ಚುನಾವಣಾ ಸೋಲಿನ ನಂತರ ಐದು ರಾಜ್ಯಗಳ ಕಾಂಗ್ರೆಸ್ ಮುಖ್ಯಸ್ಥರಿಗೆ ರಾಜೀನಾಮೆಗೆ ಸೂಚಿಸಿದ ಸೋನಿಯಾ ಗಾಂಧಿ

ನವದೆಹಲಿ: ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ರಾಜ್ಯ ಚುನಾವಣೆಯಲ್ಲಿ ಸೋಲಿನ ನಂತರ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಚುನಾವಣೆ ನಡೆದ ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರ ರಾಜ್ಯಗಳ ಮುಖ್ಯಸ್ಥರಿಗೆ ತಮ್ಮ ಸ್ಥಾನದಿಂದ ಕೆಳಗಿಳಿಯುವಂತೆ ಸೂಚಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ, ಸೋನಿಯಾ ಗಾಂಧಿ ಅವರು, ಪ್ರದೇಶ ಕಾಂಗ್ರೆಸ್‌ ಸಮಿತಿಗಳ ಮರುಸಂಘಟನೆಗೆ ಅನುಕೂಲವಾಗುವಂತೆ ಉತ್ತರ … Continued

ಹಿಜಾಬ್ ನಿಷೇಧ: ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ನವದೆಹಲಿ: ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಮಂಗಳವಾರ, ಕರ್ನಾಟಕ ಹೈಕೋರ್ಟ್‌ನ ಪೂರ್ಣ ಪೀಠವು ರಾಜ್ಯದ ಉಡುಪಿಯ ಪದವಿಪೂರ್ವ ಕಾಲೇಜುಗಳ ಮುಸ್ಲಿಂ ಹುಡುಗಿಯರು ತರಗತಿಯೊಳಗೆ ಸಮವಸ್ತ್ರದೊಂದಿಗೆ ಹಿಜಾಬ್ ಅಥವಾ ಶಿರಸ್ತ್ರಾಣವನ್ನು ಧರಿಸುವ … Continued

ಗುಜರಾತ್:‌ ವಿಷಾಹಾರ ಸೇವಿಸಿ 116 ಹಸುಗಳು ಸಾವು-ವಿಧಾನಸಭೆಗೆ ಸರ್ಕಾರದಿಂದ ಮಾಹಿತಿ

ಗಾಂಧಿನಗರ (ಗುಜರಾತ): ಹದಿನೈದು ದಿನಗಳ ಹಿಂದೆ ಸಬರಕಾಂತ ಜಿಲ್ಲೆಯ ಇದಾರ್‌ನ ಪಂಜ್‌ಪೋಲ್‌ನಲ್ಲಿ ವಿಷ ಸೇವಿಸಿ 116 ಹಸುಗಳು ಮೃತಪಟ್ಟಿವೆ ಎಂದು ರಾಜ್ಯ ಸರ್ಕಾರ ಸೋಮವಾರ ವಿಧಾನಸಭೆಗೆ ತಿಳಿಸಿದೆ ಎಂದು ದಿ ಇಂಡಿಯನ್‌ ಎಕ್ಸ್‌ಪ್ರೆಸ್‌.ಕಾಮ್‌ ವರದಿ ಮಾಡಿದೆ. ಗುಜರಾತ್ ವಿಧಾನಸಭೆಯ ನಿಯಮ 116 ರ ಅಡಿಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಕಾಂಗ್ರೆಸ್ ಶಾಸಕ ರಾಜೇಂದ್ರ ಸಿಂಗ್ ಠಾಕೂರ್, … Continued

12-14 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕೆಗೆ ಮಾರ್ಗಸೂಚಿಗಳು ಬಿಡುಗಡೆ

ನವದೆಹಲಿ: ಮಾರ್ಚ್ 16 ರಿಂದ ಪ್ರಾರಂಭವಾಗುವ 12-14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್‌-19 ಲಸಿಕೆಗಾಗಿ ಮಾರ್ಗಸೂಚಿಗಳನ್ನು ಕೇಂದ್ರವು ಮಂಗಳವಾರ ಬಿಡುಗಡೆ ಮಾಡಿದೆ ಮತ್ತು ಈ ವಯಸ್ಸಿನ ಫಲಾನುಭವಿಗಳಿಗೆ ಕಾರ್ಬೆವಾಕ್ಸ್ ಲಸಿಕೆಯನ್ನು ಮಾತ್ರ ಬಳಸಲಾಗುತ್ತದೆ ಎಂದು ಹೇಳಿದೆ. 28 ದಿನಗಳ ಮಧ್ಯಂತರದಲ್ಲಿ 12-14 ವರ್ಷ ವಯಸ್ಸಿನ ಫಲಾನುಭವಿಗಳಿಗೆ ಎರಡು ಡೋಸ್ ಬಯೋಲಾಜಿಕಲ್‌ ಇ ಇಂಟ್ರಾಮಸ್ಕುಲರ್ ಲಸಿಕೆ ಕಾರ್ಬೆವಾಕ್ಸ್ ಅನ್ನು … Continued

ಕಪಿಲ್‌ ಸಿಬಲ್ ಗಾಂಧಿಗಳ ಕಾಂಗ್ರೆಸ್‌ ನಾಯಕತ್ವ ಟೀಕಿಸಿದ ಬೆನ್ನಲ್ಲೇ, ಸಿಬಲ್‌ ಯಾಕೆ ಆರೆಸ್ಸೆಸ್‌-ಬಿಜೆಪಿ ಭಾಷೆಯಲ್ಲಿ ಮಾತನಾಡ್ತಿದ್ದಾರೆ ಎಂದು ಮಾಣಿಕ್ಕಂ ಠಾಗೋರ್ ಪ್ರಶ್ನೆ

ನವದೆಹಲಿ: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯ ನಂತರ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ ಮುಂದುವರಿದಿದ್ದು, ಪಕ್ಷದ ಲೋಕಸಭೆ ವಿಪ್ ಮಾಣಿಕ್ಕಂ ಠಾಗೋರ್ ಅವರು ಮಂಗಳವಾರ ಹಿರಿಯ ನಾಯಕ ಕಪಿಲ್ ಸಿಬಲ್ ನಾಯಕತ್ವದ ವಿರುದ್ಧ ಟೀಕೆಗಳನ್ನು ಮಾಡಿದ್ದಕ್ಕೆ ಸಿಬಲ್‌ ಅವರು ಆರ್‌ಎಸ್‌ಎಸ್-ಬಿಜೆಪಿ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಠಾಗೋರ್, ಕಟ್ಟಾ ರಾಹುಲ್ ಗಾಂಧಿ ನಿಷ್ಠಾವಂತ ಎಂದೇ ಹೇಳಲಾಗುತ್ತಿದ್ದು, … Continued

ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚೋಡಂಕರ್ ರಾಜೀನಾಮೆ

ಪಣಜಿ: ಇತ್ತೀಚೆಗಷ್ಟೇ ನಡೆದ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಕಳಪೆ ಸಾಧನೆಗೆ ನೈತಿಕ ಹೊಣೆ ಹೊತ್ತು ಗೋವಾ ಕಾಂಗ್ರೆಸ್ ಅಧ್ಯಕ್ಷ ಗಿರೀಶ ಚೋಡಂಕರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಚೋಡಂಕರ್ ತಮ್ಮ ರಾಜೀನಾಮೆಯನ್ನು ಎಐಸಿಸಿಗೆ ಕಳುಹಿಸಿದ್ದಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಗೋವಾ ಡೆಸ್ಕ್ ಉಸ್ತುವಾರಿ ದಿನೇಶ್ ಗುಂಡೂ ರಾವ್ ಮಂಗಳವಾರ ತಿಳಿಸಿದ್ದಾರೆ. … Continued

ನವಾಬ್ ಮಲಿಕ್‌ ಮನವಿ ತಿರಸ್ಕರಿಸಿದ ಬಾಂಬೆ ಹೈಕೋರ್ಟ್, ನ್ಯಾಯಾಂಗ ಬಂಧನ ಮುಂದುವರಿಕೆ

ಬೆಂಗಳೂರು: ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿರುವ ಭೂಗತ ದೊರೆ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಸಂಪುಟ ಸಚಿವ ನವಾಬ್ ಮಲಿಕ್ ಸಲ್ಲಿಸಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಪ್ರಸನ್ನ ಬಿ ವರಾಲೆ ಮತ್ತು ಶ್ರೀರಾಮ ಎಂ. ಮೋದಕ್ ಅವರ ಪೀಠವು … Continued

ಮಾರ್ಚ್ 31ರೊಳಗೆ ಪ್ಯಾನ್ ಕಾರ್ಡ್-ಆಧಾರ್ ಲಿಂಕ್‌ ಮಾಡದಿದ್ದರೆ ಬೀಳಲಿದೆ ದಂಡ

ನವದೆಹಲಿ:ಪ್ಯಾನ್ ಕಾರ್ಡ್-ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ ದಂಡ: , 2022 ರೊಳಗೆ ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡದಿದ್ದರೆ ಆದಾಯ ತೆರಿಗೆ ನಿಯಮಗಳ ಪ್ರಕಾರ 1000 ರೂ.ಗಳ ದಂಡವನ್ನು ವಿಧಿಸಬಹುದು. ಆದಾಯ ತೆರಿಗೆ ಕಾಯಿದೆ, 1961 ರ ಸೆಕ್ಷನ್ 234H ಪ್ರಕಾರ, ಒಬ್ಬ ವ್ಯಕ್ತಿಯು ಆದಾಯ ತೆರಿಗೆ ಇಲಾಖೆಗೆ ತನ್ನ ಆಧಾರ್ ಅನ್ನು ತಿಳಿಸಲು ವಿಫಲವಾದರೆ … Continued

ಸ್ಕ್ರ್ಯಾಪ್ ಅಂಗಡಿಯಲ್ಲಿ ಬೆಂಕಿ ಅನಾಹುತ: 4 ಸಾವು, 14 ಮಂದಿ ಗಾಯ

ಜಮ್ಮು: ಜಮ್ಮು ನಗರದಲ್ಲಿ ಸ್ಕ್ರ್ಯಾಪ್ ಅಂಗಡಿ ಮತ್ತು ಸುತ್ತಮುತ್ತಲಿನ ಗುಡಿಸಲೊಳಗೆ ಸೋಮವಾರ ಸಂಭವಿಸಿದ ಭಾರೀ ಬೆಂಕಿ ಅನಾಹುತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಕ್ರ್ಯಾಪ್ ಅಂಗಡಿಯಲ್ಲಿ ಸಂಜೆ ಬೆಂಕಿ ಕಾಣಿಸಿಕೊಂಡಿತು ಮತ್ತು ರೆಸಿಡೆನ್ಸಿ ರಸ್ತೆಯ ಸುತ್ತಮುತ್ತಲಿನ ಗುಡಿಸಲುಗಳಿಗೆ ಆವರಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಜಮ್ಮುವಿನ ಎಸ್‌ಎಸ್‌ಪಿ ಚಂದನ್‌ ಕೊಹ್ಲಿ, … Continued

ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರನ ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಚಂಡೀಗಡ: ಪಂಜಾಬ್‌ನ ಜಲಂಧರ್ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಸಂದೀಪ್ ನಂಗಲ್ ಅವರನ್ನು ನಾಲ್ವರು ದುಷ್ಕರ್ಮಿಗಳು ಸೋಮವಾರ ಸಂಜೆ ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಹಕೋಟ್‌ನ ಮಲ್ಲಿಯನ್ ಕಲಾನ್ ಗ್ರಾಮದಲ್ಲಿ ಕಬಡ್ಡಿ ಪಂದ್ಯಾವಳಿ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ. ಜಲಂಧರ್ (ಗ್ರಾಮೀಣ) ಪೊಲೀಸ್ ಉಪ ಅಧೀಕ್ಷಕ (ನಾಕೋದರ್) ಲಖ್ವಿಂದರ್ ಸಿಂಗ್ ಅವರು 40 ವರ್ಷದ … Continued