ಕ್ರಿಪ್ಟೋ ಕರೆನ್ಸಿ ತಪ್ಪು ಕೈಗಳಿಗೆ ಹೋಗದಂತೆ ಖಚಿತ ಪಡಿಸಿಕೊಳ್ಳಬೇಕು: ಜಾಗತಿಕ ನಾಯಕರಿಗೆ ಕರೆ ನೀಡಿದ ಪ್ರಧಾನಿ ಮೋದಿ

ನವದೆಹಲಿ: ದೇಶಾದ್ಯಂತ ಭಾರೀ ಸದ್ದು ಮಾಡುತ್ತಿರುವ ಬಿಟ್ ಕಾಯಿನ್, ಕ್ರಿಪ್ಟೋ ಕರೆನ್ಸಿಯ ಬಗ್ಗೆ ಮೌನ ಮುರಿದಿರುವ ಪ್ರಧಾನಿ ನರೇಂದ್ರ ಮೋದಿ ಡಿಜಿಟಲ್ ಕರೆನ್ಸಿಯಲ್ಲಿ ಲಕ್ಷಾಂತರ ಭಾರತೀಯರು ವಿದೇಶಗಳಲ್ಲಿ ಮಾಡಿದ ಹೂಡಿಕೆ ನಿರ್ವಹಿಸಲು ಮತ್ತು ಮೇಲ್ವಿಚಾರಣೆಗೆ ಅಗತ್ಯವಿರುವ ನಿಯಂತ್ರಣದ ಚೌಕಟ್ಟು ರೂಪಿಸುವ ಸಂಬಂಧ ಗಂಭೀರವಾಗಿ ಪರಿಗಣಿಸಲಾಗುತ್ತಿದೆ. ಯಾಕೆಂದರೆ ಕ್ರಿಪ್ಟೋ ಕರೆನ್ಸಿ ತಪ್ಪು ಕೈಗಳಿಗೆ ಹೋಗದಂತೆ ಖಚಿತಪಡಿಸಿಕೊಳ್ಳ ಬೇಕಿದೆ … Continued

ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳಿಗೆ ತಾಯಿಯಾದ ಬಾಲಿವುಡ್‌ ನಟಿ ಪ್ರೀತಿ ಜಿಂಟಾ

ಮುಂಬೈ: ಬಾಲಿವುಡ್ ನಟಿ ಪ್ರೀತಿ ಜಿಂಟಾ ತಾಯಿಯಾಗಿದ್ದು, ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಅವರು ಬಾಡಿಗೆ ತಾಯ್ತನದ (Surrogacy) ಮೂಲಕ ಪ್ರೀತಿ ಜಿಂಟಾ ಹಾಗೂ  ಪತಿ ಜಿನ್ ಗುಡ್​ಎನಾಫ್ ದಂಪತಿ ಅವಳಿ- ಜವಳಿ ಮಕ್ಕಳಿಗೆ ಪೋಷಕರಾಗಿದ್ದಾರೆ. ಮಕ್ಕಳಿಗೆ ಜೈ ಜಿಂಟಾ ಗುಡ್​​ಎನಾಫ್ಹಾಗೂ ಜಿಯಾ ಜಿಂಟಾ ಗುಡ್​​ಎನಾಫ್ ಎಂದು ನಾಮಕರಣ ಮಾಡಲಾಗಿದೆ ಎಂದು … Continued

ಹಸುವಿನ ಸಗಣಿ ತಿನ್ನುವ ಹರ್ಯಾಣದ ತಜ್ಞ ವೈದ್ಯ..ಆರೋಗ್ಯಕ್ಕಾಗಿ ತಿಂತೇನೆ ಅಂತಾರೆ….ವೀಕ್ಷಿಸಿ

ಹಸುವಿನ ಸಗಣಿ ಮತ್ತು ಮೂತ್ರವು ಹಲವಾರು ರೋಗಗಳನ್ನು ಗುಣಪಡಿಸುವ ಶಕ್ತಿಹೊಂದಿದೆ ಎಂದು ಭಾರತೀಯರು ನಂಬಿದ್ದಾರೆ. ಹಸುವಿನ ಸಗಣಿ ಮತ್ತು ಮೂತ್ರದ ಬಗೆಗಿನ ಅದ್ಭುತ ಪ್ರಯೋಜನಗಳ ಕುರಿತು ಸಾಕಷ್ಟು ವಿಡಿಯೊಗಳು ಆನ್‌ಲೈನ್‌ನಲ್ಲಿ ಸಿಗುತ್ತವೆ. ಈಗ ವೈದ್ಯರೊಬ್ಬರು ಹಸುವಿನ ಸಗಣಿ ತಿನ್ನುತ್ತ ಅದು ಮನಸ್ಸು, ದೇಹ ಮತ್ತು ಆತ್ಮವನ್ನು ಶುದ್ಧಗೊಳಿಸುತ್ತದೆ ಎಂದು ಹೇಳಿರುವ ವಿಡಿಯೋ ವೈರಲ್ ಆಗಿದೆ. ವಿಡಿಯೊದಲ್ಲಿ, … Continued

ಭಾರತದಲ್ಲಿ 11,919 ಹೊಸ ಕೋವಿಡ್-19 ಪ್ರಕರಣಗಳು ದಾಖಲು

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 11,919 ಹೊಸ ಪ್ರಕರಣಗಳು ದಾಖಲಾಗಿದೆ. 11,242 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾಋೆ ಹಾಗೂ 470 ಸಾವುಗಳು ವರದಿಯಾಗಿವೆ. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಸಕ್ರಿಯ ಪ್ರಕರಣ 1,28,762ಕ್ಕೆ ಈಗ ಏರಿದೆ. ಕೇರಳದಲ್ಲಿ 6,849 ಹೊಸ ಪ್ರಕರಣಗಳು, 6,046 ಚೇತರಿಕೆ ಮತ್ತು 61 ಸಾವುಗಳು ವರದಿಯಾಗಿವೆ. 24 ಗಂಟೆಗಳ ಅವಧಿಯಲ್ಲಿ ಸಕ್ರಿಯ … Continued

ಸಂಸದೆ ನುಸ್ರತ್ ಜಹಾನ್-ನಿಖಿಲ್ ಜೈನ್ ಮದುವೆಗೆ ಕಾನೂನು ಮಾನ್ಯತೆಯಿಲ್ಲ: ಕೋಲ್ಕತ್ತಾ ಕೋರ್ಟ್

ಕೋಲ್ಕತ್ತಾ: ನಟಿ ಹಾಗೂ ತೃಣಮೂಲ ಕಾಂಗ್ರೆಸ್‌ ಸಂಸದೆ ನುಸ್ರತ್ ಜಹಾನ್ ಮತ್ತು ಉದ್ಯಮಿ ನಿಖಿಲ್ ಜೈನ್ ನಡುವಿನ ವಿವಾಹವು ‘ಕಾನೂನು ಮಾನ್ಯವಲ್ಲ’ ಎಂದು ಕೋಲ್ಕತ್ತಾ ನ್ಯಾಯಾಲಯ ಪ್ರಕಟಿಸಿದೆ. ನಿಖಿಲ್ ಜೈನ್ ಅವರನ್ನು ನುಸ್ರತ್ ಜಹಾನ್ ಜೂನ್ 2019 ರಲ್ಲಿ ಟರ್ಕಿಯ ಬೋಡ್ರಮ್ ಎಂಬ ಪಟ್ಟಣದಲ್ಲಿ ವಿವಾಹವಾದರು ಮತ್ತು ಪಾಶ್ಚಿಮಾತ್ಯ ಮತ್ತು ಭಾರತೀಯ ಶೈಲಿ ಮತ್ತು ಹಿಂದೂ … Continued

ಪಾಕ್ ಜೈಲಿನಲ್ಲಿರುವ ಭಾರತೀಯ ನೌಕಾಪಡೆ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವಗೆ ಮೇಲ್ಮನವಿ ಸಲ್ಲಿಸಲು ಪಾಕಿಸ್ತಾನ ಸಂಸತ್ತು ಅನುಮತಿ

ಇಸ್ಲಾಮಾಬಾದ್: ಗೂಢಚರ್ಯೆ ಆರೋಪದ ಮೇಲೆ ಪಾಕಿಸ್ತಾನದ ಸೇನಾ ಕೋರ್ಟ್​ನಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಕಮಾಂಡರ್ ಕುಲಭೂಷಣ್ ಜಾಧವ್ ಅವರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡುವ ಮಸೂದೆಯನ್ನು ಪಾಕಿಸ್ತಾನದ ಸಂಸತ್ತು ಅಂಗೀಕರಿಸಿದೆ. ಅಂತಾರಾಷ್ಟ್ರೀಯ ನ್ಯಾಯಮಂಡಳಿ ತೀರ್ಪು ಜಾರಿಗೆ ತರುವ ಉದ್ದೇಶದಿಂದ ಪಾಕಿಸ್ತಾನದ ಸಂಸತ್ತು ಈ ನಿರ್ಧಾರ ತೆಗೆದುಕೊಂಡಿದೆ. ಪಾಕಿಸ್ತಾನದ ಕಾನೂನು ಸಚಿವ ಫರೋಘ್ … Continued

ಸ್ಕ್ರ್ಯಾಪ್‌ನಿಂದ ಐರನ್ ಮ್ಯಾನ್ ಸೂಟ್ ನಿರ್ಮಿಸಿದ ಹುಡುಗನಿಗೆ ಸಹಾಯ: ತನ್ನ ಮಾತು ಉಳಿಸಿಕೊಂಡ ಆನಂದ್ ಮಹೀಂದ್ರಾ

ಇಂಫಾಲ್: ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ತಮ್ಮ ಟ್ವಿಟರ್ ಟೈಮ್‌ಲೈನ್‌ನಲ್ಲಿ ಭಾರತದ ವಿವಿಧ ಭಾಗಗಳಲ್ಲಿ ಜನರು ಮತ್ತು ಅವರ ಸಾಧನೆಗಳ ಬಗ್ಗೆ ಸ್ಫೂರ್ತಿದಾಯಕ ಮತ್ತು ವಿಶೇಷ ಕಥೆಗಳನ್ನು ಹಂಚಿಕೊಳ್ಳುತ್ತಾರೆ. ಸೆಪ್ಟೆಂಬರ್ 30 ರಂದು, ಉದ್ಯಮಿ ಆನಂದ ಮಹೀಂದ್ರಾ ಅವರು ಮಣಿಪುರದ ಯುವಕನನ್ನು ಸ್ಕ್ರ್ಯಾಪ್ನಿಂದ ಐರನ್ ಮ್ಯಾನ್ ಸೂಟ್ ನಿರ್ಮಿಸಿದ ಯುವಕನ ಕಥೆಯನ್ನು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ … Continued

ಇದೇ ಮೊದಲ ಬಾರಿಗೆ, ಭಾರತದಲ್ಲಿ ಎರಡೂ ಕೋವಿಡ್-19 ಲಸಿಕೆ ಪಡೆದವರ ಸಂಖ್ಯೆ ಒಂದೇ ಲಸಿಕೆ ಪಡೆದವರಿಗಿಂತ ಹೆಚ್ಚಾಯ್ತು..!

ನವದೆಹಲಿ: ಇದೇ ಮೊದಲ ಬಾರಿಗೆ, ಕೋವಿಡ್-19 ವಿರುದ್ಧ ಸಂಪೂರ್ಣ ಲಸಿಕೆ ಪಡೆದ ಭಾರತೀಯರ ಸಂಖ್ಯೆ ಭಾಗಶಃ ಲಸಿಕೆ ಪಡೆದ ಅರ್ಹ ಜನಸಂಖ್ಯೆಗಿಂತ ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಬುಧವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ‘ಹರ್ ಘರ್ ದಸ್ತಕ್’ ಅಭಿಯಾನದಿಂದಾಗಿ ಈ ಸಾಧನೆ ಸಾಧ್ಯವಾಗಿದೆ ಎಂದು ಆರೋಗ್ಯ ಸಚಿವರು ಹೇಳಿದರು. … Continued

ಪರಮ್ ಬೀರ್ ಸಿಂಗ್ ‘ಘೋಷಿತ ಅಪರಾಧಿ’ ಎಂದು ಘೋಷಿಸಲು ಮುಂಬೈ ನ್ಯಾಯಾಲಯ ಅನುಮತಿ

ಮುಂಬೈ: ಹಫ್ತಾ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರನ್ನು ‘ಘೋಷಿತ ಅಪರಾಧಿ’ ಎಂದು ಮುಂಬೈ ಕೋರ್ಟ್ ಬುಧವಾರ ಘೋಷಿಸಿದೆ. ತಲೆಮರೆಸಿಕೊಂಡಿರುವ ಹಿರಿಯ ಐಪಿಎಸ್ ಅಧಿಕಾರಿ ವಿರುದ್ಧ ಈಗಾಗಲೇ ಮೂರು ಬಾರಿ ಜಾಮೀನು ರಹಿತ ಬಂಧನ ವಾರಂಟ್ ಜಾರಿಗೊಳಿಸಿದ್ದ ಮುಂಬೈ ಮ್ಯಾಜಿಸ್ಟ್ರೇಟ್ ಕೋರ್ಟ್ ಈಗ ಪೊಲೀಸ್ ಅಧಿಕಾರಿ ಘೋಷಿತ … Continued

ಕನಸಿನಲ್ಲಿ ಕಾಣಿಸಿಕೊಳ್ಳುವ ದೆವ್ವಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆ..!

ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಪೊಲೀಸ್ ಪೇದೆಯೊಬ್ಬರು ದೆವ್ವಕ್ಕೆ ಹೆದರಿ ತಮ್ಮ ಪೊಲೀಸ್ ಕ್ವಾರ್ಟರ್ಸ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ತಮಿಳುನಾಡಿನ ಕಲ್ಲಾಕುರಿಚಿ ಜಿಲ್ಲೆಯ ಪೆರುಂಬಕ್ಕಂನ ಪ್ರಭಾಕರನ್ (33) ಅವರ ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ಶವವಾಗಿ ಪತ್ತೆಯಾದವರು ಎಂದು ಗುರುತಿಸಲಾಗಿದೆ. ಕಡಲೂರು ಸಶಸ್ತ್ರ ಪೊಲೀಸ್‌ನಲ್ಲಿ ಮೊದಲ ಕಾನ್‌ಸ್ಟೆಬಲ್ ಆಗಿ ಸೇವೆ ಸಲ್ಲಿಸಿದ ಪ್ರಭಾಕರನ್ … Continued