ಇಂದಿನ ರಾಜಕಾರಣ ಅಷ್ಟೊಂದು ಚೆನ್ನಾಗಿಲ್ಲ, ರಾಜಕೀಯ ಸಾಕಾಗಿದೆ : ಸಂಸದ ಡಿ.ಕೆ.ಸುರೇಶ

ರಾಮನಗರ : ಮುಂಬರುವ ಲೋಕಸಭಾ ಚುನಾವಣೆಗೆ ನಿಲ್ಲುವ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಕಾರ್ಯಕರ್ತರು, ಮುಖಂಡರ ಸಲಹೆ ಪಡೆದ ನಂತರ ನಿರ್ಧಾರ ತೆಗೆದುಕೊಳ್ಳುತ್ತೇನೆ. ಯಾರೂ ಸೂಕ್ತ ಎಂದು ಅವರು ತೀರ್ಮಾನ ಮಾಡಿದರೆ ಅವರಿಗೆ ಬೆಂಬಲ ನೀಡುತ್ತೇನೆ. ರಾಜಕೀಯ ಸಾಕಾಗಿದೆ ಎಂದು ಸಂಸದ ಡಿ.ಕೆ. ಸುರೇಶ ಹೇಳಿದ್ದಾರೆ.
ರಾಮನಗರದಲ್ಲಿ ಮಾತನಾಡಿದ ಅವರು, ರಾಜಕಾರಣ ಅಷ್ಟೊಂದು ಚೆನ್ನಾಗಿಲ್ಲ, ರಾಜಕೀಯ ಸಾಕಾಗಿದೆ. ಹಾಗಾಗಿ ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು ಎನ್ನುವುದು ನನ್ನ ಉದ್ದೇಶ ಎಂದ ಅವರು, ಅಧಿಕಾರದ ದಾಹ ಇರುವವರಿಗೆ ರಾಜಕೀಯ ಬೇಕಾಗುತ್ತದೆ. ಆದರೆ ನನಗಿರುವುದು ಅಭಿವೃದ್ದಿಯ ದಾಹ, ಈ ಕೆಲಸ ಮಾಡುವವರಿಗೆ ನನ್ನ ಬೆಂಬಲವಿದೆ. ಹೀಗಾಗಿ ಬೇರೆಯವರಿಗೆ ಅವಕಾಶ ನೀಡುವುದು ನನ್ನ ಉದ್ದೇಶ ಎಂದವರು ಹೇಳಿದರು.
ಇತ್ತೀಚಿಗಷ್ಟೆ ತಮ್ಮ ಚುನಾವಣಾ ರಾಜಕೀಯದ ಬಗ್ಗೆ ಮಾತನಾಡಿದ್ದ ಸುರೇಶ ಅವರು, ಹಾಲಿ ರಾಜಕಾರಣದ ಶೈಲಿ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು. ಆಗಲೂ ನನಗೆ ರಾಜಕಾರಣ ಸಾಕೆನಿಸಿಬಿಟ್ಟಿದೆ ಎನ್ನುವ ಮೂಲಕ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ಸುಳಿವು ನೀಡಿದ್ದರು. ಇಂದು, ಶನಿವಾರ ಮತ್ತೆ ಅದೇ ವಿಚಾರ ಪ್ರಸ್ತಾಪಿಸಿದ್ದಾರೆ.

ಪ್ರಮುಖ ಸುದ್ದಿ :-   ಹಣಕ್ಕಾಗಿ ಆನಂದ ಗುರೂಜಿಗೆ ಬ್ಲ್ಯಾಕ್ ಮೇಲ್ ಆರೋಪ ; ಇಬ್ಬರ ವಿರುದ್ಧ ದೂರು ದಾಖಲು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement