ಕಾರ್ಕಳ : ಪರಶುರಾಮ ಥೀಮ್‌ ಪಾರ್ಕ್‌ ಕಾಮಗಾರಿ ಸಿಐಡಿ ತನಿಖೆಗೆ

ಉಡುಪಿ : ಜಿಲ್ಲೆಯ ಕಾರ್ಕಳದ ಬೈಲೂರಿನಲ್ಲಿ ನಿರ್ಮಿಸಿದ್ದ ಪರಶುರಾಮ ಥೀಮ್ ಪಾರ್ಕ್ ಹಗರಣವನ್ನುಸಿಒಡಿ ತನಿಖೆಗೆ ವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರ ಶಿಫಾರಸ್ಸಿನ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.
ಪರಶುರಾಮ ಥೀಮ್ ಪಾರ್ಕ್ ಹಗರಣದ ಕುರಿತು ಹೋರಾಟಗಳು ಪ್ರತಿಭಟನೆಗಳು ನಡೆದಿದ್ದವು. ಕಾಂಗ್ರೆಸ್ ಕಾರ್ಯಕರ್ತರು ಈ ಹಗರಣದ ಬಗ್ಗೆ ಸಿಐಡಿ ತನಿಖೆಗೆ ಒತ್ತಾಯಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವರಾದ ಫೆ. 2ರಂದು ಲಕ್ಷ್ಮೀ ಹೆಬ್ಬಾಳ್ಕರ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.

ಪರಶುರಾಮ ಥೀಮ್ ಪಾರ್ಕ್ ಒಟ್ಟಾರೆ 11.54 ಕೋಟಿ ರೂ.ವೆಚ್ಚದ ಯೋಜನೆಯಾಗಿದ್ದು ಬಿಜೆಪಿ ಅವಧಿಯಲ್ಲಿ ನಿರ್ಮಾಣವಾಗಿದ್ದ ಥೀಮ್‌ ಪಾರ್ಕ್
ಸಮುದ್ರ ಮಟ್ಟದಿಂದ 500 ಮೀಟರ್ ಎತ್ತರದಲ್ಲಿ ಇರುವ ಈ ಬೈಲೂರಿನ ಉಮಿಕ್ಕಳ ಬೆಟ್ಟದಲ್ಲಿ ಥೀಮ್‌ ಪಾರ್ಕ್‌ ನಿರ್ಮಾಣವಾಗಿದ್ದು, ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಮಾಣ ಮಾಡಲಾಗಿತ್ತು. ಆ ಗುಡ್ಡದ ಮೇಲೆ 33 ಅಡಿ ಎತ್ತರದ ಪರಶುರಾಮರ ಕಂಚಿನ ಪ್ರತಿಮೆ ನಿರ್ಮಾಣ ಮಾಡಲಾಗಿತ್ತು. ಆದರೆ, ಆ ಪ್ರತಿಮೆಯ ಕೆಲವು ಭಾಗವನ್ನು ಫೈಬರ್‌ನಲ್ಲಿ ಮಾಡಿರುವ ಬಗ್ಗೆ ಆರೋಪ ಕೇಳಿಬಂದಿತ್ತು ಹಾಗೂ ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಆಗ್ರಹಗಳು ಕೇಳಿ ಬಂದಿದ್ದವು.

ಪ್ರಮುಖ ಸುದ್ದಿ :-   ಎಸ್‌ಐಟಿ ನೋಟಿಸ್​: ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ಪ್ರಜ್ವಲ್‌ ; ಪತ್ರದಲ್ಲೇನಿದೆ..?

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement