ಹೈಕೋರ್ಟ್‌ ತರಾಟೆ ನಂತರ ಮೇಕುದಾಟು ಪಾದಯಾತ್ರೆ ನಿರ್ಬಂಧಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಕಾಂಗ್ರೆಸ್ಸಿನ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧಿಸಿ ರಾಜ್ಯ ಸರ್ಕಾರ ಆದೇಶಿಸಿದ್ದು, ತಕ್ಷಣ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ.
ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ ಆದೇಶ ಹೊರಡಿಸಿದ್ದು, ಈ ಕೂಡಲೇ ಪಾದಯಾತ್ರೆಯನ್ನು ನಿಲ್ಲಿಸುವಂತೆ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿ ಆದೇಶ ಹೊರಡಿಸಿದೆ. ಹೈಕೋರ್ಟ್ ಆದೇಶದ ಬೆನ್ನಲ್ಲೇ ಸರ್ಕಾರ ಈ ಆದೇಶ ಹೊರಡಿಸಿದೆ.

ಪಾದಯಾತ್ರೆಯ ವಾಹನ ಸಂಚಾರ, ಜನಸಂಚಾರ ನಿಷೇಧಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಆದೇಶ ಉಲ್ಲಂಘಿಸಿ ಪಾದಯಾತ್ರೆ ಮುಂದುವರೆಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ.
ಮೇಕೆದಾಟು ಪಾದಯಾತ್ರೆ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿ ಹೈಕೋರ್ಟ್ ವಿಭಾಗೀಯ ಪೀಠ, ಕೋವಿಡ್ ಹೆಚ್ಚಳದ ವೇಳೆ ಪಾದಯಾತ್ರೆ ನಡೆಸುತ್ತಿದ್ದೀರಾ? ಪಾದಯಾತ್ರೆಗೂ ಮುನ್ನ ನೀವು ಅನುಮತಿ ನೀಡಿದ್ದೀರಾ? ಎಂದು ಹೈಕೋರ್ಟ್ ವಿಭಾಗೀಯ ಪೀಠ ತರಾಟೆಗೆ ತೆಗೆದುಕೊಂಡಿತ್ತು. ಅನುಮತಿ ಕೊಡದಿದ್ದರೆ ಯಾರಿಗಾಗಿ ಕಾಯುತ್ತಿದ್ದೀರಿ ಎಂದು ಸರ್ಕಾರದ ವಿರುದ್ಧ ತರಾಟೆಗೆ ತೆಗೆದುಕೊಂಡಿತ್ತು.
ಈ ಬೆನ್ನಲ್ಲೇ ಸರ್ಕಾರ ಈ ಕ್ರಮ ಕೈಗೊಂಡಿದೆ. ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್ ಭಾನುವಾರದಿಂದ ಪಾದಯಾತ್ರೆ ಮಾಡುತ್ತಿದ್ದು,. ಇಂದು ಪಾದಯಾತ್ರೆಯ ನಾಲ್ಕನೇ ದಿನವಾಗಿದೆ.
ಕರ್ನಾಟಕದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿದ್ದು, ಬುಧವಾರ (ಕಳೆದ 24 ಗಂಟೆ) 21,390 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇವೇಳೆ ರಾಜ್ಯದಲ್ಲಿ 10 ಮಂದಿ ಮೃತಪಟ್ಟಿದ್ದಾರೆ.
.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣಗೆ ನಾವು ಅನುಮತಿ ನೀಡಿಲ್ಲ ; ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ : ವಿದೇಶಾಂಗ ಸಚಿವಾಲಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement