ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಇಂದು ಮತದಾನ, 842 ಮತಗಟ್ಟೆಗಳ ಸ್ಥಾಪನೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಚುನಾವಣೆಗೆ ಸೆ.3 ರಂದು ಚುನಾವಣೆ ನಡೆಯಲಿದ್ದು, ಬೆಳಿಗ್ಗೆ 7-00 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ಮತದಾನ ನಡೆಯಲಿದೆ.
ಚುನಾವಣೆ ನಡೆಯಲಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ಹಾಲಿ ಚಾಲ್ತಿಯಲ್ಲಿರುವ ವಿಧಾನಸಭಾ ಮತದಾರರ ಪಟ್ಟಿ ಅಳವಡಿಸಿಕೊಂಡು ತಯಾರಿಸಲಾಗುವ ಮತದಾರರ ಪಟ್ಟಿಯಂತೆ ಚುನಾವಣೆ ನಡೆಸಲಾಗುವುದು ಎಂದು ತಿಳಿಸಲಾಗಿದೆ.
ಮಹಾನಗರ ಪಾಲಿಕೆಯ 82 ವಾರ್ಡ್‍ಗಳಲ್ಲಿ 4,06,280 ಪುರುಷ ಹಾಗೂ 4,11,092 ಮಹಿಳಾ ಮತ್ತು 86 ಇತರೆ ಸೇರಿ ಒಟ್ಟು 8,17,458 ಮತದಾರರು ಪಾಲಿಕೆ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ. 82 ವಾರ್ಡ್‍ಗಳಲ್ಲಿ ಒಟ್ಟು 842 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಚುನಾವಣೆಯನ್ನು ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ಜರುಗಿಸಲು ಅಗತ್ಯವಿರುವಂತೆ 336 ಮೀಸಲು ಸಿಬ್ಬಂದಿ ಸೇರಿ ಒಟ್ಟು 3,704 ವಿವಿಧ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಚುನಾವಣೆಗಾಗಿ ಒಟ್ಟು 842 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಈ ಪೈಕಿ ಪೊಲೀಸ್ ಇಲಾಖೆಯಿಂದ 108 ದುರ್ಬಲ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಸೂಕ್ತ ಪೊಲೀಸ್ ಬಂದೋಬಸ್ತ್ ಹಾಗೂ ವಿಡಿಯೋ ಚಿತ್ರೀಕರಣಕ್ಕೆ ಆದೇಶಿಸಲಾಗಿದೆ.
ಮತದಾರ ಮಾಸ್ಕ್ ಧರಿಸುವುದು ಕಡ್ಡಾಯ
ಮತದಾನದ ದಿನದಂದು ರಾಜ್ಯ ಚುನಾವಣಾ ಆಯೋಗದ ನಿರ್ದೇಶನಗಳನ್ವಯ ಕೋವಿಡ್-19ಕ್ಕೆ ಸಂಬಂಧಿಸಿದಂತೆ ಎಲ್ಲ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕಾಗಿದ್ದು, ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸರತಿಯ ಸಾಲಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಮತದಾನ ಮಾಡಬೇಕು ಎಂದು ತಿಳಿಸಲಾಗಿದೆ.
ನೋಟಾ ಮತ ಚಲಾವಣೆಗೆ ಅವಕಾಶ
ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976ರ ಪ್ರಕರಣ 14ಕ್ಕೆ ತಿದ್ದುಪಡಿ ಮಾಡಲಾಗಿದ್ದು “ಅರ್ಹ ಮತದಾರ, ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳ ಪೈಕಿ ಯಾವೊಬ್ಬ ಅಭ್ಯರ್ಥಿಯ ಪರವಾಗಿ ತನ್ನ ಮತದಾನವನ್ನು ಚಲಾಯಿಸಲು ಇಚ್ಚಿಸದಿರುವ ಸಂದರ್ಭದಲ್ಲಿ ಆತನು “None of the above” (NOTA) (ಮೇಲಿನ ಯಾರೊಬ್ಬರಿಗೂ ಇಲ್ಲ) ಎಂದು ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.
ಮಹಾನಗರ ಪಾಲಿಕೆಯ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗದವರು ಜಿಲ್ಲೆಗೆ ಹಂಚಿಕೆ ಮಾಡಿದ ಇ.ವಿ.ಎಂ. ಯಂತ್ರಗಳನ್ನು ಬಳಸಲಾಗುವುದು. ಈ ಚುನಾವಣೆಯಲ್ಲಿ ವಿವಿಪ್ಯಾಟ್ ಇರುವುದಿಲ್ಲ ಗಿದೆ. ಪಾಲಿಕೆಯ 82 ವಾರ್ಡ್‍ಗಳಿಗೆ 842 ಮತಯಂತ್ರಗಳನ್ನು ಬಳಸಲಾಗುತ್ತಿದ್ದು, ಪ್ರತಿವಾರ್ಡ್‍ಗೆ ಒಂದರಂತೆ 82 ಹೆಚ್ಚುವರಿ ಮತಯಂತ್ರಗಳನ್ನು ಕಾಯ್ದಿರಿಸಲಾಗಿದೆ ಎಂದು

ಪ್ರಮುಖ ಸುದ್ದಿ :-   ಶ್ರೀರಂಗಪಟ್ಟಣ: ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement