ಆಕ್ರೋಶಕ್ಕೆ ಮಣಿದ ಸರ್ಕಾರ : ದೇವಸ್ಥಾನಗಳ ಅನುದಾನಕ್ಕೆ ತಡೆ ನೀಡಿದ್ದ ಆದೇಶ ವಾಪಸ್

ಬೆಂಗಳೂರು : ದೇವಸ್ಥಾನಗಳ ಅಭಿವೃದ್ಧಿ, ಜೀರ್ಣೋದ್ಧಾರ ಅನುದಾನ ತಡೆ ಹಿಡಿದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಮೂರು ವಿಷಯಗಳನ್ನು ಮುಂದಿಟ್ಟು ಮುಜರಾಯಿ ಇಲಾಖೆ ದೇವಸ್ಥಾನಗಳ ಜೀರ್ಣೋದ್ದಾರಕ್ಕೆ ಅನುದಾನ ತಡೆ ಹಿಡಿದಿತ್ತು. ಇದರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾದ ನಂತರ ಸರ್ಕಾರ ದಿಢೀರ್ ಆದೇಶ ಹಿಂಪಡೆದಿದೆ. ಈ ಕುರಿತು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ದೇಗುಲಗಳ ಅನುದಾನಕ್ಕೆ ತಡೆ ನೀಡಿದ್ದ ಆದೇಶ ವಾಪಸ್ ಪಡೆಯುವಂತೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಯಾವ ದೇವಸ್ಥಾನದ ಕೆಲಸಕ್ಕೂ ಅನುದಾನ ನಿಲ್ಲಿಸುವುದಿಲ್ಲ. ಸ್ಟೇಟಸ್ ರಿಪೋರ್ಟ್ ಕೇಳಿದ್ದನ್ನು ಇಲಾಖೆಯ ಆಯುಕ್ತರು ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದು ಸಮಜಾಯಿಷಿ ನೀಡಿದ್ದಾರೆ.
ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿ ಪ್ರಾರಂಭ ಆಗದಿದ್ದರೆ ಹಣ ಬಿಡುಗಡೆ ಮಾಡದಂತೆ ಧಾರ್ಮಿಕ ದತ್ತಿ ಇಲಾಖೆ ಆದೇಶದಲ್ಲಿ ಸೂಚಿಸಿತ್ತು. ಅಲ್ಲದೆ, ಶೇ‌.50 ರಷ್ಟು ಹಣ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದರೆ ಅದನ್ನು ತಕ್ಷಣ ತಡೆ ಹಿಡಿದು, ಅನುದಾನ ಬಿಡುಗಡೆ ಮಾಡದಂತೆ ಉಲ್ಲೇಖಿಸಲಾಗಿತ್ತು. ಹಾಗೂ ಅನುದಾನದ ಆಡಳಿತಾತ್ಮಕ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದರೆ ಆಡಳಿತಾತ್ಮಕ ಮಂಜೂರಾತಿ ತಡೆಹಿಡಿಯಲು ಸೂಚಿಸಲಾಗಿತ್ತು. ಇದಕ್ಕೆ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಆದೇಶ ಹಿಂಪಡೆಯಲಾಗಿದೆ.

ಪ್ರಮುಖ ಸುದ್ದಿ :-   ಇನ್ಮುಂದೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್‌, ನೀರಿನ ಸಂಪರ್ಕ; ಬಿಬಿಎಂಪಿ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement