ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಸಿಎಂ ಮಮತಾ ಬ್ಯಾನರ್ಜಿಗೆ ಜೀವ ಬೆದರಿಕೆಯೊಡ್ಡಿದ ವಿದ್ಯಾರ್ಥಿನಿ ಅರೆಸ್ಟ್

ಕೋಲ್ಕತ್ತ : ಕೋಲ್ಕತ್ತದ ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ವಿದ್ಯಾರ್ಥಿನಿಯ ಚಿತ್ರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಜೀವ ಬೆದರಿಕೆ ಒಡ್ಡಿದ್ದ ವಿದ್ಯಾರ್ಥನಿಯೊಬ್ಬಳನ್ನು ಬಂಧಿಸಲಾಗಿದೆ.
ಬಂಧಿತ ವಿದ್ಯಾರ್ಥಿನಿಯನ್ನು ಕೀರ್ತಿ ಶರ್ಮಾ ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ಧ ತಲ್‌ತಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

‘ ಕೊಲೆ ಮತ್ತು ಹತ್ಯೆ ಪ್ರಕರಣದ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸುವ ಸ್ಟೋರಿಗಳನ್ನು ‘ಕೀರ್ತಿಸೋಷಿಯಲ್’ ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ದೂರು ದಾಖಲಾಗಿತ್ತು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
‘ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ವಿಚಾರ ಮತ್ತು ಅವರಿಗೆ ಜೀವ ಬೆದರಿಕೆ ಒಡ್ಡುವ ಅಂಶಗಳನ್ನು ಒಳಗೊಂಡ ಎರಡು ಸ್ಟೋರಿಗಳನ್ನೂ ಆರೋಪಿ ಹಂಚಿಕೊಂಡಿದ್ದು, . ಇವು ಸಮಾಜದಲ್ಲಿ ಕಲಹ ಮತ್ತು ಸಮುದಾಯಗಳ ನಡುವೆ ದ್ವೇಷ ಸೃಷ್ಟಿಸುವ ಸಾಧ್ಯತೆ ಇತ್ತು’ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಸಿಜೆಪಿ ‘ಚಲೋ ಸಂಸತ್’ ಮೆರವಣಿಗೆಗೆ ತಡೆ: ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಪ್ರಯೋಗ, ಲಾಠಿ ಚಾರ್ಜ್‌

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement