ಕೇರಳದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳ : ಕರ್ನಾಟಕದ ಆಸ್ಪತ್ರೆಗಳ ಪೂರ್ವ ಸಿದ್ಧತೆ ಪರಿಶೀಲನೆ

ಬೆಂಗಳೂರು: ಕೇರಳದಲ್ಲಿ ಹೊಸ ಕೋವಿಡ್ ಪ್ರಕರಣಗಳ ವರದಿಗಳಿಂದ ಎಚ್ಚೆತ್ತಿಕೊಂಡಿರುವ ಕರ್ನಾಟಕ ಸರ್ಕಾರ ರಾಜ್ಯದಲ್ಲಿನ ಆಸ್ಪತ್ರೆಗಳಲ್ಲಿ ಪೂರ್ವ ಸಿದ್ಧತೆಯನ್ನು ಪರಿಶೀಲಿಸಲು ನಿರ್ಧರಿಸಿದೆ. ಮಂಗಳವಾರ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ ಸಭೆಯನ್ನು ಸರ್ಕಾರ ಕರೆದಿದೆ.
ಶನಿವಾರ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮದ ಮೂಲಕ ಪರೀಕ್ಷಾ ಕಿಟ್‌ಗಳನ್ನು ಖರೀದಿಸಲು ನಿರ್ದೇಶನಗಳನ್ನು ನೀಡಲಾಗಿದೆ.
ಸಭೆಯ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಆರೋಗ್ಯ ಸಚಿವ ದಿನೇಶ ಗುಂಡೂರಾವ್, ಆರ್‌ಟಿ-ಪಿಸಿಆರ್ ಪರೀಕ್ಷೆ, ರಾಪಿಡ್ ಆಂಟಿಜೆನ್ ಪರೀಕ್ಷೆ ಮತ್ತು ವಿಟಿಎಂ (ವೈರಲ್ ಟ್ರಾನ್ಸ್‌ಪೋರ್ಟ್ ಮೀಡಿಯಂ) ಒಳಗೊಂಡಿರುವ ಪರೀಕ್ಷಾ ಕಿಟ್‌ಗಳನ್ನು ಖರೀದಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಐಸಿಯು ಬೆಡ್‌ಗಳು, ಆಮ್ಲಜನಕದ ಲಭ್ಯತೆ ಮತ್ತು ಔಷಧಗಳ ಪರಿಶೀಲನೆ ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲಿ ಪೂರ್ವ ಸಿದ್ಧತೆ ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪರಿಸ್ಥಿತಿ ಆತಂಕಕಾರಿ ಇಲ್ಲ, ಆದರೂ ಅಂತಹ ಪರಿಸ್ಥಿತಿ ಮರುಕಳಿಸಿದರೆ ಎಂದು ಮೊದಲೇ ಸಿದ್ಧವಾಗಿರಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಮಂಗಳವಾರ ಕೋವಿಡ್ ಕುರಿತು ತಾಂತ್ರಿಕ ಸಲಹಾ ಸಮಿತಿ ಸಭೆ ಕರೆಯಲಾಗಿದೆ. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಕೆ.ರವಿ ಮುಖ್ಯಸ್ಥರಾಗಿದ್ದಾರೆ. ಈ ಬಾರಿ ಕೋವಿಡ್ ರೋಗಲಕ್ಷಣ ಇರುವವರಿಗೆ ಮಾತ್ರ ಪರೀಕ್ಷೆ ಮಾಡಲಾಗುವುದು, ಎಲ್ಲರಿಗೂ ಅಲ್ಲ ಎಂದರು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕರಣದ ಹಿಂದೆ ಡಿಕೆ ಶಿವಕುಮಾರ ಕೈವಾಡ : ವಕೀಲ ದೇವರಾಜೇಗೌಡ ಗಂಭೀರ ಆರೋಪ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement