ಅರ್ಧ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವು

ಮಂಗಳೂರು: ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಹತ್ತು ತಿಂಗಳ ಮಗವೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎಂದು ವರದಿಯಾಗಿದೆ.
ಅಡ್ಯಾರ್‌ನಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು ಅನೀಶಕುಮಾರ ಎಂಬ ಮಗು ಬೀಡಿ ಮೋಟು ನುಂಗಿತ್ತು ಎಂದು ಹೇಳಲಾಗಿದೆ. ಶನಿವಾರ ಅರ್ಧ ಸೇದಿ ಬಿಸಾಡಿದ್ದ ಬೀಡಿ ತುಂಡನ್ನು ಮಗು ನುಂಗಿ ಅಸ್ವಸ್ಥಗೊಂಡಿತ್ತು ಎನ್ನಲಾಗಿದೆ. ನಂತರ ಮಗುವನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಭಾನುವಾರ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ ಎಂದು ಹೇಳಲಾಗಿದೆ.
ಮನೆಯೊಳಗೆ ಬೀಡಿ ಸೇದಿ ಬಿಸಾಡದಂತೆ ಗಂಡನಿಗೆ ಹಲವು ಬಾರಿ ಎಚ್ಚರಿಸಿದ್ದರೂ ಮತ್ತೆ ಎಸೆದ ಪರಿಣಾಮ ಮಗು ಪ್ರಾಣ ಕಳೆದುಕೊಂಡಿದೆ ಎಂದು ಮಗುವಿನ ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

ನಿಮ್ಮ ಕಾಮೆಂಟ್ ಬರೆಯಿರಿ

advertisement