ಚೆನ್ನೈ: ಭಾರೀ ಮಳೆ, ನವೆಂಬರ್‌ 30 ರಂದು ಶಾಲೆಗಳಿಗೆ ರಜೆ

ಚೆನ್ನೈ: ಭಾರೀ ಮಳೆಯಿಂದಾಗಿ ನಗರದ ಕೆಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿರುವುದರಿಂದ ಗುರುವಾರ (ನವೆಂಬರ್‌ 30) ಚೆನ್ನೈನಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ (IMD) ಡಿಸೆಂಬರ್ 2 ಮತ್ತು 3 ರಂದು ಚೆನ್ನೈ ಮತ್ತು ಅದರ ನೆರೆಯ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಭಾರೀ ಮಳೆಯಾಗುವ ಸಾಧ್ಯತೆಯನ್ನು ಸೂಚಿಸಿದೆ. ಹವಾಮಾನ ಇಲಾಖೆ ಪ್ರಕಾರ, ತಮಿಳುನಾಡಿನ ತಿರುವಳ್ಳೂರು, ಕಾಂಚೀಪುರಂ, ಚೆನ್ನೈ, ಚೆಂಗಲ್ಪಟ್ಟು, ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ನಾಗಪಟ್ಟಿಣಂ, ತಿರುವರೂರ್, ತಂಜಾವೂರು, ಪುದುಕ್ಕೊಟ್ಟೈ, ರಾಮನಾಥಪುರಂ ಮತ್ತು ತೂತುಕುಡಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುರುವಾರದಿಂದ ಸತತ ಮೂರು ದಿನಗಳ ವರೆಗೆಭಾರೀ ಮಳೆಯಾಗುವ ಸಾಧ್ಯತೆಯಿದೆ.

ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ (RMC) ಮುಂದಿನ ಕೆಲವು ದಿನಗಳಲ್ಲಿ ವಿಶೇಷವಾಗಿ ಡಿಸೆಂಬರ್ 2 ರಿಂದ 4 ರವರೆಗೆ ಹೆಚ್ಚು ತೀವ್ರ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ. ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ದಕ್ಷಿಣ ಅಂಡಮಾನ್ ಸಮುದ್ರದ ಮೇಲೆ ರೂಪುಗೊಂಡಿರುವ ಕಡಿಮೆ ಒತ್ತಡದ ಪ್ರದೇಶವನ್ನು IMD ಗಮನಿಸಿದೆ, ಇದು ಕೆಲವೇ ದಿನಗಳಲ್ಲಿ ಚಂಡಮಾರುತವಾಗಿ ಕೇಂದ್ರೀಕೃತವಾಗುವ ನಿರೀಕ್ಷೆಯಿದೆ.
ಚೆನ್ನೈ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಭಾರೀ ಮಳೆಯ ನಡುವೆ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಅಧಿಕಾರಿಗಳು, ಸಚಿವರು, ಶಾಸಕರು ಮತ್ತು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಗೆ ಮಳೆ ಪೀಡಿತ ಪ್ರದೇಶಗಳಲ್ಲಿನ ಜನರಿಗೆ ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಸೂಚಿಸಿದ್ದಾರೆ.
ಗ್ರೇಟರ್ ಚೆನ್ನೈ ಕಾರ್ಪೊರೇಷನ್ (GCC) ಭಾರೀ ಮಳೆ ಮತ್ತು ಹವಾಮಾನ ಮುನ್ಸೂಚನೆಯನ್ನು ಪರಿಗಣಿಸಿ, ಪಾಲಿಕೆ ನಿವಾಸಿಗಳಿಗೆ ಮನೆಯೊಳಗೆ ಇರುವಂತೆ ಸೂಚಿಸಿದೆ. ಸಮುದ್ರದ ಪರಿಸ್ಥಿತಿಯು ಅತ್ಯಂತ ಪ್ರಕ್ಷುಬ್ಧ’ವಾಗುವ ಸಾಧ್ಯತೆಯಿರುವುದರಿಂದ ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಪ್ರಮುಖ ಸುದ್ದಿ :-   ರೋಹಿತ್ ವೇಮುಲಾ ದಲಿತನಲ್ಲ : ಪೊಲೀಸರ ಅಂತಿಮ ವರದಿ ; ಎಲ್ಲ ಆರೋಪಿಗಳಿಗೆ ಕ್ಲೀನ್ ಚಿಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement