ಕ್ಷಮೆಯಾಚಿಸುವೆ ಎಂದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ; ಪ್ರಕರಣವನ್ನು ಸಹಾನುಭೂತಿಯಿಂದ ಪರಿಗಣಿಸಿ ಎಂದು ರಾಜ್ಯಸಭಾ ಚೇರ್ಮನ್‌ ಗೆ ಸುಪ್ರೀಂ ಕೋರ್ಟ್‌ ಸಲಹೆ

ನವದೆಹಲಿ: ನಕಲಿ ಸಹಿ ಆರೋಪದ ಪ್ರಕರಣದಲ್ಲಿ ರಾಜ್ಯಸಭಾ ಚೇರ್ಮನ್‌ ಜಗದೀಪ ಧನಕರ ಅವರನ್ನು ಬೇಷರತ್ ಕ್ಷಮೆಯಾಚಿಸುವುದಾಗಿ ರಾಜ್ಯಸಭೆಯಿಂದ ಅಮಾನತುಗೊಂಡಿರುವ ಸದಸ್ಯ ರಾಜೀವ ಚಡ್ಡಾ ಸುಪ್ರೀಂ ಕೋರ್ಟ್‌ಗೆ ಶುಕ್ರವಾರ ತಿಳಿಸಿದ್ದಾರೆ.
ದೆಹಲಿ ಸೇವೆಗಳ ಮಸೂದೆಯ ಕುರಿತಾಗಿ ಅಧ್ಯಯನ ನಡೆಸಲು ಸ್ಥಾಯಿ ಸಮಿತಿಯೊಂದನ್ನು ರಚಿಸಬೇಕು ಎಂದು ಒತ್ತಾಯಿಸಿ ನಿರ್ಣಯ ಮಂಡಿಸಲು ರಾಘವ ಚಡ್ಡಾ ಅವರು ಐವರು ರಾಜ್ಯಸಭಾ ಸದಸ್ಯರ ಸಮ್ಮತಿ ಪಡೆಯದೆ ಅವರ ಸಹಿ ನಕಲು ಮಾಡಿದ್ದರು ಎನ್ನುವ ಆರೋಪವನ್ನು ಎದುರಿಸುತ್ತಿದ್ದಾರೆ.
ಸದನದ ಅತ್ಯಂತ ಕಿರಿಯ ಸದಸ್ಯನಾದ ತಾನು ಕ್ಷಮೆ ಯಾಚಿಸುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಚಡ್ಡಾ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಸದನದ ಘನತೆಗೆ ಧಕ್ಕೆ ತರುವ ಉದ್ದೇಶ ಚಡ್ಡಾ ಅವರಿಗೆ ಇರಲಿಲ್ಲ ಎಂದು ಹೇಳಿಕೆ ಸಲ್ಲಿಸಲಾಗಿದೆ ಎಂದಿರುವ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ ಮಿಶ್ರಾ ಅವರನ್ನೊಳಗೊಂಡ ಪೀಠವು “ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಸದನದ ಕಿರಿಯ ಸದಸ್ಯರರಾದ ಚಡ್ಡಾ ಅವರ ಕ್ಷಮೆಯಾಚನೆಯನ್ನು ಪ್ರಕರಣದ ಸನ್ನಿವೇಶದ ಹಿನ್ನೆಲೆಯಲ್ಲಿ ರಾಜ್ಯಸಭೆಯ ಸಭಾಧ್ಯಕ್ಷರು ಸಹಾನುಭೂತಿಯಿಂದ ಪರಿಗಣಿಸಬೇಕು” ಎಂದು ರಾಜ್ಯಸಭಾ ಚೇರ್ಮನ್‌ ಅವರಿಗೆ ಜಗದೀಶ ಧನಕರ ಅವರಿಗೆ ಸಲಹೆ ನೀಡಿದೆ.

ಪ್ರಮುಖ ಸುದ್ದಿ :-   ಕೋವಿಡ್ ಲಸಿಕೆಗಳಿಗೂ ಹೃದಯಾಘಾತದ ಸಾವುಗಳಿಗೂ ಯಾವುದೇ ಸಂಬಂಧವಿಲ್ಲ; ತಳ್ಳಿಹಾಕಿದ ಏಮ್ಸ್ ವೈದ್ಯರು

ದೀಪಾವಳಿ ರಜೆಯ ನಂತರ ಪ್ರಕರಣದ ವಿಚಾರಣೆ ನಡೆಯಲಿದ್ದು, ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಮತ್ತು ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ಪ್ರಕರಣದ ಬೆಳವಣಿಗೆಗಳನ್ನು ನ್ಯಾಯಾಲಯಕ್ಕೆ ತಿಳಿಸಲು ಸೂಚಿಸಲಾಗಿದೆ. ಚಡ್ಡಾ ಪರವಾಗಿ ಶಾದನ್‌ ಫರಾಸತ್‌ ವಾದ ಮಂಡಿಸಿದರು.
ರಾಜ್ಯಸಭೆಯಿಂದ ತಮ್ಮ ಅಮಾನತು ಪ್ರಶ್ನಿಸಿ ಚಡ್ಡಾ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ದೆಹಲಿ ಸೇವೆಗಳ ಮಸೂದೆಯ ಕುರಿತಾಗಿ ಅಧ್ಯಯನ ನಡೆಸಲು ಸ್ಥಾಯಿ ಸಮಿತಿಯೊಂದನ್ನು ರಚಿಸಬೇಕು ಎಂದು ಒತ್ತಾಯಿಸಿ ನಿರ್ಣಯ ಮಂಡಿಸಲು ಚಡ್ಡಾ ಅವರು ಐವರು ರಾಜ್ಯಸಭಾ ಸದಸ್ಯರ ಸಹಿಯನ್ನು ನಕಲು ಮಾಡಿದ್ದರು ಎಂಬ ಆರೋಪ ಅವರ ವಿರುದ್ಧ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಆಗಸ್ಟ್ 11ರಂದು ಸಂಸತ್ತಿನ ಮೇಲ್ಮನೆಯಿಂದ ಅಮಾನತುಗೊಳಿಸಲಾಗಿತ್ತು.
ತಮ್ಮ ಅಮಾನತು ರಾಜ್ಯಗಳ ಪರಿಷತ್‌ (ರಾಜ್ಯಸಭೆ) ಕಾರ್ಯವಿಧಾನ ಮತ್ತು ನಡಾವಳಿ ನಿಯಮಾವಳಿಗಳ ಮತ್ತು ಸಂವಿಧಾನದ 14 ಮತ್ತು 21ನೇ ವಿಧಿಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಚಡ್ಡಾ ವಾದಿಸಿದ್ದರು.

ಪ್ರಮುಖ ಸುದ್ದಿ :-   ವೀಡಿಯೊ...| "ನಮಗೆ ಪ್ರತಿಕ್ರಿಯಿಸಲು 30-45 ಸೆಕೆಂಡುಗಳು ಮಾತ್ರ ಸಮಯ ಇತ್ತು": ಭಾರತದ ಬ್ರಹ್ಮೋಸ್ ಕ್ಷಿಪಣಿ ದಾಳಿ ಬಗ್ಗೆ ಪಾಕ್ ಪ್ರಧಾನಿ ಸಲಹೆಗಾರ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement