ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ ; ದರೋಡೆಕೋರನ ಕಾಲಿಗೆ ಗುಂಡೇಟು

ಗದಗ: ಪೊಲೀಸರ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ದರೋಡೆಕೋರನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ​​ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಮತ್ತು ಡೋಣಿ ಗ್ರಾಮದಲ್ಲಿ ನಡೆದಿದೆ.
ಆರೋಪಿ ಜಯಸಿಂಹ ಮೊಡಕೆರ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಆರೋಪಿ ಜಯಸಿಂಹ ಮೊಡಕೆರನನ್ನು ಕರೆತರುವಾಗ ಈ ಘಟನೆ ನಡೆದಿದೆ. ಎಂದು ಹೇಳಲಾಗಿದ್ದು, ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಬಂಧಿಸುವಾಗ ಪೊಲೀಸರಿಗೂ ಗಾಯಗಳಾಗಿವೆ. ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಆರೋಪಿಗಳಾದ ಜಯಸಿಂಹ ಮೊಡಕೆರ, ಮಂಜುನಾಥ ಮೊಡಕೆರ ಅಂತಾರಾಜ್ಯ ಪೊಲೀಸರಿಗೆ ಬೇಕಾಗಿದ್ದ ದರೋಡೆಕೋರರಾಗಿದ್ದಾರೆ. ಭಾನುವಾರ ವಿಜಯನಗರ ಜಿಲ್ಲೆಯ ಸಮೀಪ ಜಯಸಿಂಹನನ್ನು ವಶಕ್ಕೆ ಪಡೆಯಲಾಗಿತ್ತು. ಆತನನ್ನು  ಠಾಣೆಗೆ ಕರೆದುಕೊಂಡು ಬರುತ್ತಿರುವಾಗ ಕೈಗೆ ಹಾಕಿದ್ದ ಬೇಡಿಯಿಂದ ಪೊಲೀಸ್ ವಾಹನದಲ್ಲಿದ್ದ ಸಿಬ್ಬಂದಿ ವೀರೇಶ ಬಿಸ್ನಳ್ಳಿ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಸಿಪಿಐ ಮಂಜುನಾಥ ಕುಸುಗಲ್​​​ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಮನೆ ಕಳ್ಳತನ, ದರೋಡೆ ಸೇರಿ ಹಲವು ಪ್ರಕರಣಗಳಲ್ಲಿ ಈ ದರೋಡೆಕೋರರು ಭಾಗಿಯಾದ ಆರೋಪವಿದೆ.

ಪ್ರಮುಖ ಸುದ್ದಿ :-   ಜೈಲಿನಲ್ಲಿ ಸುಹಾಸ ಶೆಟ್ಟಿ ಕೊಲೆಯ ಪ್ರಮುಖ ಆರೋಪಿ ಮೇಲೆ ಸಹಕೈದಿಗಳಿಂದ ಹಲ್ಲೆ ಯತ್ನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement