ಶನಿವಾರ ಒಂದೇ ದಿನ ರಾಜ್ಯದಲ್ಲಿ 104 ಜನರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶನಿವಾರ ಒಂದೇ ದಿನ 104 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 104 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 40,89,356ಕ್ಕೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಶನಿವಾರ 8 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಬೆಂಗಳೂರಿನಲ್ಲಿಯೇ ಬರೊಬ್ಬರಿ 85 ಜನರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಇದರೊಂದಿಗೆ ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 234ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ಪ್ರಮಾಣ ಶೇಕಡಾ 5.93ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement