ಮುರುಘಾ ಶರಣರ ನ್ಯಾಯಾಂಗ ಬಂಧನ ಅಕ್ಟೋಬರ್‌ 10ರ ವರೆಗೆ ವಿಸ್ತರಣೆ

ಚಿತ್ರದುರ್ಗ: ಮಠದ ಹಾಸ್ಟೆಲ್‌ನಲ್ಲಿ ವಾಸವಿದ್ದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಪೋಕ್ಸೊ ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣದ ಅಡಿ ಬಂಧಿತರಾಗಿರುವ ಶಿವಮೂರ್ತಿ ಮುರುಘಾ ಶರಣರು ಹಾಗೂ ಹಾಸ್ಟೆಲ್‌ ವಾರ್ಡನ್‌ ಎಸ್‌. ರಶ್ಮಿ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಚಿತ್ರದುರ್ಗದ ವಿಶೇಷ ನ್ಯಾಯಾಲಯವು ಮಂಗಳವಾರ ಆದೇಶಿಸಿದೆ.
ಸೆಪ್ಟೆಂಬರ್‌ 14ರಂದು ವಿಧಿಸಿದ್ದ ನ್ಯಾಯಾಂಗ ಬಂಧನ ಇಂದು, ಮಂಗಳವಾರ ಮುಕ್ತಾಯವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಧೀಶರಾದ ಬಿ. ಕೆ. ಕೋಮಲ ಅವರ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ಆರೋಪಿಗಳನ್ನು ಅಕ್ಟೋಬರ್‌ 10ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಸೆಪ್ಟೆಂಬರ್‌ 1ರಂದು ಬಂಧನಕ್ಕೊಳಗಾಗಿದ್ದ ಮುರುಘಾ ಶರಣರನ್ನು ಆರಂಭದಲ್ಲಿ ನ್ಯಾಯಾಲಯ ತನಿಖೆಗಾಗಿ ನಾಲ್ಕು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿತ್ತು. ಆನಂತರ ಸೆಪ್ಟೆಂಬರ್‌ 5ರಿಂದ 14ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಬಳಿಕ ಮತ್ತೆ ಸೆಪ್ಟೆಂಬರ್‌ 27ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಈಗ ಮತ್ತೊಮ್ಮೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement