ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಹಿಂಪಡೆಯುವ ಕುರಿತು ಚರ್ಚಿಸಿ ನಿರ್ಧಾರ: ಸಿಎಂ ಸಿದ್ದರಾಮಯ್ಯ ಯೂಟರ್ನ್

ಮೈಸೂರು : ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ನಿಷೇಧ ಹಿಂಪಡೆಯುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಮತ್ತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿದ ನಂತರ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಸ್ಪಷ್ಟಪಡಿಸಿದ್ದಾರೆ.
ಮಾದ್ಯಮದವರ ಜೊತೆ ಮಾತನಾಡಿದ ಅವರು, ‘ನಾವು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಮಾಡಿರುವ ಆದೇಶ ಹಿಂಪಡೆದಿಲ್ಲ. ಯಾರೋ ನನಗೆ (ಹಿಜಾಬ್ ನಿಷೇಧ ತೆಗೆದುಹಾಕುವ ಬಗ್ಗೆ) ಈ ಬಗ್ಗೆ ಪ್ರಶ್ನೆ ಕೇಳಿದರು. ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಸರ್ಕಾರ ಪರಿಗಣಿಸುತ್ತಿದೆ ಎಂದು ನಾನು ಹೇಳಿದ್ದೇನೆ. ಈ ಶೈಕ್ಷಣಿಕ ವರ್ಷದಲ್ಲಿ ಸರ್ಕಾರದ ಮಟ್ಟದಲ್ಲಿ ಚರ್ಚಿಸಿದ ನಂತರ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದರು.
ಉಡುಪು ಪ್ರತಿಯೊಬ್ಬರ ವೈಯಕ್ತಿಕ ಆಯ್ಕೆಯ ವಿಷಯವಾಗಿದ್ದು, ರಾಜ್ಯದಲ್ಲಿ ಹಿಜಾಬ್ ಮೇಲೆ ವಿಧಿಸಲಾಗಿರುವ ನಿರ್ಬಂಧವನ್ನು ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದರು.
‘ಬಿಜೆಪಿಯು ಜನರು ಮತ್ತು ಸಮಾಜವನ್ನು ಬಟ್ಟೆ, ಉಡುಗೆ ಮತ್ತು ಜಾತಿಯ ಆಧಾರದ ಮೇಲೆ ವಿಭಜಿಸುತ್ತಿದೆ’ ಎಂದು ಅವರು ಟೀಕಿಸಿದ್ದರು.

ಪ್ರಮುಖ ಸುದ್ದಿ :-   ‘100 ವರ್ಷದ ನನ್ನ ತಾಯಿಗೆ ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗಿತ್ತು...ನನ್ನ ಬಳಿ 250 ಜೊತೆ ಬಟ್ಟೆಗಳಿವೆ ಎಂಬುದೇ ನನ್ನ ಮೇಲಿನ ದೊಡ್ಡ ಆರೋಪ ʼ : ಪ್ರಧಾನಿ ಮೋದಿ

ಹಿಜಾಬ್ ನಿಷೇಧ ಹಿಂಪಡೆಯುವ ಘೋಷಣೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿಯಿಂದ ಕಾಂಗ್ರೆಸ್ ಸರ್ಕಾರ ತೀವ್ರ ಟೀಕೆಗೆ ಗುರಿಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವು ‘ಯುವ ಮನಸ್ಸುಗಳನ್ನು ಧಾರ್ಮಿಕ ಆಧಾರದ ಮೇಲೆ ವಿಭಜಿಸುತ್ತಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ, ಸಿದ್ದರಾಮಯ್ಯ ಅವರು ಶೈಕ್ಷಣಿಕ ವಾತಾವರಣವನ್ನು ಹಾಳು ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಅಲ್ಪಸಂಖ್ಯಾತರ ಸಾಕ್ಷರತೆ ಮತ್ತು ಉದ್ಯೋಗ ಪ್ರಮಾಣ ಇನ್ನೂ ಶೇ 50ರಷ್ಟಿದೆ. ಕಾಂಗ್ರೆಸ್ ಎಂದಿಗೂ ಅಲ್ಪಸಂಖ್ಯಾತರ ಸ್ಥಿತಿಯನ್ನು ಸುಧಾರಿಸಲು ಪ್ರಯತ್ನಿಸಲಿಲ್ಲ’ ಎಂದು ದೂರಿದರು.
2022 ರಲ್ಲಿ ಹಿಂದಿನ ಬಿಜೆಪಿ ಸರ್ಕಾರವು ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿತು.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement