ಬೆಂಗಳೂರು: ಕರ್ನಾಟಕ ಸೇರಿದಂತೆ ಪಂಜಾಬ್, ಬಿಹಾರ್ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿನ ಕೊವಿಡ್ ಪರಿಸ್ಥಿತಿ ಕುರಿತು ಆ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಾತನಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕಳೆದ ಕೆಲವು ದಿನಗಳಿಂದ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಗವರ್ನರ್ ಗಳೊಂದಿಗೆ ಪ್ರಧಾನಿ ಮೋದಿ ಕೋವಿಡ್ ಪರಿಸ್ಥಿತಿ ಕುರಿತು ಮಾತನಾಡುತ್ತಿದ್ದು, ಸಲಹೆಗಳನ್ನು ನೀಡುತ್ತಿದ್ದಾರೆ ಹಾಗೂ ಅವರಿಂದ ಮಾಹಿತಿ ಪಡೆಯುತ್ತಿದ್ದಾರೆ.
ಕೋವಿಡ್-19 ಎರಡನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮುಖ್ಯಮಂತ್ರಿಗಳು ಪ್ರಧಾನಿಗೆ ಮಾಹಿತಿ ನೀಡುತ್ತಿದ್ದು, ಭಾನುವಾರ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆಯೂ ಮಾತನಾಡಿದ್ದಾರೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,03,738 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗುವುದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 2,22,96,414ಕ್ಕೆ ಏರಿಕೆಯಾಗಿದೆ. 4,092 ಸಾವು ಪ್ರಕರಣಗಳೊಂದಿಗೆ ಒಟ್ಟಾರೇ ಸಾವಿನ ಸಂಖ್ಯೆ 2,42,362 ಆಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ