ಮೇಕೆದಾಟು ಯೋಜನೆ: ಶೀಘ್ರದಲ್ಲೇ ಸರ್ವ ಪಕ್ಷ ಸಭೆ ಕರೆಯುವೆ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ಮತ್ತು ತಮಿಳುನಾಡು ನಡುವೆ ವಿವಾದಕ್ಕೆ ಕಾರಣವಾಗಿರುವ ಮೇಕೆದಾಟು ಅಣೆಕಟ್ಟು ಕುರಿತು ಶೀಘ್ರದಲ್ಲಿ ಸರ್ವ ಪಕ್ಷ ಸಭೆ ಆಯೋಜಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.
ರಾಜ್ಯದ ನೆಲ ಮತ್ತು ಜಲಕ್ಕೆ ಸಂಬಂಧಿಸಿದ ಸಮಸ್ಯೆಗೆ ಬಂದಾಗ ಎಲ್ಲ ರಾಜಕೀಯ ಪಕ್ಷಗಳು ಒಂದಾಗಬೇಕು, ಪ್ರತಿಯೊಬ್ಬರನ್ನು ಜೊತೆಗೆ ತೆಗೆದುಕೊಂಡು ಮುಂದಿನ ಪ್ರಕ್ರಿಯೆ ಕೈಗೊಳ್ಳಲಾಗುವುದು, ಮುಂದಿನ ದಿನಗಳಲ್ಲಿ ಸರ್ಕಾರ ಸರ್ವಪಕ್ಷಗಳ ಸಭೆ ಆಯೋಜಿಸಲಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಈ ವಿಚಾರದಲ್ಲಿ ಜೆಡಿಎಸ್ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೋರಾಟವನ್ನು ಅರಿತಿರುವುದಾಗಿ ತಿಳಿಸಿದರು.
400 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಜೊತೆಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವುದಕ್ಕಾಗಿ 4.75 ಟಿಎಂಸಿ ನೀರನ್ನು ಬಳಸಿಕೊಳ್ಳುವ ಉದ್ದೇಶದೊಂದಿಗೆ ರಾಮನಗರ ಜಿಲ್ಲೆ ಮೇಕೆದಾಟುವಿನಲ್ಲಿ 9 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಜಲಾಶಯ ನಿರ್ಮಿಸಲು ಕರ್ನಾಟಕ ಸರ್ಕಾರ ಈಗಾಗಲೇ ವಿಸ್ಕೃತ ಯೋಜನಾ ವರದಿಯನ್ನು ತಯಾರಿಸಲಾಗಿದ್ದು, ಕೇಂದ್ರ ಸರ್ಕಾರದ ಅನುಮೋದನೆಯನ್ನು ಎದುರು ನೋಡುತ್ತಿದೆ.
ಮೇಕೆದಾಟು ಅಣೆಕಟ್ಟು ಕೆಲಸಗಳು ಆರಂಭಿಸುತ್ತಿರುವುದಾಗಿ ಕರ್ನಾಟಕ ಹೇಳುತ್ತಿದ್ದಂತೆ ಉಭಯ ರಾಜ್ಯಗಳ ನಡುವಣ ವಿವಾದ ತಲೆದೋರಿತು. ಯೋಜನೆ ವಿರುದ್ಧ ತಮಿಳುನಾಡು ಮತ್ತು ಪುದುಚೇರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಪ್ರತಿಭಟನೆ ವ್ಯಕ್ತವಾಗುತ್ತಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಎಲ್ಲರೆದುರು ಸರ್ಪಕ್ಕೆ ಮುತ್ತಿಕ್ಕಿದ ಭೂಪ...ಆದ್ರೆ ನಂತರ ಆದದ್ದೇ ಬೇರೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement