ದೆಹಲಿಯಲ್ಲಿ ಪಾಕ್ ಉಗ್ರನ ಬಂಧನ, ಭಯೋತ್ಪಾದಕ ದಾಳಿ ವಿಫಲಗೊಳಿಸಿದ ದೆಹಲಿ ಪೊಲೀಸರು: ಎಕೆ-47, ಹ್ಯಾಂಡ್ ಗ್ರೆನೇಡ್ ವಶಕ್ಕೆ

ನವದೆಹಲಿ: ನವರಾತ್ರಿಯಲ್ಲಿ ದೆಹಲಿಯಲ್ಲಿ ಭೀಕರ ಭಯೋತ್ಪಾದಕ ದಾಳಿ ಮಾಡಲು ಸಂಚು ರೂಪಿಸಿದ್ದ ಪಾಕಿಸ್ತಾನಿ ಮೂಲದ ಭಯೋತ್ಪಾದಕನನ್ನು ದೆಹಲಿ ಪೊಲೀಸರ ವಿಶೇಷ ವಿಭಾಗವು ಮಂಗಳವಾರ ನಗರದಲ್ಲಿ ಬಂಧಿಸಿತು. ಭಯೋತ್ಪಾದಕ ಮೊಹಮ್ಮದ್ ಅಶ್ರಫ್ ಪಾಕಿಸ್ತಾನದ ಪಂಜಾಬ್ ನಿವಾಸಿಯಾಗಿದ್ದು, ಆತನನ್ನು ಪೂರ್ವ ದೆಹಲಿಯ ಲಕ್ಷ್ಮಿ ನಗರದ ರಮೇಶ್ ಪಾರ್ಕ್ ನಿಂದ ಬಂಧಿಸಲಾಯಿತು. ಆತನ ಬಳಿಯಿಂದ ಎಕೆ -47 ಅಸ್ಸಾಲ್ಟ್ ರೈಫಲ್, … Continued

ಭಾರತದಲ್ಲಿ 14,313 ಹೊಸ ಕೋವಿಡ್ ಪ್ರಕರಣಗಳು ದಾಖಲು, 7 ತಿಂಗಳ ನಂತರ ದೈನಂದಿನ ಪ್ರಕರಣಗಳಲ್ಲಿ ಭಾರೀ ಇಳಿಕೆ

ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ ಒಟ್ಟು 14,313 ಹೊಸ ಕೋವಿಡ್ -19 ಪ್ರಕರಣಗಳನ್ನು ವರದಿ ಮಾಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ, ದೇಶದಲ್ಲಿ 181 ಸಾವುಗಳು ದಾಖಲಾಗಿವೆ, ಇದರಿಂದಾಗಿ ಸಾವಿನ ಸಂಖ್ಯೆ 4,50,963 ಕ್ಕೆ ತಲುಪಿದೆ. ಇದರೊಂದಿಗೆ, ಸಕ್ರಿಯ ಕೋವಿಡ್ -19 ಪ್ರಕರಣಗಳು ಈಗ 2,14,900 … Continued

ಜಮ್ಮು-ಕಾಶ್ಮೀರದ ಶೋಪಿಯಾನ್​ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗಿನ ರಾತ್ರಿಯ ಎನ್ಕೌಂಟರ್‌ನಲ್ಲಿ ಸ್ಥಳೀಯರಲ್ಲದ ಬೀದಿ ವ್ಯಾಪಾರಿ ಹತ್ಯೆಯಲ್ಲಿ ಭಾಗಿಯಾದ ಒಬ್ಬ ಸೇರಿದಂತೆ ದಿ ರೆಸಿಸ್ಟೆನ್ಸ್ ಫ್ರಂಟ್‌ನ (ಟಿಆರ್‌ಎಫ್) ಮೂವರು ಉಗ್ರರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭದ್ರತಾ ಪಡೆಗಳು ಸೋಮವಾರ ಸಂಜೆ ದಕ್ಷಿಣ ಕಾಶ್ಮೀರದ ಶೋಪಿಯಾನ್ ನ ತುಲ್ರಾನ್, ಇಮಾಮ್ಸಹಾಬ್ ಪ್ರದೇಶದಲ್ಲಿ ಉಗ್ರರು … Continued

ಆರ್ಯನ್‌ ಗುರಿಯಾಗಲು, ಖಾನ್ ಸರ್ ನೇಮ್ ಕಾರಣ”: ನಾಲಿಗೆ ಹರಿಬಿಟ್ಟ ಮೆಹಬೂಬಾ ಮುಫ್ತಿ

ಶ್ರೀನಗರ: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಡ್ರಗ್‌ ಪ್ರಕರಣದಲ್ಲಿ ಬಂಧನ ಆಗಿರುವ ವಿಚಾರದಲ್ಲಿ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳ ವಿರುದ್ಧ ಪಿಡಿಪಿ ಮುಖ್ಯಸ್ಥೆ ಹಾಗೂ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ವಾಗ್ದಾಳಿ ನಡೆಸಿದ್ದಾರೆ. “ಕೇವಲ ಸರ್‌ನೇಮ್‌ ಖಾನ್‌ ಎಂದು ಇರುವುದಕ್ಕೆ ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಅವರನ್ನು … Continued

ಜಮ್ಮು-ಕಾಶ್ಮೀರದಲ್ಲಿ ಐವರು ಯೋಧರು ಹುತಾತ್ಮ

ನವದೆಹಲಿ : ಜಮ್ಮು-ಕಾಶ್ಮೀರದ ರಜೌರಿ ಸೆಕ್ಟರ್ ನ ಪೀರ್ ಪಂಜಾಲ್ ವಲಯದ ಪ್ರದೇಶದಲ್ಲಿ ಸೋಮವಾರ ನಡೆದ ಎನ್ ಕೌಂಟರ್ ಕಾರ್ಯಾಚರಣೆ ವೇಳೆ ಉಗ್ರರು ನಡೆಸಿದ ಪ್ರತಿದಾಳಿಯಲ್ಲಿ ನಾಲ್ವರು ಸೈನಿಕರು ಹಾಗೂ ಸೇನಾ ಅಧಿಕಾರಿ ಸೇರಿದಂತೆ ಐವರು ಹುತಾತ್ಮರಾಗಿರುವ ಕುರಿತು ರಾಷ್ಟ್ರೀಯ ಸುದ್ದಿ ವಾಹಿನಿಗಳು ವರದಿ ಬಿತ್ತರಿಸಿವೆ. ಆದರೆ ಈವರೆಗೂ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು … Continued

ಲಖಿಂಪುರ ಹಿಂಸಾಚಾರ: ಕೇಂದ್ರ ಸಚಿವರ ಪುತ್ರ ಆಶಿಶ್‌ ಮಿಶ್ರಾ 3 ದಿನ ಪೊಲೀಸ್ ಕಸ್ಟಡಿಗೆ

ಲಕ್ನೋ: ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಬಂಧನದಲ್ಲಿರುವ ಕೇಂದ್ರ ಗೃಹ ರಾಜ್ಯ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾನನ್ನು ನ್ಯಾಯಾಲಯ ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಆಶಿಶ್ ಮಿಶ್ರಾಗೆ ಕೋರ್ಟ್‌ ಶಾಕ್ ನೀಡಿದ್ದು, ಮೂರು ದಿನಗಳ ಕಾಲ ಪೊಲೀಸರ ವಿಚಾರಣೆ ಎದುರಿಸಬೇಕಿದೆ. ಶನಿವಾರ ವಿಚಾರಣೆಗೆ ಹಾಜರಾಗಿದ್ದ ಆರೋಪಿ ಆಶಿಶ್ … Continued

ರಾಷ್ಟ್ರ ಪ್ರಶಸ್ತಿ ವಿಜೇತ ಹೆಸರಾಂತ ನಟ ನೆಡುಮುಡಿ ವೇಣು ನಿಧನ

ಮಲಯಾಳಂನ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ನೆಡುಮುಡಿ ವೇಣು ಇಂದು (ಸೋಮವಾರ) ನಿಧನರಾಗಿದ್ದಾರೆ. ಹೆಸರಾಂತ ನಟ ವೇಣು ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೋವಿಡ್ -19 ರಿಂದ ಚೇತರಿಸಿಕೊಂಡ ನಂತರ ಲಿವರ್ ಸಮಸ್ಯೆ ಹಾಗೂ ಇತರೆ ಕಾಯಿಲೆಗಳಿಂದ ಬಳಲುತ್ತಿದ್ದ 73 ವರ್ಷದ ವೇಣು ಅವರು ಚಿಕಿತ್ಸೆ ಪಲಕಾರಿಯಾಗಿದೇ ಇಂದು ಮಧ್ಯಾಹ್ನದ ವೇಳೆಗೆ ಕೊನೆಯುಸಿರೆಳೆದಿದ್ದಾರೆ. ಅಲಪುಳದ ನೆಡುಮುಡಿಯಲ್ಲಿ ಪಿ. … Continued

ಮನೆಯಲ್ಲಿ ಹಣವೇ ಇಲ್ಲದಿರುವಾಗ ಲಾಕ್ ಮಾಡುವ ಅಗತ್ಯವೇನಿತ್ತು?’: ಕಳ್ಳತನ ಮಾಡಿದ ಮನೆ ಮಾಲಕ-ಅಧಿಕಾರಿಗೆ ಪತ್ರ ಬರೆದಿಟ್ಟು ಹೋದ ಕಳ್ಳರು..!

ಭೋಪಾಲ: ಮಧ್ಯಪ್ರದೇಶದ ಉಪ ಜಿಲ್ಲಾಧಿಕಾರಿಯ ಮನೆಗೆ ಕಳ್ಳತನ ಮಾಡಲು ನುಗ್ಗಿದ ಕಳ್ಳರು ಮನೆಯಲ್ಲಿ ಏನೂ ಸಿಗದಿದ್ದಾಗ ಈ ಕುರಿತು ಪತ್ರವೊಂದನ್ನು ಬರೆದಿಟ್ಟು ಹೋದ ವಿಚಿತ್ರ ವಿದ್ಯಮಾನ ನಡೆದ ಬಗ್ಗೆ ವರದಿಯಾಗಿದೆ. “ಹಣವೇ ಇಲ್ಲದಿರುವಾಗ ಲಾಕ್ ಮಾಡುವ ಅಗತ್ಯವೇನಿತ್ತು? (ಜಬ್ ಪೈಸೆ ನಹೀ ತೇ ತೋ ಲಾಕ್ ನಹಿ ಕರ್ನಾ ಥಾ ನಾ ಕಲೆಕ್ಟರ್..? ) ಎಂದು … Continued

ಕಾಶ್ಮೀರದಲ್ಲಿ ಎನ್‌ ಕೌಂಟರಿನಲ್ಲಿ ಇಬ್ಬರು ಉಗ್ರರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನೆ ನಡೆಸಿದ ಕಾರ್ಯಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಘಟನೆಯಲ್ಲಿ ಒಬ್ಬ ಪೊಲೀಸ್ ಸಹ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ. ಅನಂತ್‍ನಾಗ್ ಜಿಲ್ಲೆಗಳ ಗಡಿ ಭಾಗಗಳಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿಯನ್ನಾಧರಿಸಿ ಭದ್ರತಾ ಪಡೆಗಳು ಶೋಧ ಕಾರ್ಯ ನಡೆಸುತ್ತಿದ್ದಾಗ ಉಗ್ರರು ಸೇನೆಯ ಮೇಲೆ ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ಯೋಧರು ನಡೆಸಿದ … Continued

ಭಾರತದಲ್ಲಿ 18,132 ಹೊಸ ಕೋವಿಡ್ ಪ್ರಕರಣಗಳು ದಾಖಲು

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯದ ದೈನಂದಿನ ಮಾಹಿತಿಯ ಪ್ರಕಾರ ಭಾರತವು ತನ್ನ ದೈನಂದಿನ ಕೋವಿಡ್ -19 ಪ್ರಕರಣಗಳಲ್ಲಿ ಸೋಮವಾರ ಇಳಿಕೆ ಕಂಡಿದೆ. ಭಾರತದಲ್ಲಿ 24 ಗಂಟೆಗಳಲ್ಲಿ 18,132 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ ಹಾಗೂ 193 ಸಾವುಗಳನ್ನು ವರದಿ ಮಾಡಿದೆ, ಇದು ಒಟ್ಟು ಸೋಂಕನ್ನು 3,39,71,607 ಕ್ಕೆ ಒಯ್ದಿದೆ. ದೇಶವು 21,563 ಚೇತರಿಕೆಗಳನ್ನು ವರದಿ ಮಾಡಿದೆ, … Continued