ಕರ್ನಾಟಕದ 7 ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಕರಾವಳಿಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಮಲೆನಾಡಿನಲ್ಲೂ ಮಳೆ ಜೋರಾಗಿ ಸುರಿಯುತ್ತಿದೆ. ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಮೂರು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಮತ್ತೆ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳು ಹಾಗೂ ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಈ ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​ ನೀಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದ್ದು ಹಳದಿ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಗುಜರಾತ್-ಕೇರಳ ಕರಾವಳಿ ಉದ್ದಕ್ಕೂ ಸರಾಸರಿ ಸಮುದ್ರ ಮಟ್ಟದಲ್ಲಿ ಉಂಟಾಗಿರುವ ಮೇಲುಬ್ಬರದ ಪರಿಣಾಮ ಕರಾವಳಿ ಕರ್ನಾಟಕ ಮತ್ತು ಪಕ್ಕದ ಜಿಲ್ಲೆಗಳ ಮೇಲೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕಲಬುರಗಿ, ಬೀದರ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಪ್ರಮುಖ ಸುದ್ದಿ :-   ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ನಿಂದ ನಾಲ್ವರಿಗೆ ಟಿಕೆಟ್‌ ಘೋಷಣೆ

5 / 5. 5

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement