊಸದಾಗಿ 17,336 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಗುರುವಾರಕ್ಕೆ ಹೋಲಿಸಿದರೆ ಇದು ಶೇ. 30ರಷ್ಟು ಜಾಸ್ತಿಯಾಗಿದೆ. ಗುರುವಾರ 13,313 ಕೊರೊನಾ ಸೋಂಕು ಪ್ರಕರಣ ವರದಿಯಾಗಿತ್ತು. ಕಳೆದ 24 ಗಂಟೆ ಅವಧಿಯಲ್ಲಿ ಅವಧಿಯಲ್ಲಿ 13,059 ಮಂದಿ ಚೇತರಿಸಿಕೊಂಡಿದ್ದು, 13 … Continued

ಅಸ್ಸಾಂ ಪ್ರವಾಹ: ಸಾವಿನ ಸಂಖ್ಯೆ 107ಕ್ಕೆ ಏರಿಕೆ, 45 ಲಕ್ಷ ಸಂತ್ರಸ್ತರ ಪರಿಸ್ಥಿತಿ ಭೀಕರ

ಗುವಾಹತಿ: ಪ್ರವಾಹದಿಂದಾಗಿ ಅಸ್ಸಾಂನಲ್ಲಿ ಕಳೆದ 24 ಗಂಟೆಗಳಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಏಳು ಜನರು ಸಾವಿಗೀಡಾಗಿದ್ದು, ಮಹಾಮಳೆಗೆ ಮೃತರ ಸಂಖ್ಯೆ 107ಕ್ಕೆ ತಲುಪಿದೆ, ಭೂಕುಸಿತದಲ್ಲಿ 17 ಮಂದಿ ಮೃತಪಟ್ಟಿದ್ದಾರೆ. ಒಟ್ಟು 4,536 ಗ್ರಾಮಗಳು ಇನ್ನೂ ಪ್ರವಾಹದ ನೀರಿನಲ್ಲಿ ತತ್ತರಿಸಿವೆ. ಬಾರ್ಪೇಟಾ ಅತ್ಯಂತ ಹೆಚ್ಚು ಹಾನಿಗೊಳಗಾದ ಜಿಲ್ಲೆಯಾಗಿದ್ದು, 10.32 ಲಕ್ಷಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ. ರಾಜ್ಯದ 30 … Continued

ಕೋವಿಡ್‌-19 ಲಸಿಕೆಗಳಿಂದ 2021ರಲ್ಲಿ 42 ಲಕ್ಷಕ್ಕೂ ಹೆಚ್ಚು ಸಂಭವನೀಯ ಸಾವುಗಳನ್ನು ತಡೆಗಟ್ಟಿದ ಭಾರತ: ಲ್ಯಾನ್ಸೆಟ್ ಅಧ್ಯಯನ

ನವದೆಹಲಿ: ಕೋವಿಡ್‌-19 ಲಸಿಕೆಗಳು 2021 ರಲ್ಲಿ ಭಾರತದಲ್ಲಿ 42 ಲಕ್ಷಕ್ಕೂ ಹೆಚ್ಚು ಸಂಭಾವ್ಯ ಸಾವುಗಳನ್ನು ತಡೆಗಟ್ಟಿವೆ ಎಂದು ಅಧ್ಯಯನ ವರದಿಯು ಹೇಳಿಕೊಂಡಿದೆ. ಸಾಂಕ್ರಾಮಿಕ ಸಮಯದಲ್ಲಿ ದೇಶದಲ್ಲಿ “ಹೆಚ್ಚುವರಿ” ಮರಣಗಳ ಅಂದಾಜು ಕಂಡುಹಿಡಿಯಲು ನಡೆಸಿದ ಅಧ್ಯಯನವು ಕೋವಿಡ್‌-19 ಲಸಿಕೆಗಳಿಂದ ಸಂಭವನೀಯ ಸಾವಿನ ಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿದೆ ಎಂದು ಹೇಳಿಕೊಂಡಿದೆ. ದಿ ಲ್ಯಾನ್ಸೆಟ್ ಸಾಂಕ್ರಾಮಿಕ ರೋಗಗಳ ಜರ್ನಲ್‌ನಲ್ಲಿ … Continued