ಕರ್ನಾಟಕದಲ್ಲಿ ಗುರುವಾರ ಕೊರೊನಾ ದೈನಂದಿನ ಸೋಂಕು ಹೆಚ್ಚಳ..!

ಬೆಂಗಳೂರು: ಕಳೆದ ಕೆಲ ದಿನಗಳಿಂದ ಇಳಿಕೆಯ ಹಾದಿಯಲ್ಲಿದ್ದ ಹೊಸ ಕೊರೋನಾ ಸೋಂಕಿನ ಸಂಖ್ಯೆ ಗುರುವಾರ ಮತ್ತೆ ಏರಿಕೆಯಾಗಿದೆ. ಗುರುವಾರ ರಾಜ್ಯದಲ್ಲಿ ಎರಡು ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ.
ಒಂದೇ ದಿನದಲ್ಲಿ ಹೊಸದಾಗಿ 2052 ಜನರಿಗೆ ಸೋಂಕು ದೃಢಪಟ್ಟಿದ್ದು, 35 ಮಂದಿ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 1332 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಸದ್ಯ 23,253 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 1.37 ರಷ್ಟು ಇದೆ. ಒಟ್ಟು ಸೋಂಕಿತರ ಸಂಖ್ಯೆ 29,01, 247 ಕ್ಕೆ ಏರಿಕೆಯಾಗಿದೆ. ಇದುವರೆಗೆ 28,41,479 ಜನ ಗುಣಮುಖರಾಗಿದ್ದಾರೆ. 36,491 ಸೋಂಕಿತರು ಮೃತಪಟ್ಟಿದ್ದಾರೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

29-07-2021 HMB Kannada

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

ನಿಮ್ಮ ಕಾಮೆಂಟ್ ಬರೆಯಿರಿ

advertisement