ವಯನಾಡಿನಲ್ಲಿ ರಾಹುಲ್‌ ಗಾಂಧಿಗೆ ಶಾಕ್‌ ನೀಡಿದ ಬಿಜೆಪಿ : ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿಜೆಪಿಗೆ ಸೇರ್ಪಡೆ

ತಿರುವನಂತಪುರಂ: ಲೋಕಸಭೆ ಚುನಾವಣೆಗೆ ಮುಂಚಿತವಾಗಿ ರಾಹುಲ್‌ ಗಾಂಧಿ ಸ್ಪರ್ಧಿಸಿರುವ ಕೇರಳದ ವಯನಾಡ್‌ನಲ್ಲಿ ಕಾಂಗ್ರೆಸ್ಸಿಗೆ ಬಿಜೆಪಿ ಬಿಗ್‌ ಶಾಕ್‌ ನೀಡಿದೆ.
ನಿರ್ಣಾಯಕ ಲೋಕಸಭೆ ಸ್ಪರ್ಧೆಗೆ ಮುಂಚಿತವಾಗಿ ಹಿನ್ನಡೆಯಾಗಿ, ವಯನಾಡ್ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಪ್ರಧಾನ ಕಾರ್ಯದರ್ಶಿ ಪಿಎಂ ಸುಧಾಕರನ್ ಅವರು ಕಾಂಗ್ರೆಸ್‌ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದ್ದಾರೆ.
ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಸುಧಾಕರನ್, ನನಗೆ ರಾಹುಲ್‌ ಗಾಂಧಿ ಲಭ್ಯವಾಗದೇ ಇರುವಾಗ ಜನಸಾಮಾನ್ಯರಿಗೆ ಅವರು ಸಿಗಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ರಾಹುಲ್‌ ಗಾಂಧಿ  ಅವರನ್ನು ಐದು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ. ಅವರಿಗೆ ಇನ್ನೊಂದು ಅವಧಿ ನೀಡಿದರೆ, ಅದು ವಯನಾಡಿನ ಅಭಿವೃದ್ಧಿ ಭವಿಷ್ಯ ಹಾಳಾಗುತ್ತದೆ” ಎಂದು ಸುಧಾಕರನ್ ಹೇಳಿದರು. ಪ್ರಧಾನಿ ನರೇಂದ್ರ ಮೋದಿಅವರ ಅಭಿವೃದ್ಧಿಯ ದೃಷ್ಟಿಕೋನವನ್ನು ಮೆಚ್ಚಿದ ಸುಧಾಕರನ್, ಕೇರಳದ ಬಿಜೆಪಿ ಮುಖ್ಯಸ್ಥ ಸುರೇಂದ್ರನ್‌ ಅವರು ವಯನಾಡ್ ಲೋಕಸಭಾ ಕ್ಷೇತ್ರದಿಂದ ಜಯಗಳಿಸಬೇಕೆಂದು ನಾನು ಬಯಸುತ್ತೇನೆ ಎಂದು ಹೇಳಿದರು.

ಎಡಪಕ್ಷಗಳ ವಿರೋಧದ ನಡುವೆಯೂ ರಾಹುಲ್ ಗಾಂಧಿ ಎರಡನೇ ಬಾರಿ ವಯನಾಡಿನಿಂದ ಸ್ಪರ್ಧಿಸುತ್ತಿದ್ದಾರೆ. ಎಡ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಬಿಜೆಪಿ ವಿರುದ್ಧದವಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬಣದ ಭಾಗವಾಗಿದೆ, ಆದರೆ ಈ ಎರಡೂ ಪಕ್ಷಗಳು ಕೇರಳದಲ್ಲಿ ಪರಸ್ಪರರ ವಿರುದ್ಧ ಸ್ಪರ್ಧಿಸುತ್ತಿವೆ.
2019ರಲ್ಲಿ ಅಮೇಥಿಯಿಂದ ಸೋತಂತೆ ರಾಹುಲ್‌ ಗಾಂಧಿ ಈ ಬಾರಿ ವಯನಾಡ್‌ ನಿಂದಲೂ ಸೋಲನುಭವಿಸಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಮುಖ ಸುದ್ದಿ :-   ಭಾಗವತ ಕಥಾ ನಾಟಕದಲ್ಲಿ ರಾಕ್ಷಸನ ಪಾತ್ರ ಮಾಡಿದ್ದ ಬಾಲಕನ ಕತ್ತು ಸೀಳಿದ ಕಾಳಿದೇವಿ ಪಾತ್ರ ಮಾಡಿದ್ದ ಮತ್ತೊಬ್ಬ ಬಾಲಕ...!

 

 

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement