ಮಾಜಿ ಶಾಸಕ ಎಸ್.ಕೆ.ಬಸವರಾಜನ್ ದಂಪತಿಗೆ ಜಾಮೀನು

ಚಿತ್ರದುರ್ಗ: ಅತ್ಯಾಚಾರ ಯತ್ನದ ದೂರಿನಲ್ಲಿ ಮಾಜಿ ಶಾಸಕ ಎಸ್ ಕೆ ಬಸವರಾಜನ್ ಹಾಗೂ ಪತ್ನಿ ಸೌಭಾಗ್ಯ ಅವರಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್‌ ನ್ಯಾಯಾಲಯದ ಇಂದು, ಗುರುವಾರ ಜಾಮೀನು ಮಂಜೂರು ಮಾಡಿದೆ.
ಮುರುಘಾ ಮಠದ ಆಡಳಿತಾಧಿಕಾರಿಯಾಗಿದ್ದ ಎಸ್. ಕೆ. ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ವಿರುದ್ಧ ಹಾಸ್ಟೆಲ್ ವಾರ್ಡನ್ ಅತ್ಯಾಚಾರ ಯತ್ನದ ಪ್ರಕರಣ ದಾಖಲಿಸಿದ್ದರು. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದೂರು ದಾಖಲಾಗಿತ್ತು.
ಎಸ್ ಕೆ ಬಸವರಾಜನ್ ಪರ ವಕೀಲರು ಪ್ರಕರಣದಲ್ಲಿ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು ಇಬ್ಬರಿಗೂ ಜಾಮೀನು ಮಂಜೂರು ಮಾಡಿದೆ. ಕೋರ್ಟ್‌ ಜಾಮೀನು ನೀಡಿದ್ದರಿಂದ ಆರೋಪಿಗಳು ಸದ್ಯಕ್ಕೆ ಬಂಧನ ಭೀತಿಯಿಂದ ಪಾರಾಗಿದ್ದಾರೆ.

3 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಎಸ್‌ಐಆರ್‌-2026 ಅಂತಿಮ ಪಟ್ಟಿ ಪ್ರಕಟ ; ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 11,39,623 ಮತದಾರರು

ನಿಮ್ಮ ಕಾಮೆಂಟ್ ಬರೆಯಿರಿ

advertisement