ರಾಜ್ಯದಲ್ಲಿಯೂ ಆರ್ಥಿಕ ದುರ್ಬಲರಿಗೆ ಶೇ.೧೦ ಮೀಸಲಾತಿ: ಸರ್ಕಾರದಿಂದ ಶೀಘ್ರ ಅಧಿಸೂಚನೆ

ಬೆಂಗಳೂರು: ರಾಜ್ಯದ ನಾಗರಿಕ ಸೇವೆಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಆರ್ಥಿಕವಾಗಿ ದುರ್ಬಲ ವರ್ಗಗಳ  ಅಥವಾ ಮೇಲ್ಜಾತಿಗಳ ಜನರಿಗೆ ಶೇ.೧೦ರಷ್ಟು ಮೀಸಲಾತಿಯನ್ನು ಜಾರಿಗೆ ತರಲು ಕರ್ನಾಟಕ ಸರ್ಕಾರ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಆರ್ಥಿಕವಾಗಿ ದುರ್ಬಲವಾಗಿರುವ ಮೇಲ್ವರ್ಜಗದ ಜನರಿಗೆ ಶೇ.೧೦ರಷ್ಟು ಮೀಸಲಾತಿ ನೀಡುವ ಸಂಬಂಧ ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಇದು ಅನ್ವಯಿಸುತ್ತದೆ.ಇಲ್ಲಿಯವರೆಗೆ ಕೇಂದ್ರ ಸರ್ಕಾರಿ ಉದ್ಯೋಗಗಳಿಗೆ ಮಾತ್ರ ಅನ್ವಯವಾಗಿತ್ತು. ಈಗ, ರಾಜ್ಯ ಸರ್ಕಾರವೂ ಈ ನೀತಿಗೆ ಅನುಮೋದನೆ ನೀಡಿದೆ ಎಂದು ಪೂಜಾರಿ ಹೇಳಿದರು.

ಈ ಅಧಿಸೂಚನೆಯ ನಂತರ ವಾರ್ಷಿಕ ೮ ಲಕ್ಷ ರೂಪಾಯಿಗಿಂತ ಕಡಿಮೆ ಆದಾಯ ಹೊಂದಿರುವ   ಕುಟುಂಬಗಳು ಇಡಬ್ಲ್ಯುಎಸ್ ವರ್ಗದ ಅಡಿಯಲ್ಲಿ ವರ್ಗೀಕರಿಸುವ ಪ್ರಮಾಣಪತ್ರಗಳನ್ನು ಪಡೆಯಬಹುದು ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement