
ಹುಬ್ಬಳ್ಳಿ : ಭಾರೀ ಕುತೂಹಲ ಕೆರಳಿಸಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆಯ ಮೇಯರ್ ಆಗಿ 49ನೇ ವಾರ್ಡಿನಿಂದ ಮೊದಲ ಬಾರಿ ಆಯ್ಕೆಯಾದ ವೀಣಾ ಚೇತನ ಬಾರದ್ವಾಡ ಆಯ್ಕೆಯಾಗಿದ್ದಾರೆ. ಹಾಗೂ ಬಿಜೆಪಿಯ ಪಾಲಿಕೆಯ ಬಿಜೆಪಿ ಹಿರಿಯ ಸದಸ್ಯ ಸತೀಶ ಹಾನಗಲ್ ಅವರು ಆಯ್ಕೆಯಾಗಿದ್ದಾರೆ.
ಧಾರವಾಡದಲ್ಲಿ ಪ್ರಾದೇಶಿಕ ಆಯುಕ್ತರ ನಿತೇಶ ಪಾಟೀಲ ಉಸ್ತುವಾರಿಯಲ್ಲಿ ನಡೆದ ಮೇಯರ್ ಚುನಾವಣೆಯಲ್ಲಿ ಬಿಜೆಪಿಯ (BJP) ವೀಣಾ ಬಾರದ್ವಾಡ್ ಪರ 46 ಮತಗಳನ್ನು ಪಡೆದರೆ, ಕಾಂಗ್ರೆಸ್ ಪಕ್ಷದ ಸುವರ್ಣ ಕಲ್ಲಕುಂಟ್ಲ ಪರ 37 ಮತಗಳು ಬಿದ್ದವು. ಇದರೊಂದಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರ ಚುಕಾಣಿ ಹಿಡಿಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.
ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮೇಯರ್ ಸ್ಥಾನದ ಚುನಾವಣೆಗೆ ಬಿಜೆಪಿಯಿಂದ ವೀಣಾ ಬರದ್ವಾಡ್ ನಾಮಪತ್ರ ಸಲ್ಲಿಸಿದ್ದರೆ, ಕಾಂಗ್ರೆಸ್ನಿಂದ ಸುವರ್ಣ ಕಲಕುಂಟ್ಲ ಅವರು ನಾಮಪತ್ರ ಸಲ್ಲಿಸಿದ್ದರು. ಅಂತಿಮವಾಗಿ ಬಿಜೆಪಿಯ ವೀಣಾ ಬರದ್ವಾಡ್ ಅವರು ಒಟ್ಟು 46 ಮತಗಳೊಂದಿಗೆ ಮೇಯರ್ ಆಗಿ ಆಯ್ಕೆಯಾದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಒಟ್ಟು 82 ಸದಸ್ಯರ ಬಲ ಹೊಂದಿದೆ. ಇನ್ನು 4 ಶಾಸಕರು, ಒಬ್ಬರು ಸಂಸದ, ಪರಿಷತ್ ಸದಸ್ಯರು ಸೇರಿ ಒಟ್ಟು 89 ಮತಗಳಿದ್ದವು, ಹೀಗಾಗಿ ಅಧಿಕಾರ ಹಿಡಿಯಲು 45 ಮತಗಳು ಬೇಕಿತ್ತು. ಬಿಜೆಪಿ ಕಾರ್ಪೊರೇಟರ್ಗಳ ಸಂಖ್ಯೆ 39 ಇದೆ, ಕಾಂಗ್ರೆಸ್ 33, ಪಕ್ಷೇತರ 6, ಎಐಎಂಐಎಂ (AIMIM) 3 ಹಾಗೂ ಜೆಡಿಎಸ್ 1 ಸ್ಥಾನ ಹೊಂದಿದೆ. ಇದರಲ್ಲಿ ಬಿಜೆಪಿ ಮೇಯರ್ ಅಭ್ಯರ್ಥಿ ಪರ 46 ಮತಗಳು ಚಲಾವಣೆಯಾಗಿದ್ದರೆ, ಕಾಂಗ್ರೆಸ್ನ ಸುವರ್ಣ ಅವರು 37 ಮತ ಪಡೆದರು. ಉಪಮೇಯರ್ ಆಗಿ ಸತೀಶ ಹಾನಗಲ್ ಅವರು ಆಯ್ಕೆಯಾದರು.ಅವರ ಪರ 46 ಮತಗಳು ಚಲಾವಣೆಯಾಗಿದ್ದರೆ, ಕಾಂಗ್ರೆಸ್ ಪರ 37 ಮತ ಚಲಾವಣೆಯಾಗಿದೆ.
ಕೆಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಪಾಲ್ಗೊಂಡಿದ್ದರು. ಜನಪ್ರತಿನಿಧಿಗಳ ಪೈಕಿ ಸಭಾಪತಿ ಬಸವರಾಜ ಹೊರಟ್ಟಿ, ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಪಾಲ್ಗೊಂಡಿರಲಿಲ್ಲ.



ನಿಮ್ಮ ಕಾಮೆಂಟ್ ಬರೆಯಿರಿ