ಮಳೆ ಅಬ್ಬರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಎಡಬಿಡದೆ ಭಾರಿ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ, ಅಂಗನವಾಡಿಗಳಿಗೆ ನಾಳೆ ಜುಲೈ 6ರಂದು ಸಹ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರ ಆದೇಶದಂತೆ ಇಂದು, ಮಂಗಳವಾರ ರಜೆ ಘೋಷಣೆ ಮಾಡಲಾಗಿತ್ತು. ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಮುಂದುವರೆಯುತ್ತಿರುವುದರಿಂದ ನಾಳೆ ಬುಧವಾರ ಸಹ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

 

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಜಗತ್ತಿಗೆ ಹೇಳುವ ಮೊದಲೇ ಪಾಕಿಸ್ತಾನಕ್ಕೆ ತಿಳಿಸಿದ್ದೆ ; ಬಾಲಾಕೋಟ್ ಸ್ಟ್ರೈಕ್ ಬಗ್ಗೆ ಬಿಚ್ಚಿಟ್ಟ ಪ್ರಧಾನಿ ಮೋದಿ

ನಿಮ್ಮ ಕಾಮೆಂಟ್ ಬರೆಯಿರಿ

advertisement