ಇಂದು (ಜುಲೈ 18) ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲೆ-ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರ (ಜುಲೈ 18) ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಎಲ್ಲ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳಿಗೆ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ (12 ನೇ ತರಗತಿಯವರೆಗೆ) ರಜೆ ಘೋಷಿಸಲಾಗಿದೆ.
ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ಈ ಐದು ತಾಲೂಕುಗಳಿಗೆ ರಜೆ ಘೋಷೊಸಲಾಗಿದೆ. ಆದರೆ ಮಂಗಳೂರು, ಉಳ್ಳಾಲ, ಮೂಡುಬಿದಿರೆ, ಮುಲ್ಕಿ ಭಾಗದ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ.
ಸಂಭಾವ್ಯ ಪ್ರವಾಹ ಮತ್ತು ಭೂಕುಸಿತ ಪೀಡಿತ ಪ್ರದೇಶಗಳನ್ನು ಗುರುತಿಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.ಸಾರ್ವಜನಿಕರು ಮತ್ತು ಪ್ರವಾಸಿಗರು ನೀರು, ಸರೋವರಗಳು, ನದಿ ದಡಗಳು ಮತ್ತು ಕಡಲತೀರಗಳಿರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ. ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement