ನವ ದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,92,488 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಲ್ಲಿ 3,689 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,92,488 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ . ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,95,57,457 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಲ್ಲಿ 3,689 ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮೃತಪಟ್ಟವರ ಸಂಖ್ಯೆ 2,15,542 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 3,07,865 ಕೊರೊನಾ ಸೋಂಕಿತರು ಗುಣಮುಖರಾಗಿದ್ದು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ದೇಶದಲ್ಲಿ 32 ಲಕ್ಷ ಕೊರೊನಾ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ