ಜನನಿಬಿಡ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಚಲಿಸಿದ ಲೋಡ್ ತುಂಬಿದ ಟ್ರಾಲಿ…!: ವೀಕ್ಷಿಸಿ

ಅತ್ಯಂತ ಜನನಿಬಿಡ ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡ ಲೋಡ್ ತುಂಬಿದ ಟ್ರಾಲಿಯೊಂದು ಹಿಮ್ಮುಖವಾಗಿ ಚಲಿಸಿ ಆತಂಕ ಸೃಷ್ಟಿಸಿದೆ ಘಟನೆ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಪೂರ್ಣ ಪ್ರಮಾಣದಲ್ಲಿ ಲೋಡ್‌ ಆಗಿರುವ ಟ್ರಾಲಿ ನಿಯಂತ್ರಣ ಕಳೆದುಕೊಂಡ ಪರಿಣಾಮ ರಸ್ತೆಯಲ್ಲಿ ಹಿಮ್ಮುಖವಾಗಿ ಚಲಿಸಿದೆ. ಅದರ ಹಿಂದೆಯೇ ಕೆಲವರು ಕೂಗುತ್ತ ಓಡುವುದು ವಿಡಿಯೊದಲ್ಲಿ ಕಾಣುತ್ತದೆ. ಹಿಮ್ಮುಖವಾಗಿ ಚಲಿಸಿದ ಟ್ರಾಲಿ … Continued

ನವೆಂಬರ್ 30 ರೊಳಗೆ ಭಾರತದ 90% ಜನರಿಗೆ ಕೋವಿಡ್‌ 1ನೇ ಡೋಸ್ ನೀಡುವ ಗುರಿ, ಸದ್ಯಕ್ಕೆ ಬೂಸ್ಟರ್ ಡೋಸ್ ಇಲ್ಲ

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ, ‘ಹರ್ ಘರ್ ದಸ್ತಕ್’ ಉಪಕ್ರಮದ ಅಡಿಯಲ್ಲಿ ಭಾರತವು ನವೆಂಬರ್ 30 ರೊಳಗೆ 90% ವಯಸ್ಕರಿಗೆ 1ನೇ ಡೋಸ್ ಕೋವಿಡ್‌-19 ಲಸಿಕೆ ನೀಡುವ ಗುರಿ ಹೊಂದಿದೆ. ಇದನ್ನು ನವೆಂಬರ್ 3ರಂದು ಪ್ರಾರಂಭಿಸಲಾಗಿದ್ದು, ಈ ತಿಂಗಳ ಅವಧಿಯ ಅಭಿಯಾನವು ಇನ್ನೂ ಡೋಸ್ ತೆಗೆದುಕೊಳ್ಳದವರಿಗೆ ಮತ್ತು ಎರಡನೇ ಡೋಸ್ ಅವಧಿ ಮೀರಿದವರಿಗೆ ಮನೆ-ಮನೆಗೆ ಲಸಿಕೆ ನೀಡುವುದನ್ನು … Continued

ಕಾಶ್ಮೀರ ಕಣಿವೆಯಲ್ಲಿ 38 ಪಾಕಿಸ್ತಾನಿ ಭಯೋತ್ಪಾದಕರು ಸಕ್ರಿಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನದಿಂದ ಬಂದ 38 ಭಯೋತ್ಪಾದಕರು ಸಕ್ರಿಯರಾಗಿದ್ದಾರೆ, ಭಯೋತ್ಪಾದಕರನ್ನು ಮಟ್ಟಹಾಕಲು ಭದ್ರತಾ ಪಡೆಗಳು ಶೀಘ್ರದಲ್ಲೇ ಕಾರ್ಯಾಚರಣೆಯನ್ನು ಪ್ರಾರಂಭಿಸಲಿವೆ ಎಂದು ವರದಿಗಳು ತಿಳಿಸಿವೆ. ವರದಿಗಳ ಪ್ರಕಾರ, 38 ಭಯೋತ್ಪಾದಕರಲ್ಲಿ 27 ಮಂದಿ ಲಷ್ಕರ್-ಎ-ತೈಬಾ (ಎಲ್‌ಇಟಿ) ಗೆ ಸೇರಿದವರು ಮತ್ತು 11 ಮಂದಿ ಜೈಷ್-ಎ-ಮೊಹಮ್ಮದ್ (ಜೆಇಎಂ) ಜೊತೆ ಸಂಬಂಧ ಹೊಂದಿದ್ದಾರೆ. ಈ ಪಾಕಿಸ್ತಾನಿ ಭಯೋತ್ಪಾದಕರು … Continued

ಭಾರತದಲ್ಲಿ 11,850 ಹೊಸ ಕೋವಿಡ್ ಪ್ರಕರಣಗಳು ದಾಖಲು, ನಿನ್ನೆಗಿಂತ 5.3% ಕಡಿಮೆ

ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ 11,850 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಶುಕ್ರವಾರಕ್ಕಿಂತ 5.3 ರಷ್ಟು ಕಡಿಮೆಯಾಗಿದೆ, ಇದು ಒಟ್ಟು ಸಂಖ್ಯೆಯನ್ನು 3,44,26,036 ಕ್ಕೆ ಒಯ್ದಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 555 ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 4,63,245ಕ್ಕೆ ಏರಿದೆ. ಇದೇ ಸಮಯದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 12,403 … Continued

ಎಬಿಪಿ-ಸಿವೋಟರ್- ಐಎಎನ್‌ಎಸ್‌ ಸಮೀಕ್ಷೆ: ಉತ್ತರ ಪ್ರದೇಶ ಚುನಾವಣೆಯಲ್ಲಿ 108 ಸ್ಥಾನ ಕಳೆದುಕೊಳ್ಳಲಿರುವ ಬಿಜೆಪಿ..ಆದ್ರೂ ಅಧಿಕಾರಕ್ಕೆ

ನವದೆಹಲಿ: ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ಪಕ್ಷವಾಗಿ ಸಮೀಕ್ಷೆಯಲ್ಲಿ ಕಂಡುಬರುತ್ತಿದೆ. ಆದರೆ ಸಮಾಜವಾದಿ ಪಕ್ಷವು ವೇಗವಾಗಿ ತನ್ನ ಬಲ ಹೆಚ್ಚಿಸಿಕೊಳ್ಳುತ್ತಿದ್ದು, ಬಿಜೆಪಿ ಈಗ 108 ಸ್ಥಾನಗಳನ್ನು ಕಳೆದುಕೊಳ್ಳುತ್ತಿದೆ ಎಂದು ಎಬಿಪಿ-ಸಿವೋಟರ್- ಐಎಎನ್‌ಎಸ್‌ ಸಮೀಕ್ಷೆ ಹೇಳಿದೆ. ಆದರೆ ಉತ್ತರಾಖಂಡ ಮತ್ತು ಪಂಜಾಬ್‌ನಲ್ಲಿ ಕಾಂಗ್ರೆಸ್ ಪ್ರಬಲವಾದ ಪುನರಾಗಮನವನ್ನು ಮಾಡುತ್ತಿದೆ ಎಂದು ಅದು … Continued

ನ.​​16ರಿಂದ ಭಕ್ತರ ದರ್ಶನಕ್ಕೆ ಶಬರಿಮಲೆ ಮುಕ್ತ.. ಪ್ರತಿದಿನ 25 ಸಾವಿರ ಭಕ್ತರಿಗೆ ಮಾತ್ರ ಅವಕಾಶ

ತಿರುವನಂತಪುರಂ(ಕೇರಳ) : ಭಾರತದ ಅತ್ಯಂತ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರುವ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ನವೆಂಬರ್​ 16ದಿಂದ ಭಕ್ತರ ದರ್ಶನಕ್ಕೆ ಮುಕ್ತವಾಗಲಿದೆ. ಪ್ರತಿದಿನ 25 ಸಾವಿರ ಭಕ್ತಾಧಿಗಳಿಗೆ ದರ್ಶನ ಪಡೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದು ದೇವಾಲಯದ ಅಧ್ಯಕ್ಷರು ತಿಳಿಸಿದ್ದಾರೆ. ಎರಡು ತಿಂಗಳ ವಾರ್ಷಿಕ ಧಾರ್ಮಿಕ ಯಾತ್ರೆಯ ಅವಧಿ ಆರಂಭಗೊಂಡಿರುವ ಕಾರಣ, ಪ್ರತಿದಿನ 25 ಸಾವಿರ ಭಕ್ತರಿಗೆ … Continued

ಕೇರಳದ ವಯನಾಡ್ ಜಿಲ್ಲೆಯಲ್ಲಿ ನೊರೊ ವೈರಸ್ ಸೋಂಕು ಪತ್ತೆ..!

ವಯನಾಡು : ಕೊರೊನಾ ವೈರಸ್‌ ಸೋಂಕಿನ ಆರ್ಭಟದ ಮಧ್ಯೆಯೇ, ಝಿಕಾ ವೈರಸ್‌ ನಂತರ ಕೇರಳದಲ್ಲಿ ಈಗ ನೊರೊ ವೈರಸ್‌ ಪತ್ತೆಯಾಗಿದೆ. ನೊರೊ ವೈರಸ್‌ (Norovirus) ಪ್ರಕರಣದ ಕೇರಳದಲ್ಲಿ ದೃಢಪಟ್ಟಿದೆ. ವಯನಾಡಿನ ವೈತಿರಿ ಜಿಲ್ಲೆಯ ಪೊಕೋಡ್‌ನಲ್ಲಿರುವ ಪಶುವೈದ್ಯಕೀಯ ಕಾಲೇಜಿನ 13 ವಿದ್ಯಾರ್ಥಿಗಳಲ್ಲಿ ಮಾರಣಾಂತಿಕ ವೈರಸ್‌ ಸೋಂಕು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಕೇರಳ ಸರಕಾರ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ … Continued

ದೆಹಲಿಯಲ್ಲಿ ಉಸಿರುಗಟ್ಟಿಸ್ತಿದೆ ವಾತಾವರಣ : ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರ ಬರುವಂತೆ ಸಲಹೆ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅತಿಯಾದ ವಾಯು ಮಾಲಿನ್ಯ ಉಂಟಾದ ಹಿನ್ನೆಲೆಯಲ್ಲಿ ಜನರು ತಮ್ಮ ಮನೆಗಳಿಂದ ಹೊರಗೆ ಬರಬೇಡಿ ಎಂದು ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ಸಲಹೆ ನೀಡಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ದೆಹಲಿಯ ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ತಮ್ಮ ವಾಹನ ಬಳಕೆಯನ್ನು ಕನಿಷ್ಠ 30 ಪ್ರತಿಶತದಷ್ಟು ಕಡಿತಗೊಳಿಸುವಂತೆ ಸೂಚಿಸಿದೆ. ನಗರದ ನಾಗರಿಕರು … Continued

ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್ ತನ್ನ ಭುಜದ ಮೇಲೆ ಹೊತ್ತೊಯ್ದು ರಕ್ಷಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

ಚೆನ್ನೈ: ನಗರದ ಭೀಕರ ಮಳೆ ಮಧ್ಯೆಯೇ ಎಚ್ಚರ ತಪ್ಪಿದ್ದ ಯುವಕನೊಬ್ಬನನ್ನು ಮಹಿಳಾ ಪೊಲೀಸ್‌ ಇನ್ಸ್ಪೆಕ್ಟರ್‌ ಭುಜದ ಮೇಲೆ ಹೊತೊಯ್ದು ನಂತರ ರಿಕ್ಷಾದಲ್ಲಿ ಹಾಕಿ ಚೆನ್ನೈ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಗುರುವಾರ, ಪೊಲೀಸ್ ಅಧಿಕಾರಿ ರಾಜೇಶ್ವರಿ ಅವರು ಭಾರೀ ಮಳೆಯ ನಡುವೆ ಚೆನ್ನೈನ ಟಿಪಿ ಛತ್ರಂ ಪ್ರದೇಶದ … Continued

ಸಾಮೂಹಿಕ ಅತ್ಯಾಚಾರ ಪ್ರಕರಣ; ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿಗೆ ಜೀವಾವಧಿ ಶಿಕ್ಷೆ ಪ್ರಕಟ

ಲಕ್ನೋ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಸಾದ್​ ಪ್ರಜಾಪತಿ (Gayatri Prajapati) ಹಾಗೂ ಇತರ ಇಬ್ಬರು ಆರೋಪಿಗಳಿಗೆ ಲಕ್ನೋ ವಿಶೇಷ ಕೋರ್ಟ್‌ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಉತ್ತರಪ್ರದೇಶದ ಸಮಾಜವಾದಿ ಪಕ್ಷದ  ಮುಖಂಡ ಹಾಗೂ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಸೇರಿ ಮೂವರು ಅಪರಾಧಿಗಳಿಗೆ ಜೀವಾವಧಿ … Continued