ನಿವೃತ್ತಿಗೂ ಎರಡು ತಿಂಗಳು ಮೊದಲೇ ಐಪಿಎಸ್‌ ಅಧಿಕಾರಿ ಪ್ರತಾಪ ರೆಡ್ಡಿ ದಿಢೀರ್‌ ರಾಜೀನಾಮೆ

ಬೆಂಗಳೂರು : ಕರ್ನಾಟಕದ ಹಿರಿಯ ಐಪಿಎಸ್‌ ಅಧಿಕಾರಿ ಪ್ರತಾಪ ರೆಡ್ಡಿ ಅವರು ನಿವೃತ್ತಿಗೂ ಎರಡು ತಿಂಗಳು ಮೊದಲೇ ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಪ್ರತಾಪ ರೆಡ್ಡಿ ಅವರು ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ವರ್ಷ ಮೇ ತಿಂಗಳಲ್ಲಿ ಅವರು ನಿವೃತ್ತರಾಗುತ್ತಿದ್ದರು. ಆದರೆ, ವೈಯಕ್ತಿಕ ಕಾರಣ ನೀಡಿ ಏಪ್ರಿಲ್ 30ಕ್ಕೆ ತಮ್ಮನ್ನು ಬಿಡುಗಡೆ ಮಾಡಬೇಕು ಎಂದು ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಅವರು ನಿವೃತ್ತಿಗೆ ಮೊದಲೇ ರಾಜೀನಾಮೆ ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ.

ಪ್ರತಾಪ ರೆಡ್ಡಿ ಅವರು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರು. 1964ರ ಜುಲೈ 1ರಲ್ಲಿ ಜನಿಸಿದ ಅವರು ಬಿ.ಟೆಕ್ ಪದವೀಧರರು. 1991ರಲ್ಲಿ ಕರ್ನಾಟಕ ಕೆಡರ್‌ ಐಪಿಎಸ್‌ ಅಧಿಕಾರಿಯಾಗಿ ಸೇರ್ಪಡೆಯಾದರು. ಉತ್ತರ ಕರ್ನಾಟಕ ಭಾಗದಲ್ಲಿ ಎಸ್‌ಪಿಯಾಗಿ, ಸಿಐಡಿಯಾಗಿ ಹಲವಾರು ಮಹತ್ವದ ಪ್ರಕರಣಗಳನ್ನು ಭೇದಿಸಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿದ್ದ ಅವರನ್ನು ಕಮಲ ಪಂತ್ ಅವರ ಬಳಿಕ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕವಾಗಿದ್ದರು. ಪ್ರತಾಪ​ ರೆಡ್ಡಿ ಅವರು ರಾಷ್ಟ್ರಪತಿ ಪದಕ ಮತ್ತು ಮುಖ್ಯಮಂತ್ರಿ ಪದಕ ಪಡೆದಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಪ್ರದೇಶಗಳೂ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement