
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಭೂ ಕುಸಿತ ಪ್ರಕರಣವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಅದರಡಿ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಕೋರಿದ್ದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಸ್ಪಂದಿಸಿದ್ದಾರೆ.
ಕಾಗೇರಿ ಪತ್ರಕ್ಕೆ ಸ್ಪಂದಿಸಿರುವ ಪ್ರಧಾನಿ ಮೋದಿ ಶಿರೂರು ಗುಡ್ಡ ಕುಸಿತ ಪ್ರಕರಣವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಸಂತ್ರಸ್ತರಿಗೆ ವಿಶೇಷ ಅನುದಾನ ಬಿಡುಗಡೆಗೆ ಮೋದಿ ಅನುಮೋದನೆ ನೀಡಿದ್ದಾರೆ.
ಈ ಬಗ್ಗೆ ಪತ್ರದ ಮೂಲಕ ಮಾಹಿತಿ ನೀಡಿರುವ ಪ್ರಧಾನಿ ಮೋದಿ, ನೊಂದವರಿಗೆ ಹೆಚ್ಚಿನ ನೆರವು ಒದಗಿಸಲು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯ ಅಡಿಯಲ್ಲಿ ವಿಶೇಷ ಅನುದಾನ ಮಂಜೂರಿಯಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ನೆವು ಹಾಗೂ ಬೆಂಬಲ ನೀಡುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. ಹಾಗೂ ನನ್ನ ಆಲೋಚನೆ ಹಾಗೂ ಪ್ರಾರ್ಥನೆ ತೊಂದರೆಗೆ ಒಳಗಾದವರ ಜೊತೆ ಇದೆ ಎಂದು ಹೇಳಿದ್ದಾರೆ.
ಸಂಸದ ಕಾಗೇರಿ ಪ್ರಧಾನಿ ಮೋದಿಗೆ ಈ ಬಗ್ಗೆ ಪತ್ರ ಬರೆದು ನೆರವಿನ ಮನವಿ ಮಾಡಿದ್ದರು.ಇದಕ್ಕೆ ಪ್ರಧಾನಿ ಸ್ಪಂದಿಸಿದ್ದಾರೆ.



ನಿಮ್ಮ ಕಾಮೆಂಟ್ ಬರೆಯಿರಿ