ಮಂಗಳೂರು : ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ

ಮಂಗಳೂರು : ಕಾಂಗ್ರೆಸ್ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಐವನ್​ ಡಿಸೋಜಾ ಅವರ ಮನೆ ಮೇಲೆ ಬುಧವಾರ ರಾತ್ರಿ ಕಲ್ಲು ತೂರಾಟ ನಡೆಸಲಾಗಿದೆ.
ಬುಧವಾರ ರಾತ್ರಿ ಸುಮಾರು 11 ಗಂಟೆಗೆ ಘಟನೆ ನಡೆದಿದೆ ಎನ್ನಲಾಗಿದಗ್ದು, ಈ ವೇಳೆ ಐವನ್ ಡಿಸೋಜಾ ಬೆಂಗಳೂರಿನಲ್ಲಿ ಪಕ್ಷದ ಸಭೆಗೆ ಹೋಗಿದ್ದರು. ಸುಮಾರು 5 ರಿಂದ 6 ಜನರ ಗುಂಪು ರಾತ್ರಿ 11ರ ಸುಮಾರಿಗೆ ನಗರದ ವೆಲೆನ್ಸಿಯದಲ್ಲಿರುವ ಐವನ್ ಡಿಸೋಜಾ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಘೋಷಣೆಗಳನ್ನು ಕೂಗಿ ಬಳಿಕ ಪರಾರಿಯಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸುತ್ತಿದ್ದಾರೆ.
ಇತ್ತೀಚೆಗೆ ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದನ್ನು ಖಂಡಿಸಿ ಕಾಂಗ್ರೆಸ್‌ ವತಿಯಿಂದ ನಡೆದ​ ಪ್ರತಿಭಟನೆಯಲ್ಲಿ ಐವನ್ ಡಿಸೋಜ ಅವರು, ಬಾಂಗ್ಲಾ ಪ್ರಧಾನಿಗಾದ ಪರಿಸ್ಥಿತಿ ರಾಜ್ಯಪಾಲರಿಗೂ ಬರಬಹುದು ಎಂದು ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಬಿಜೆಪಿ ಕಾರ್ಯಕರ್ತರು ಐವನ್‌ ಡಿಸೋಜಾ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೂರು ನೀಡಿದ್ದರು. ಇದರ ಬೆನ್ನಲ್ಲೇ ಈ ಘಟನೆ ನಡೆದಿದೆ.

ಪ್ರಮುಖ ಸುದ್ದಿ :-   ಸೋನಿಯಾ ಗಾಂಧಿಗೆ ಸಿದ್ದರಾಮಯ್ಯರನ್ನು ಪರಿಚಯಿಸಿದ್ದೇ ನಾನು, ಲಾಟರಿ ಹೊಡೆದ್ರು ಸಿಎಂ ಆದ್ರು ; ಬಿ.ಆರ್. ಪಾಟೀಲ ಫೋನ್ ಕರೆ ಲೀಕ್‌

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement