ಬೆಂಗಳೂರು: ಪುಣ್ಯಕೋಟಿ ದತ್ತು ಯೋಜನೆಗೆ ಸಹಕಾರ ನೀಡುವ ನಿಟ್ಟಿನಲ್ಲಿ ಒಂದು ದಿನದ ವೇತನ ನೀಡಲು ಸರ್ಕಾರಿ ನೌಕರರು ನಿರ್ಧರಿಸಿದ್ದಾರೆ. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಈ ನಿರ್ಧಾರ ಪ್ರಕಟಿಸಿದ್ದಾರೆ.
ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸರ್ಕಾರಿ ನೌಕರರ ಸಂಘದವರು ಭೇಟಿ ಮಾಡಿದ ಸಂದರ್ಭದಲ್ಲಿ ಪುಣ್ಯಕೋಟಿ ದತ್ತು ಯೋಜನೆಗೆ ಮುಖ್ಯಮಂತ್ರಿ ಬೊಮ್ಮಾಯಿ ಈ ಬಗ್ಗೆ ಸಹಕಾರ ಕೋರಿದ್ದಾರೆ. ಇದಕ್ಕೆ ಸ್ಪಂದಿಸಿದ ನೌಕರ ಸಂಘ ಒಂದು ದಿನದ ವೇತನ ನೀಡಲು ನಿರ್ಧಾರ ಮಾಡಿದೆ.
ಸಂಘದ ಅಧ್ಯಕ್ಷ ಷಡಕ್ಷರಿ ಈ ಬಗ್ಗೆ ಮಾತನಾಡಿ, ಮುಖ್ಯಮಂತ್ರಿಗಳು ಪುಣ್ಯಕೋಟಿ ದತ್ತು ಯೋಜನೆಗೆ ಸಹಕಾರ ಕೋರಿದ್ದಾರೆ. ನಿರ್ಗತಿಕ ಹಸುಗಳ ರಕ್ಷಣೆಗೆ ಹಾಗೂ ಗೋಶಾಲೆಯಲ್ಲಿ. ಸುಮಾರು 60ರಿಂದ 70 ಸಾವಿರ ಹಸುಗಳಿವೆ. ಎಲ್ಲಾ ನೌಕರರ ಸಂಘದ ಅಧಿಕಾರಿಗಳು ಸೇರಿ ಚರ್ಚೆ ಮಾಡಿ ಈ ಯೋಜನೆಗೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.
ಮುಂದಿನ ತಿಂಗಳಲ್ಲಿ ಅಥವಾ ಡಿಸೆಂಬರ್ ತಿಂಗಳಲ್ಲಿ ವೇತನ ಹಣ ಕಡಿತ ಮಾಡಿಕೊಳ್ಳಲು ಮನವಿ ಮಾಡಿದ್ದೇವೆ. ಗ್ರೂಪ್ ಸಿ 400, ಗ್ರೂಪ್ ಬಿ 4ಸಾವಿರ, ಎ ವೃಂದದ ಅಧಿಕಾರಿಗಳಿಂದ 11ಸಾವಿರ ಹಣ ಕೊಡಲು ನಿರ್ಧಾರ ಮಾಡಲಾಗಿದ್ದು. ಈ ಮೂಲಕ 80 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ಗೋವುಗಳ ಸಂರಕ್ಷಣೆಗೆ ನೀಡಲಿದ್ದೇವೆ ಎಂದು ತಿಳಿಸಿದರು.
ಸರ್ಕಾರಿ ನೌಕರರಿಗೆ ವೇತನ ಆಯೋಗ ರಚನೆ ಮಾಡುವ ಬಗ್ಗೆ ಪ್ರಸ್ತಾವನೆ ಮಾಡಿದ್ದಾರೆ. ಇದರಿಂದ ರಾಜ್ಯ ಸರ್ಕಾರಿ ನೌಕರರು ಖುಷಿಯಾಗಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸ್ತೇನೆ ಎಂದರು.
ನಿಮ್ಮ ಕಾಮೆಂಟ್ ಬರೆಯಿರಿ