ವಾಹನಗಳಿಗೆ ಎಚ್​​​ ಎಸ್​ ಆರ್​ ಪಿ ನಂಬರ್​ ಪ್ಲೇಟ್​​ ಅವಳಡಿಸುವ ಗಡುವು ವಿಸ್ತರಣೆ

ಬೆಂಗಳೂರು: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (High Security Registration Number Plate- HSRP)    ಪ್ಲೇಟ್ ಅಳವಡಿಸಿಕೊಳ್ಳುವ ಅಂತಿಮ ದಿನಾಂಕವನ್ನು ವಿಸ್ತರಣೆ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಕಡ್ಡಾಯವಾಗಿ ಅಳವಡಿಸಲು ರಾಜ್ಯ ಸರ್ಕಾರ‌ ನೀಡಿದ ಗಡುವು ಸಮೀಪ ಬಂದ ನಂತರ ಗಡುವನ್ನು ರಾಜ್ಯ ಸರ್ಕಾರ ಮತ್ತೆ 3 ತಿಂಗಳ ಕಾಲ ವಿಸ್ತರಿಸಿರುವುದಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರಕಟಿಸಿದ್ದಾರೆ.
ವಿಧಾನ ಮಂಡಲ ಅಧಿವೇಶನದಲ್ಲಿ (Karnataka Budget Session 2024) ವಿಧಾನ್​ ಪರಿಷತ್​​ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಈ ವಿಚಾರ ಚರ್ಚೆಗೆ ಬಂದಿದ್ದು, ಅವಧಿ ವಿಸ್ತರಣೆ ಮಾಡುವಂತೆ ಮನವಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೂ ಮೂರು ತಿಂಗಳು ಅವಧಿಯನ್ನು ವಿಸ್ತರಣೆ ಮಾಡುವುದಾಗಿ ರಾಜ್ಯ ಸರ್ಕಾರ ಪ್ರಕಟಿಸಿದೆ.

ವಿಧಾನ ಮಂಡಲ ಅಧಿವೇಶನದಲ್ಲಿ (Karnataka Budget Session 2024) ವಿಧಾನ್​ ಪರಿಷತ್​​ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಈ ವಿಚಾರ ಚರ್ಚೆಗೆ ಬಂದಿದ್ದು, ಅವಧಿ ವಿಸ್ತರಣೆ ಮಾಡುವಂತೆ ಮನವಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೂ ಮೂರು ತಿಂಗಳು ಅವಧಿಯನ್ನು ವಿಸ್ತರಣೆ ಮಾಡುವುದಾಗಿ ರಾಜ್ಯ ಸರ್ಕಾರ ಪ್ರಕಟಿಸಿದೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ (HSRP Number Plate) ಅಳವಡಿಕೆ ಗಡುವು ವಿಸ್ತರಿಸಬೇಕು ಎಂದು ಪರಿಷತ್‌ ಸದಸ್ಯ ಮಧು ಜಿ. ಮಾದೇಗೌಡ ಅವರು ಸರ್ಕಾರಕ್ಕೆ ಮನವಿ ಮಾಡಿದರು. ಈವರೆಗೆ 18 ಲಕ್ಷ ವಾಹನಗಳಷ್ಟೇ ಈಗ ನೋಂದಣಿ ಆಗಿವೆ. ಅಲ್ಲದೆ, ನಕಲಿ ವೆಬ್ ಸೈಟ್ ಗಳ ಮೂಲಕ ಆನ್‌ಲೈನ್‌ ವಂಚನೆ ಸಹ ನಡೆಯುತ್ತಿದೆ. ಹೀಗಾಗಿ ಅವಧಿಯನ್ನು ವಿಸ್ತರಣೆ ಮಾಡುವುದರ ಜತೆಗೆ ನಕಲಿ ವೆಬ್ ಸೈಟ್ ಗಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು, ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅಳವಡಿಕೆಗೆ ನೋಂದಣಿಯನ್ನು ವಿಸ್ತರಣೆ ಮಾಡುವ ಬಗ್ಗೆ ಸರ್ಕಾರವೂ ಚಿಂತನೆ ನಡೆಸಿದ್ದು, ಮತ್ತೆ ಮೂರು ತಿಂಗಳು ಮುಂದಕ್ಕೆ ಹಾಕುತ್ತೇವೆ. ಅಲ್ಲದೆ, ಆನ್‌ಲೈನ್ ವಂಚನೆ ಬಗ್ಗೆ ಗಮನಹರಿಸುತ್ತೇವೆ ಎಂದು ಹೇಳಿದರು.
ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದ ಬಳಿಕ ನಿಖರ ಮಾಹಿತಿ ಗೊತ್ತಾಗಲಿದೆ. ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ವಾಹನಗಳಿಗೆ  ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌  (HSRP Number Plate) ಅಳವಡಿಸಲು ಅರ್ಜಿ ಸಲ್ಲಿಸಲು ಫೆ. 17 ಕೊನೇ ದಿನ ಎಂದು ತಿಳಿಸಲಾಗಿತ್ತು.

ಪ್ರಮುಖ ಸುದ್ದಿ :-   ಬಿಜೆಪಿ ಶಾಸಕ ಹರೀಶ ಪೂಂಜಾ ವಿರುದ್ಧ ಪ್ರಕರಣ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement