ರೇಣುಕಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿಗೆ ಮತ್ತೆ ಕೋರ್ಟ್ ಒಪ್ಪಿಗೆ, ದರ್ಶನ್ ಅರ್ಜಿ ವಜಾ

ಬೆಂಗಳೂರು : ನಟ ದರ್ಶನ್‌ ಆರೋಪಿಯಾಗಿರುವ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೋಷ್‌ ರಾವ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿ ಬೆಂಗಳೂರಿನ 59ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಬುಧವಾರ ಮತ್ತೆ ಹೊಸದಾಗಿ ಆದೇಶ ಮಾಡಿದೆ.
ಪ್ರಕರಣದಲ್ಲಿ ಕ್ಷಮಾದಾನ ನೀಡಬೇಕು ಹಾಗೂ ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಬೇಕು ಎಂದು ಕೋರಿ ಪ್ರದೋಷ್‌ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಧೀಶರಾದ ಸುಜಾತಾ ಸಾಂಬ್ರಾಣಿ ಅವರು ಈ ಆದೇಶ ಮಾಡಿದ್ದಾರೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.
ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಕೋರಿರುವ ಪ್ರದೋಷ್‌ ಅರ್ಜಿಯ ತೀರ್ಪು ಪ್ರಕಟ ಮಾಡುವುದನ್ನು ತಡೆಹಿಡಿಯಬೇಕು ಎಂದು ಕೋರಿ ದರ್ಶನ್‌ ಸಲ್ಲಿಸಿದ್ದ ಅರಿಯನ್ನು ನ್ಯಾಯಾಲಯವು ವಜಾಗೊಳಿಸಿದೆ. ಹಾಗೂ  ಪ್ರದೋಷ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿ ಆದೇಶಿಸಿದೆ. ಇದರಿಂದ ದರ್ಶನ್‌ ಮತ್ತೆ ಆಘಾತ ಎದುರಾಗಿದೆ.
 ಪ್ರದೋಷ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿ 2026ರ ಆಗಸ್ಟ್‌ 25ರಂದು ಇದೇ ನ್ಯಾಯಾಲಯ ಆದೇಶಿಸಿತ್ತು. ಆದರೆ, ಈ ಆದೇಶ ಪ್ರಶ್ನಿಸಿ ದರ್ಶನ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು, ಪ್ರದೋಷನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವ ಮುನ್ನ ಪ್ರೊಬೆಷನ್‌ ಅಧಿಕಾರಿಯಿಂದ ವರದಿ ಪಡೆದ ಸತ್ರ ನ್ಯಾಯಾಲಯದ ಕ್ರಮ ಸರಿಯಿಲ್ಲ. ಇದು ಪ್ರಕ್ರಿಯಾತ್ಮಕ ಲೋಪವಾಗಿದೆ. ಇದರಿಂದ ಪ್ರೊಬೆಷನ್‌ ಅಧಿಕಾರಿಯಿಂದ ವರದಿ ಪಡೆದ ಸೀಮಿತವಾಗಿ ಪ್ರದೂಷನ್‌ ಅನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿದ ಆದೇಶವನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದ್ದ ಹೈಕೋರ್ಟ್‌, ಪ್ರಕರಣ ಸಂಬಂಧ ಹೊಸದಾಗಿ ಆದೇಶ ಮಾಡಬೇಕು. ಆದರೆ, ಹೊರತು ಮತ್ತೆ ವಿಚಾರಣೆ ನಡೆಸಬಾರದು ಎಂದು  ಸೆಪ್ಟೆಂಬರ್‌ 8ರಂದು ಸತ್ರ ನ್ಯಾಯಾಲಯಕ್ಕೆ ಸೂಚಿಸಿತ್ತು. ಅದರಂತೆ ಬುಧವಾರ ಹೊಸದಾಗಿ ಆದೇಶ ಮಾಡಿದ ಸತ್ರ ನ್ಯಾಯಾಲಯವು ಪ್ರದೋಷ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿದೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement