ಕರ್ನಾಟಕದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ: ಸಿಎಂ ಬೊಮ್ಮಾಯಿ ತಮ್ಮನ್ನು ಭೇಟಿಯಾದ ನಂತರ ಪ್ರಧಾನಿ ಮೋದಿ ಟ್ವೀಟ್

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ ಬಸವರಾಜ ಬೊಮ್ಮಾಯಿ ಇದೇ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿದ್ದಾರೆ.
ಮುಖ್ಯಮಂತ್ರಿ ಬೊಮ್ಮಾಯಿ ಭೇಟಿಯ ಬಳಿಕ ಪ್ರಧಾನಿ ಮೋದಿ ಟ್ವೀಟ್ ಮೂಲಕ ಅಭಿನಂದನೆ ಅವರಿಗೆ ತಿಳಿಸಿದ್ದಾರೆ.
ಕರ್ನಾಟಕ ಮುನ್ನಡೆಸುವುದಕ್ಕಾಗಿ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ಭೇಟಿಯ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಕರ್ನಾಟಕದ ಅಭಿವೃದ್ಧಿಯ ಹೊಸಪಯಣಕ್ಕೆ ಶುಭಾಶಯ ಕೋರಿದ್ದೇನೆ. ಕರ್ನಾಟಕಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದೇನೆ ಎಂದು ಪ್ರಧಾನಿ ಮೋದುವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದರು. ಬಳಿಕ ಸಚಿವ ಜೋಶಿ ನಿವಾಸಕ್ಕೆ ಬೊಮ್ಮಾಯಿ ಆಗಮಿಸಿದ್ದರು.
ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿದ್ದಾರೆ. ದೆಹಲಿಯ ಜೆ.ಪಿ.ನಡ್ಡಾ ನಿವಾಸದಲ್ಲಿ ಅವರನ್ನು ಭೇಟಿಯಾಗಿದ್ದಾರೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

ನಾಯಕರ ಭೇಟಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತಮವಾಗಿ ಆಡಳಿತ ನಡೆಸಿ, ಪಕ್ಷ, ಜನರ ನಿರೀಕ್ಷೆಗೆ ತಕ್ಕಂತೆ ಸರ್ಕಾರ ನಡೆಯಲಿ. ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯ, ರಾಜ್ಯದ ಯೋಜನೆಗಳಿಗೆ ಸಹಾಯ ಹಸ್ತ ಚಾಚುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಿ ಮೋದಿ ಸಹಕಾರದ ಭರವಸೆ ನೀಡಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದರು.

ಕೇಂದ್ರದ ಯೋಜನೆಗಳನ್ನು ಜನರಿಗೆ ಮುಟ್ಟಿಸಬೇಕು. ಮುಂದಿನ ಚುನಾವಣೆಗಳಿಗೆ ಸಿದ್ಧರಾಗಿರಬೇಕು ಎಂದು ವರಿಷ್ಠರು ಸೂಚಿಸಿದ್ದಾರೆ. ಗ್ರಾಮೀಣ ಪ್ರದೇಶ ಮತ್ತು ರೈತರಿಗಾಗಿ ಹಲವು ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಜಾರಿಗೆ ತಂದ ಯೋಜನೆಗಳನ್ನು ಯಶಸ್ವಿಗೊಳಿಸುವಲ್ಲಿ ಕೆಲಸ ಮಾಡಬೇಕು. ಕೇಂದ್ರ ಮತ್ತು ರಾಜ್ಯದ ಸಹಕಾರದೊಂದಿಗೆ ಯೋಜನೆ ಜನರಿಗೆ ತಲುಪಿಸಬೇಕು ಎಂದು ತಿಳಿಸಿದ್ದಾರೆ ಎಂದರು.

ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಕೃಷ್ಣ ಮೇಲ್ದಂಡೆ ಯೋಜನೆ ಎರಡನೇ ಹಂತದ ಯೋಜನೆಗೆ ಮನವಿ ಮಾಡಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆ ಕೇಂದ್ರದ ಯೋಜನೆಯಾಗಿ ಪರಿಗಣಿಸಬೇಕು. ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಬೇಕೆಂದು ಮನವಿ ಮಾಡುವುದಾಗಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

ಅಮಿತ್ ಶಾ ಹಾಗೂ ಕೇಂದ್ರ ನಾಯಕರು ಪಕ್ಷ ಸಂಘಟನೆಗೂ ಒತ್ತು ನೀಡಿ, ಉತ್ತಮವಾಗಿ ಕೆಲಸ ಮಾಡಿ ಎಂದು ತಿಳಿಸಿದ್ದು, ರಾಜ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ನೆರವಿನ ಭರವಸೆ ನೀಡಿದ್ದಾರೆ ಎಂದರು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement