ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಿಗೆ ಜುಲೈ 13ರಿಂದ ಮತ್ತೆ ಮಳೆ ಆರ್ಭಟ ಹೆಚ್ಚಾಗಲಿದೆ. ರಾಜ್ಯದ ಕರಾವಳಿ ಹಾಗೂ ಪಶ್ಚಿಮ ಘಟ್ಟದ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಭಾರಿಯಿಂದ ಅತಿ ಭಾರಿ ಮಳೆಯ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಿಗೆ ಜುಲೈ 13 ಹಾಗೂ 14 ರಂದು ರೆಡ್ ಅಲರ್ಟ್ ನೀಡಿದ್ದರೆ ಜುಲೈ 15 ಹಾಗೂ 16ರಂದು ಆರೇಂಜ್ ಅಲರ್ಟ್ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಜುಲೈ 13ರಿಂದ 16ರ ವರೆಗೆ ನಾಲ್ಕು ದಿನ ಆರೇಂಜ್ ಅಲರ್ಟ್ ನೀಡಿದೆ.
ಜುಲೈ 13ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಮೇಲೆ ಗಾಳಿಯ ವೇಗ (40-50 kmph) ತಲುಪುವ ಸಾಧ್ಯತೆಯಿದೆ. ಭಾರಿಯಿಂದ ಅತಿ ಭಾರಿ ಮಳೆ ಬೀಳುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗಾಳಿಯ ವೇಗ (40-50 kmph) ತಲುಪುವ ಸಾಧ್ಯತೆಯಿರುವ ಗಾಳಿಯ ವೇಗದಿಂದ ಅತಿ ಹೆಚ್ಚು ಭಾರಿ ಮಳೆ ಬೀಳುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಗಾಳಿಯ ವೇಗ (30-40 ಕಿಮೀ) ತಲುಪುವ ಸಾಧ್ಯತೆಯಿದ್ದು ಗುಡುಗು ಸಹಿತ ಸಾಧಾರಣ ಮಳೆಯ ಸಾಧ್ಯತೆ ಇದೆ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಹಲವೆಡೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆಯಿದೆ.
ಜುಲೈ 14ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮೇಲೆ ಗಾಳಿಯಿಂದ ಕೂಡಿದ (40-50 kmph) ಭಾರಿಯಿಂದ ಮತ್ತು ಅತಿ ಭಾರಿ ಮಳೆ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗಾಳಿಯಿಂದ ಕೂಡಿದ (40-50 kmph) ಅತಿ ಹೆಚ್ಚು ಭಾರಿ ಮಳೆ ಸಾಧ್ಯತೆಯಿದೆ. ಹಾಸನ, ಚಿತ್ರದುರ್ಗ, ಮೈಸೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಸ್ಥಳಗಳಲ್ಲಿ ಗಾಳಿಯಿಂದ (40-50 kmph) ಕೂಡಿದ ಭಾರಿ ಮಳೆ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಯಾದಗಿರಿ, ರಾಯಚೂರು, ಕಲಬುರ್ಗಿ ಜಿಲ್ಲೆಗಳ ಪ್ರತ್ಯೇಕವಾದ ಸ್ಥಳಗಳಲ್ಲಿ ಗಾಳಿಯಿಂದ (40-50 kmph) ಕೂಡಿದ ಭಾರಿ ಮಳೆ ಸಾಧ್ಯತೆಯಿದೆ.
ಜುಲೈ 15ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಗಾಳಿಯ ವೇಗ (30-40 kmph) ತಲುಪುವ ಸಾಧ್ಯತೆಯಿರುವ ಭಾರಿ ಮತ್ತು ಅತಿ ಭಾರಿ ಮಳೆ ಸಾಧ್ಯತೆಯಿದೆ. ವಿಜಯನಗರ, ದಾವಣಗೆರೆ, ತುಮಕೂರು, ಮೈಸೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಸ್ಥಳಗಳಲ್ಲಿ ಭಾರೀ ಮಳೆ ಸಾಧ್ಯತೆಯಿದೆ.
ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಕಲಬುರ್ಗಿ ಜಿಲ್ಲೆಗಳಲ್ಲಿ ಗಾಳಿಯ ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ದಕ್ಷಿಣ ಒಳನಾಡಿನ ಕರ್ನಾಟಕದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆ ಸಾಧ್ಯತೆಯಿದೆ.
ಜುಲೈ 16ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮತ್ತು ಅತಿ ಭಾರೀ ಮಳೆ ಸಾಧ್ಯತೆ ಇದೆ.ಹಾಸನ, ದಾವಣಗೆರೆ ಜಿಲ್ಲೆಗಳ ಪ್ರತ್ಯೇಕವಾದ ಸ್ಥಳಗಳಲ್ಲಿ ಭಾರೀ ಮಳೆ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಸ್ಥಳಗಳಲ್ಲಿ ಭಾರೀ ಮಳೆ ಸಾಧ್ಯತೆ ಹಾಗೂ ಬಾಗಲಕೋಟೆ, ಬೀದರ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆಯಿದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿಹಗುರದಿಂದ ಸಾಧಾರಣ ಮಳೆ ಸಾಧ್ಯತೆಯಿದೆ.


ನಿಮ್ಮ ಕಾಮೆಂಟ್ ಬರೆಯಿರಿ