ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡ್ಡಾ ದೆಹಲಿ ಏಮ್ಸ್‌ಗೆ ದಾಖಲು

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಅವರು ಅಸ್ವಸ್ಥತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS)ಗೆ ದಾಖಲಾಗಿದ್ದಾರೆ. 65 ವರ್ಷದ ನಡ್ಡಾ ಅವರನ್ನು ಆಗಸ್ಟ್ 13ರ ಗುರುವಾರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗಿದೆ. ಅವುಗಳಲ್ಲಿ ಹೃದಯದ ಕೊರೊನರಿ ಆಂಜಿಯೋಗ್ರಫಿ ಪರೀಕ್ಷೆಯೂ ಸೇರಿದೆ.
ಏಮ್ಸ್‌ (AIIMS) ಬಿಡುಗಡೆ ಮಾಡಿರುವ ಅಧಿಕೃತ ಹೇಳಿಕೆಯ ಪ್ರಕಾರ, ನಡ್ಡಾ ಅವರು ಗುರುವಾರ ಸಂಜೆ ಅಸ್ವಸ್ಥತೆಯ ಅನುಭವದ ಹಿನ್ನೆಲೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾರೆ. ಕೊರೊನರಿ ಆಂಜಿಯೋಗ್ರಫಿ ಸೇರಿದಂತೆ ಅಗತ್ಯ ಪರೀಕ್ಷೆಗಳನ್ನು ನಡೆಸಿದ ಬಳಿಕ ಅವರ ಆರೋಗ್ಯ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ. ಅವರು ಏಮ್ಸ್‌ನ ಹೃದ್ರೋಗ ವಿಭಾಗದಲ್ಲಿ ವೈದ್ಯರ ನಿಗಾದಲ್ಲಿದ್ದಾರೆ.
“ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಅವರು ಅಸ್ವಸ್ಥತೆಯ ಹಿನ್ನೆಲೆಯಲ್ಲಿ 13 ಆಗಸ್ಟ್ 2026ರ ಸಂಜೆ ಕೊರೊನರಿ ಆಂಜಿಯೋಗ್ರಫಿ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಒಳಗಾಗಿದ್ದಾರೆ. ಪ್ರಸ್ತುತ ಅವರು ಸ್ಥಿರವಾಗಿದ್ದು, ಹೃದ್ರೋಗ ವಿಭಾಗದಲ್ಲಿ ವೈದ್ಯಕೀಯ ವೀಕ್ಷಣೆಯಲ್ಲಿದ್ದಾರೆ” ಎಂದು ತಿಳಿಸಲಾಗಿದೆ.
.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement