ಹೊನ್ನಾವರ | ಮುಳ್ಳೋಡು ಸಮೀಪ ಶರಾವತಿ ನದಿಗೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಸಂಪುಟ ಆಡಳಿತಾತ್ಮಕ ಅನುಮೋದನೆ

ಬೆಂಗಳೂರು: ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ – ಭಟ್ಕಳ ವಿಧಾನಸಭಾ ಕ್ಷೇತ್ರದ ಹೊನ್ನಾವರ ತಾಲೂಕಿನ ಮುಳ್ಳೋಡು ಗ್ರಾಮದ ಸಮೀಪ ಶರಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸುವ 200 ಕೋಟಿ ರೂ.ಗಳ ಅಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಇದಲ್ಲದೆ, ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಚೆಕ್ ಡ್ಯಾಂ, ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು 200 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಜಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಹಾಗೂಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಘನತ್ಯಾಜ್ಯ ಸಮರ್ಪಕ ಪ್ಯಾಕೇಜಿನ ಕಾಮಗಾರಿಗಳನ್ನು 100 ಕೋಟಿ ರೂ. ಅಂದಾಜು ಮೊತ್ತದಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಮೂಲಕ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಉಳಿದಂತೆ ಕರ್ನಾಟಕ ಕಿರು ಬಂದರುಗಳಲ್ಲಿ ಕಬ್ಬಿಣದ ಅದಿರು ನಿರ್ವಹಣಾ ನೀತಿ, 2025 ಅನ್ನು ಜಾರಿಗೆ ತರಲು ಅನುಮೋದನೆ
ಕರ್ನಾಟಕ ನ್ಯಾಯಾಂಗ ಸೇವೆ (ನೇಮಕಾತಿ) (ತಿದ್ದುಪಡಿ) ನಿಯಮಗಳು, 2025ಕ್ಕೆ ಅನುಮೋದನೆ
ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, 2025 ವನ್ನು ವಿಧಾನ ಮಂಡಲದ ಉಭಯ ಸದನಗಳ ಮುಂದೆ ಮಂಡಿಸಲು ನಿರ್ಧಾರ.
ಔಷಧಗಳು ಮತ್ತು ಸೌಂದರ್ಯ ವರ್ದಕಗಳು (ಕರ್ನಾಟಕ ತಿದ್ದುಪಡಿ), 2025 ವಿಧೇಯಕಕ್ಕೆ ಅನುಮೋದನೆ.
ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ.

ತುಮಕೂರು ವಿಶ್ವವಿದ್ಯಾಲಯದಲ್ಲಿ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷ ಅಭಿಯಾನ ಯೋಜನೆಯಡಿ ಕಟ್ಟಡ ನಿರ್ಮಾಣ, ಉಪಕರಣ ಖರೀದಿ ಸೇರಿದಂತೆ ರೂ.20 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಅನುಷ್ಠಾನಕ್ಕೆ ನಿರ್ಧಾರ.
ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಹೊರವಲಯದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ನೂತನ ಸ್ಯಾಟಲೈಟ್ ಬಸ್ ನಿಲ್ದಾಣದ ಕಾಮಗಾರಿಯನ್ನು 17.50 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ.
ಹಾಗೂ ಕಬಿನಿ ಎಡದಂಡೆ ಕಾಲುವೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ರೂ.50 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ನಿರ್ಧಾರ ಕೈಗೊಳ್ಳಲಾಗಿದೆ.

ಅಲ್ಲದೆ, ಸಚಿವ ಸಂಪುಟವು 6 ಜಿಲ್ಲೆಗಳ 12 ಗ್ರಾಮ ಪಂಚಾಯತಗಳನ್ನು ಪಟ್ಟಣ ಪಂಚಾಯತಿಗಳಾಗಿ ಮೇಲ್ದರ್ಜೆಗೇರಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ. ಬೆಳಗಾವಿಯ ಒಂದು ಪುರಸಭೆಯನ್ನು ನಗರಸಭೆಯಾಗಿ ಉನ್ನತೀಕರಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ಬೀದರ್ ಜಿಲ್ಲೆಯ ಕಮಠಾಣಾ , ಹುಲಸೂರು, ಮನ್ನಾಎಖೇಳ್ಳಿ ಗ್ರಾಮ ಪಂಚಾಯತಿ.
ಬೆಳಗಾವಿ ಜಿಲ್ಲೆಯ ಅಂಕಲಿ, ಸುರೇಬಾನ, ಮನಿಹಾಳ, ಕಟಕೋಳ ಗ್ರಾಮ ಪಂಚಾಯತ
ಮೈಸೂರು ಜಿಲ್ಲೆಯ ಸಾಲಿಗ್ರಾಮ ಪಂಚಾಯತ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತ್ಯಾಮಗೊಂಡ್ಲು ಗ್ರಾಮ ಪಂಚಾಯತ
ಯಾದಗಿರಿ ಜಿಲ್ಲೆಯ ಸಗರ (ಬಿ), ವಡಗೇರಾ ಗ್ರಾಮ ಪಂಚಾಯತಿ
ಉತ್ತಕನ್ನಡ ಜಿಲ್ಲೆಯ ಮಾವಳ್ಳಿ ಗ್ರಾಮ ಪಂಚಾಯತ

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement