ಪಟಾಕಿ ಗೋದಾಮಿನಲ್ಲಿ ಸ್ಫೋಟ: 9 ಮಂದಿ ಸಾವು, ಹಲವರಿಗೆ ಗಾಯ

ಚೆನ್ನೈ : ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಪಟಾಕಿ ಸಂಗ್ರಹ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸುಮಾರು 9 ಜನರು ಸಾವಿಗೀಡಾಗಿದ್ದಾರೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಶನಿವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ಮೃತರನ್ನು ಗೋಡೌನ್ ಮಾಲೀಕ ರವಿ, ಅವರ ಪತ್ನಿ ಜಯಶ್ರೀ, ಅವರ ಪುತ್ರಿ ರುತಿಕಾ ಮತ್ತು ಮಗ ರುತೀಶ್ ಎಂದು ಗುರುತಿಸಲಾಗಿದೆ. ಗೋಡೌನ್ ಬಳಿ ರೆಸ್ಟೋರೆಂಟ್ ನಡೆಸುತ್ತಿದ್ದ ರಾಜೇಶ್ವರಿ, ವೆಲ್ಡಿಂಗ್ ಶಾಪ್ ಹೊಂದಿದ್ದ ಇಬ್ರಾಹಿಂ ಮತ್ತು ಇಮ್ರಾನ್, ವಾಟರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸರಸು ಮತ್ತು ಜೇಮ್ಸ್ ಕೂಡ ಪ್ರಾಣ ಕಳೆದುಕೊಂಡಿದ್ದಾರೆ ಎಂದು ದಿ ನ್ಯೂಸ್‌ ಮಿನಿಟ್‌.ಕಾಮ್‌ ವರದಿ ಮಾಡಿದೆ.
ಮಾಹಿತಿ ತಿಳಿದ ತಕ್ಷಣದ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಇದೀಗ ಕುಸಿದ ಕಟ್ಟಡದೊಳಗೆ ಸಿಲುಕಿರುವ ಜನರನ್ನು ರಕ್ಷಿಸುವ ಮತ್ತು ಸ್ಥಳದಿಂದ ಅವಶೇಷಗಳನ್ನು ತೆರವುಗೊಳಿಸುತ್ತಿದ್ದಾರೆ. ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ಕೃಷ್ಣಗಿರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲಾಗಿದೆ.
ರಕ್ಷಣಾ ಕ್ರಮವನ್ನು ಪರಿಶೀಲಿಸುತ್ತಿರುವ ಜಿಲ್ಲಾಧಿಕಾರಿ ಕೆ.ಎಂ.ಸರಯೂ ಅವರು ಟಿಎನ್‌ಎಂ ಕೃಷ್ಣಗಿರಿ ಅವರೊಂದಿಗೆ ಮಾತನಾಡಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಆಕೆಯ ಪ್ರಕಾರ ಈ ಅಪಘಾತದಲ್ಲಿ ಗಾಯಗೊಂಡ 15 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು 5 ಮಂದಿ ಅವಶೇಷಗಳೊಳಗೆ ಸಿಲುಕಿದ್ದು, ಓರ್ವ ವ್ಯಕ್ತಿಯನ್ನು ಜೀವಂತವಾಗಿ ರಕ್ಷಿಸಲಾಗಿದೆ.

ಪ್ರಮುಖ ಸುದ್ದಿ :-   ಚಲಾವಣೆಯಾದ ಒಟ್ಟು ಮತದ ಮಾಹಿತಿ 48 ಗಂಟೆಗಳಲ್ಲಿ ಏಕೆ ವೆಬ್‌ಸೈಟ್‌ನಲ್ಲಿ ಹಾಕುತ್ತಿಲ್ಲ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಪ್ರಶ್ನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement